ಮಲಯಾಳಂ ಖ್ಯಾತ ನಟರ ಸುತ್ತ ವಿದೇಶಿ ವಾಹನ ಕಳ್ಳಸಾಗಾಣೆ ಪ್ರಕರಣದ ವಿವಾದ ಸುತ್ತಿಕೊಂಡಿದೆ. ಇದೀಗ ಮಲಯಾಳಂ ಚಿತ್ರರಂಗದ ಖ್ಯಾತ ನಟರಾದ ಮಮ್ಮುಟ್ಟಿ, ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಸುಖುಮಾರನ್ ಹಾಗೂ ಅಮಿತ್ ಚಕ್ಕಲಕಲ್ ನಿವಾಸಗಳ ಮೇಲೆ ಇಡಿ ದಾಳಿಯಾಗಿದೆ.

ಭೂತಾನ್‌ನಿಂದ ಐಷಾರಾಮಿ ವಾಹನಗಳ ಕಳ್ಳಸಾಗಣೆ ಮತ್ತು ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಉಲ್ಲಂಘನೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ತನಿಖೆ ತೀವ್ರಗೊಳಿಸಿದೆ. ಈ ಸಂಬಂಧ ಮಲಯಾಳಂ ಚಿತ್ರರಂಗದ ಖ್ಯಾತ ನಟರ ನಿವಾಸಗಳೂ ಸೇರಿದಂತೆ ಕೇರಳ ಮತ್ತು ತಮಿಳುನಾಡಿನ 17 ಸ್ಥಳಗಳಲ್ಲಿ ಶೋಧ ನಡೆಸಲಾಗುತ್ತಿದೆ.
ಈ ಕಾರುಗಳ ಅಕ್ರಮ ಆಮದು ಮತ್ತು ನೋಂದಣಿಯಲ್ಲಿ ತೊಡಗಿರುವ ಜಾಲವನ್ನು ಪತ್ತೆಹಚ್ಚುವ ಉದ್ದೇಶದಿಂದ ಈ ಕಾರ್ಯಾಚರಣೆ ನಡೆಯುತ್ತಿದೆ.

ಇಡಿ ಅಧಿಕಾರಿಗಳು ಎರ್ನಾಕುಲಂ, ತ್ರಿಶೂರ್, ಕೋಝಿಕ್ಕೋಡ್, ಮಲಪ್ಪುರಂ, ಕೊಟ್ಟಾಯಂ ಮತ್ತು ಕೊಯಮತ್ತೂರಿನ ವಾಹನ ವ್ಯಾಪಾರಿಗಳನ್ನು ವಿಚಾರಣೆಗೊಳಪಡಿಸಿದ್ದಾರೆ. ಭಾರತ-ಭೂತಾನ್ ಮತ್ತು ಭಾರತ-ನೇಪಾಳ ಮಾರ್ಗಗಳ ಮೂಲಕ ಲ್ಯಾಂಡ್ ಕ್ರೂಸರ್, ಡಿಫೆಂಡರ್ ಮತ್ತು ಮಸೆರಾಟಿ ಮುಂತಾದ ದುಬಾರಿ ಕಾರುಗಳನ್ನು ಅಕ್ರಮವಾಗಿ ತಂದು ನೋಂದಣಿ ಮಾಡುತ್ತಿದ್ದ ಜಾಲದ ಪತ್ತೆಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಜಾಲವು ನಕಲಿ ದಾಖಲೆ ಸೃಷ್ಟಿಸಿ, ಅರುಣಾಚಲ ಪ್ರದೇಶ, ಹಿಮಾಚಲ ಪ್ರದೇಶ ಮತ್ತು ಇತರ ರಾಜ್ಯಗಳಲ್ಲಿನ ಆರ್‌ಟಿಒ ನೋಂದಣಿಗಳನ್ನು ಬಳಸಿ ಕಾರುಗಳನ್ನು ಮಾರಾಟ ಮಾಡುತ್ತಿತ್ತು. ಈ ಹಿಂದೆ ಭೂತಾನ್‌ನಿಂದ ವಾಹನಗಳ ಕಳ್ಳಸಾಗಣೆ ಸಂಬಂಧ ಕಸ್ಟಮ್ಸ್ ಇಲಾಖೆಯೂ ದಾಳಿ ನಡೆಸಿತ್ತು. ಇದೀಗ ಇಡಿ ಅಧಿಕಾರಿಗಳು ಈ ಪ್ರಕರಣದ ತನಿಖೆ ಮುಂದುವರಿಸಿದ್ದಾರೆ.

ಈ ಹಿಂದೆ, ಸೆಪ್ಟೆಂಬರ್ 23 ರಂದು, ಕಸ್ಟಮ್ಸ್ ಅಧಿಕಾರಿಗಳು ಕೇರಳದಾದ್ಯಂತ ಸುಮಾರು 30 ಕಡೆ ದಾಳಿ ನಡೆಸಿ, ಮೂವರು ನಟರ ನಿವಾಸಗಳೂ ಸೇರಿದಂತೆ 36 ಅತ್ಯಾಧುನಿಕ ಐಷಾರಾಮಿ ವಾಹನಗಳನ್ನು ವಶಪಡಿಸಿಕೊಂಡಿದ್ದರು. ಈ ದಾಳಿಗಳನ್ನು ಫಾರಿನ್ ಎಕ್ಸ್ಚೇಂಜ್ ಮ್ಯಾನೇಜ್‌ಮೆಂಟ್ ಆಕ್ಟ್ (FEMA) ಅಡಿಯಲ್ಲಿ ನಡೆಸಲಾಗುತ್ತಿದೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ