- ರಾಘವೇಂದ್ರ ಅಡಿಗ ಎಚ್ಚೆನ್.

ಝಾಂಬಿ ಡ್ರಗ್ ಸೇವನೆ ಎಂಬ ಹೆಸರಿನಲ್ಲಿ ವೈರಲ್ ಆಗುತ್ತಿರುವ ವಿಡಿಯೋ ಕುರಿತು ತಪ್ಪು ಮಾಹಿತಿ ಹಂಚಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವೈರಲ್ ಆಗಿರುವ ವಿಡಿಯೋದಲ್ಲಿರುವ ಯುವಕನನ್ನು ವೈದ್ಯಕೀಯವಾಗಿ ಪರೀಕ್ಷಿಸಲಾಗಿದ್ದು, ಆತ ಯಾವುದೇ ಝಾಂಬಿ ಡ್ರಗ್ ಸೇವಿಸಿಲ್ಲ ಎಂದು ಸ್ಪಷ್ಟಪಡಿಸಿದರು. ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿದ ವ್ಯಕ್ತಿಯನ್ನು ಈಗಾಗಲೇ ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಬಾಗಲೂರು ಪೊಲೀಸರು ವಿಡಿಯೋ ಅಪ್ಲೋಡ್ ಮಾಡಿದ ವ್ಯಕ್ತಿಯನ್ನು ಬಂಧಿಸಿದ್ದು, ಆತ ಕ್ಷಮೆಯಾಚಿಸಿ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ್ದಾನೆ. ಈ ವಿಡಿಯೋವನ್ನು ಹಂಚಿಕೊಂಡವರಿಗೂ ನೋಟಿಸ್ ನೀಡಲಾಗುವುದು ಎಂದು ಹೇಳಿದರು.
ತಪ್ಪು ಮಾಹಿತಿ ಹಂಚಿದರೆ ಕ್ರಮ
ಆಧಾರರಹಿತ ಮಾಹಿತಿಯನ್ನು ಹಂಚುವುದು ಗಂಭೀರ ಅಪರಾಧವಾಗಿದ್ದು, ಇಂತಹ ಪ್ರಕರಣಗಳಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸ್ ಆಯುಕ್ತರು ಎಚ್ಚರಿಸಿದ್ದಾರೆ. ಮೆಡಿಕಲ್ ವರದಿ ಆಧಾರದ ಮೇಲೆ ಮಾತ್ರ ಅಭಿಪ್ರಾಯ ವ್ಯಕ್ತಪಡಿಸಬೇಕು, ಯಾರೊಬ್ಬರ ಮೇಲೂ ಅಪಪ್ರಚಾರ ಮಾಡಬಾರದು ಎಂದು ಹೇಳಿದರು.
ವಿದೇಶಗಳಲ್ಲಿ ಇರುವ ಡ್ರಗ್ ಬಳಕೆಯ ಉದಾಹರಣೆಯನ್ನು ಉಲ್ಲೇಖಿಸಿ ಈ ವಿಡಿಯೋ ಅಪ್ಲೋಡ್ ಮಾಡಲಾಗಿದೆ ಎಂದು ತಿಳಿದುಬಂದಿದ್ದು, ಸಂಬಂಧಿಸಿದ ವ್ಯಕ್ತಿಯನ್ನು ವಿಚಾರಣೆ ನಡೆಸಲಾಗುತ್ತಿದೆ.
ಇದಲ್ಲದೆ, ನಟ Duniya Vijay ಮತ್ತು ನಿವೃತ್ತ ಪೊಲೀಸ್ ಆಯುಕ್ತ Bhaskar Rao ಸೇರಿದಂತೆ ಹಲವರು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಪ್ರಾರಂಭಿಕ ಹಂತದಲ್ಲಿ ಸುಮಾರು 25 ಮಂದಿಗೆ ನೋಟಿಸ್ ನೀಡುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ