ಜಾಗೀರ್ದಾರ್*

666 ಆಪರೇಷನ್ ಡ್ರೀಮ್ ಥಿಯೇಟರ್.. ಬಹು ನಿರೀಕ್ಷಿತ ಸಿನಿಮಾಗಳಲ್ಲೊಂದು. ಹೇಮಂತ್ ರಾವ್ ಸಾರಥ್ಯದಲ್ಲಿ ಮೂಡಿ ಬರುತ್ತಿರುವ ಈ ಚಿತ್ರದ ಮೇಲೆ ನಿರೀಕ್ಷೆ ದುಪ್ಪಟ್ಟಿದೆ. ಒಂದು ಹೇಮಂತ್ ಡೈರೆಕ್ಷನ್ ಹಾಗೂ ಶಿವಣ್ಣ-ಧನಂಜಯ್ ಮತ್ತೆ ಒಂದಾಗಿರುವುದು.

ಟಗರು ಜೋಡಿಯ ಹೊಸ ಪ್ರಾಜೆಕ್ಟ್ 666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾ ಪೋಸ್ಟರ್ ಮೂಲಕವೇ ಪ್ರೇಕ್ಷಕರ ವಲಯದಲ್ಲಿ ಕುತೂಹಲ ಹೆಚ್ಚಿಸಿದೆ. ರೆಟ್ರೋ ಲುಕ್ ನಲ್ಲಿ ಶಿವಣ್ಣ ಹಾಗೂ ಧನಂಜಯ್ ಕಾಣಿಸಿಕೊಂಡಿದ್ದು, ಈ ಲುಕ್ ನೋಡುತ್ತಿದ್ದರೆ ಡಾ. ರಾಜ್ಕುಮಾರ್ ಅವರ ಸ್ಪೈ ಸಿನಿಮಾಗಳು ನೆನಪಾಗುತ್ತವೆ. ಸದ್ಯ ಚಿತ್ರತಂಡ ಮೊದಲ ಹಂತದ ಚಿತ್ರೀಕರಣ ಮುಗಿಸಿ, ಎರಡನೇ ಹಂತಕ್ಕೆ ಸಜ್ಜಾಗುತ್ತಿದೆ.

ಫಸ್ಟ್ ಶೆಡ್ಯುಲ್ಡ್ ಶೂಟಿಂಗ್ ನಲ್ಲಿ ಶಿವಣ್ಣ ಹಾಗೂ ಧನಂಜಯ್ ಭಾಗಿಯಾಗಿದ್ದರು. ಇದೀಗ ಇದೇ ತಿಂಗಳಲ್ಲಿ ಎರಡನೇ ಹಂತದ ಚಿತ್ರೀಕರಣ ಆರಂಭಿಸಲು ಚಿತ್ರತಂಡ ಸಜ್ಜಾಗಿದೆ. ಅದಕ್ಕಾಗಿ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಅದ್ಧೂರಿ ಸೆಟ್ ಹಾಕಲಾಗಿದೆ. ಕಂಠೀರವ ಸ್ಟುಡಿಯೋದಲ್ಲಿ ಹಾಕಲಾಗಿರುವ ಬೃಹತ್ ಆಕಾರದ ಸೆಟ್ ನಲ್ಲಿ‌ ಬರೋಬ್ಬರಿ 100 ದಿನಗಳ ಕಾಲ ಶೂಟಿಂಗ್ ನಡೆಸಲಾಗುವುದು.

ಸೆಟ್‌ ಬಗ್ಗೆ ಮಾತನಾಡಿದ ನಿರ್ಮಾಪಕ ಡಾ. ವೈಶಾಕ್ ಜೆ ಗೌಡ, '666 ಆಪರೇಷನ್ ಡ್ರೀಮ್ ಥಿಯೇಟರ್ ಬಗ್ಗೆ ಎಲ್ಲವನ್ನೂ ಹೇಮಂತ್ ಎಂ ರಾವ್ ಮತ್ತು ಅವರ ತಂಡ ಎಚ್ಚರಿಕೆಯಿಂದ ನೋಡಿಕೊಳ್ಳುತ್ತಿದೆ. ನಾವು ಇಂದಿನ ಪೀಳಿಗೆಯನ್ನು ಬೆರಗುಗೊಳಿಸುವ ಮತ್ತು ಹಿಂದಿನ ಪೀಳಿಗೆಯನ್ನು ನೆನಪಿನ ಹಾದಿಯಲ್ಲಿ ಕರೆದೊಯ್ಯುವ ಜಗತ್ತನ್ನು ರಚಿಸಲು ಪ್ರಯತ್ನಿಸುತ್ತಿದ್ದೇವೆ. ಯಾವ ಸೆಟ್‌ಗಳನ್ನು ನಿರ್ಮಿಸಲಾಗುತ್ತಿದೆ ಎಂಬುದನ್ನು ನಾನು ಬಹಿರಂಗಪಡಿಸಲು ಸಾಧ್ಯವಾಗುವುದಿಲ್ಲ. ಪ್ರೇಕ್ಷಕರು ದೊಡ್ಡ ಪರದೆಯ ಮೇಲೆ ಅನುಭವಿಸಬಹುದಾದ ವಿಷಯ ಅದು. ದೊಡ್ಡ ಪ್ರಮಾಣದಲ್ಲಿ ಚಿತ್ರವನ್ನು ಕಟ್ಟಿಕೊಡಲಾಗುತ್ತಿದೆ. ಈ ಕುರಿತ ಮತ್ತಷ್ಟು ಅಪ್ ಡೇಟ್ ಶೀಘ್ರದಲ್ಲೇ ನೀಡುತ್ತೇವೆ' ಎಂದು ಹೇಳಿದ್ದಾರೆ.

ಧನಂಜಯ್ ಹಾಗೂ ಶಿವರಾಜ್ ಕುಮಾರ್ ಅವರು ‘666 ಆಪರೇಷನ್ ಡ್ರೀಮ್ ಥಿಯೇಟರ್' ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ವೈಶಾಕ್ ಜೆ. ಗೌಡ ಅವರ ‘ವೈಶಾಕ್ ಜೆ. ಫಿಲ್ಮ್ಸ್’ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ನಿರ್ಮಿಸಲಾಗುತ್ತಿದೆ. ಚರಣ್ ರಾಜ್ ಸಂಗೀತ ನಿರ್ದೇಶನ, ಅದ್ವೈತ ಗುರುಮೂರ್ತಿ ಅವರ ಛಾಯಾಗ್ರಹಣ ಈ ಸಿನಿಮಾಗಿದೆ.ವಿಶ್ವಾಸ್ ಕಶ್ಯಪ್ ಕಲಾ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ.

 

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ