ಬೆಂಗಳೂರಿನ ಸಿನಿಮಾ ಪ್ರೇಮಿಗಳು ಕಾಯುತ್ತಿರುವ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 17ನೇ ಅವತರಣಿಕೆಗೆ ವೇದಿಕೆ ಸಜ್ಜಾಗಿದ್ದು, ಗುರುವಾರ (ಜನವರಿ 29) ಸಂಜೆ 5ಕ್ಕೆ ವಿಧಾನಸೌಧದ ಮುಂಭಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಚಿತ್ರೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ವಿಧಾನ ಪರಿಷತ್‍ನ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನ ಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಉಪಸ್ಥಿತರಿರಲಿದ್ದಾರೆ. ಚಿತ್ರೋತ್ಸವದ ರಾಯಭಾರಿ ಬಹುಭಾಷಾ ನಟ ಪ್ರಕಾಶ್‍ ರಾಜ್‍ ಮತ್ತು ನಟಿ ರುಕ್ಮಿಣಿ ವಸಂತ್ ವಿಶೇಷ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸಾಧು ಕೋಕಿಲ ಉಪಸ್ಥಿತರಿರಲಿದ್ದಾರೆ.

ಸಂಜೆ 5.30ಕ್ಕೆ ಡಾ. ಜ್ಯೋತ್ಸ್ನಾ ಶ್ರೀಕಾಂತ್‍ ಅವರ ನೇತೃತ್ವದಲ್ಲಿ 35 ಕಲಾವಿದರಿಂದ ‘ವಿಶ್ವ ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದ್ದು, ಸಂಜೆ ಆರು ಗಂಟೆಗೆ ಸಭಾ ಕಾರ್ಯಕ್ರಮ ಪ್ರಾರಂಭವಾಗಲಿದೆ. ರಾತ್ರಿ 8ಕ್ಕೆ ಚಿತ್ರೋತ್ಸವದ ಉದ್ಘಾಟನಾ ವೇದಿಕೆಯಲ್ಲಿ ನೆದರ್‍ಲ್ಯಾಂಡ್‍ ದೇಶದ ‘ಪೋರ್ಟ್ ಬ್ಯಾಗೇಜ್‍’ ಚಿತ್ರವು ಉದ್ಘಾಟನಾ ಚಿತ್ರವಾಗಿ ಪ್ರದರ್ಶನವಾಗಲಿದೆ.

ಜನವರಿ 30ರಿಂದ ಫೆಬ್ರವರಿ 06ರವರೆಗೂ, ಈ ಚಿತ್ರೋತ್ಸವದಲ್ಲಿ 65 ದೇಶಗಳ ಸುಮಾರು 225 ಅತ್ಯುತ್ತಮ ಚಲನಚಿತ್ರಗಳು ಪ್ರದರ್ಶನಗೊಳ್ಳಲಿದ್ದು ಆಯಾ ದೇಶದ ಸ್ಥಿತಿ-ಗತಿ, ಜನ ಜೀವನ ಮತ್ತು ಸಂಸ್ಕೃತಿಯನ್ನು ಬಿಂಬಿಸಲಿವೆ.

ವಿಶ್ವದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಪಾಲ್ಗೊಂಡಿದ್ದ ಅತ್ಯುತ್ತಮ ಚಲನಚಿತ್ರಗಳು ಈ ಚಿತ್ರೋತ್ಸವದಲ್ಲಿ ‘ಬೆಂಗಳೂರಿನಲ್ಲಿ ಜಗತ್ತು’ ಎನ್ನುವ ಶೀರ್ಷಿಕೆಯಡಿ ಈ ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿವೆ. ಈ ಚಿತ್ರೋತ್ಸವವನ್ನು ಪ್ರತೀ ವರ್ಷವೂ ಅರ್ಥಪೂರ್ಣವಾದ ಧ್ಯೇಯವಾಕ್ಯದ ಮೂಲಕ ನಡೆಸಲಾಗುತ್ತಿದ್ದು, ಈ ಬಾರಿ ರಾಷ್ಟ್ರಕವಿ ಡಾ.ಜಿ.ಎಸ್‌. ಶಿವರುದ್ರಪ್ಪನವರ ಪ್ರಸಿದ್ಧ ಗೀತೆಯಾಗಿರುವ ‘ಸ್ತ್ರೀ ಎಂದರೆ ಅಷ್ಟೇ ಸಾಕೆ’ ಎಂಬ ಸಾಲಿನೊಂದಿಗೆ ʼಸ್ತ್ರೀ ಸಂವೇದನೆ, ಸಮಾನತೆಯ ದನಿʼ ಎಂಬ ಟ್ಯಾಗ್‌ ಲೈನ್‌ ಹೊಂದಿರುವ ಧ್ಯೇಯವಾಕ್ಯದೊಂದಿಗೆ ಆಚರಿಸಲಾಗುತ್ತಿದೆ.

ಇದಲ್ಲದೆ ಈ ಚಿತ್ರೋತ್ಸವದಲ್ಲಿ ಏಷಿಯನ್‌ ಸಿನಿಮಾ ಸ್ಪರ್ಧಾ ವಿಭಾಗ, ಚಿತ್ರ ಭಾರತಿ (ಭಾರತೀಯ ಸಿನಿಮಾ ಸ್ಪರ್ಧಾ ವಿಭಾಗ), ಕನ್ನಡ ಸಿನಿಮಾ ಸ್ಪರ್ಧಾ ವಿಭಾಗ, ಸಮಕಾಲೀನ ವಿಶ್ವ ಸಿನಿಮಾ, ಕನ್ನಡ ಜನಪ್ರಿಯ ಸಿನಿಮಾ, ಫಿಪ್ರೆಸ್ಕಿ – ವಿಮರ್ಶಕರ ವಾರ, ಜೀವನ ಕಥನ ಆಧಾರಿತ ಚಿತ್ರಗಳು,

ಪೋಲೆಂಡ್‌, ಭಾರತೀಯ ಉಪಭಾಷಾ ಚಲನಚಿತ್ರಗಳು, ಪುನರಾವಲೋಕನ‌ ಮುಂತಾದ ವಿಭಾಗಗಳಡಿ ಹಲವು ಚಿತ್ರಗಳನ್ನು ಪ್ರದರ್ಶಿಸಲಾಗುತ್ತದೆ.

ಕನ್ನಡದ ಮೇರು ನಟ ಪದ್ಮಭೂಷಣ ಡಾ. ರಾಜಕುಮಾರ್‌ ಅಭಿನಯದ ಐದು ಮಹತ್ವದ ಕನ್ನಡ ಚಲನಚಿತ್ರಗಳ ಪ್ರದರ್ಶನ, ಪೋಲೆಂಡಿನ ಪ್ರಖ್ಯಾತ ನಿರ್ದೇಶಕ ಆಂದ್ರೆ ವಾಜ್ದಾ ಅವರ ನಿರ್ದೇಶನದ ಏಳು ಪೋಲಿಷ್‌ ಚಲನಚಿತ್ರಗಳ ಪ್ರದರ್ಶನ, ಖ್ಯಾತ ಅಭಿನೇತ್ರಿ ಸ್ಮಿತಾ ಪಾಟೀಲ್‌ ಅವರ ಹೆಸರಾಂತ ಚಲನಚಿತ್ರಗಳ ಪ್ರದರ್ಶನ, ಥಾಯ್ಲೆಂಡಿನ ಖ್ಯಾತ ನಿರ್ದೇಶಕ ಅಚಿತಪಾಂಗ್‌ ವೀರಸೆಥಕುಲ್ ಅವರ ನಾಲ್ಕು ಪ್ರಮುಖ ಚಲನಚಿತ್ರಗಳ ಪ್ರದರ್ಶನ, ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಜನಮನ್ನಣೆ ಪಡೆದ ಸಮಕಾಲೀನ ಭಾರತೀಯ ಚಲನಚಿತ್ರಗಳ ಪ್ರದರ್ಶನ, ಸಂರಕ್ಷಿಸಲ್ಪಟ್ಟ ಮಹತ್ವದ ಭಾರತೀಯ ಚಲನಚಿತ್ರಗಳ ಪ್ರದರ್ಶನ ಕೂಡಾ ನಡೆಯಲಿದೆ.

ಚಿತ್ರೋತ್ಸವ ನಡೆಯುವ ಎಂಟು ದಿನಗಳ ಕಾಲ ಪ್ರತಿದಿನ ಚಿತ್ರ ನಿರ್ಮಾಣ, ನಿರ್ದೇಶನ, ಚಿತ್ರಕತೆ, ತಂತ್ರಜ್ಞಾನ ಮತ್ತು ಉದ್ಯಮಕ್ಕೆ ಸಂಬಂಧಪಟ್ಟಂತೆ ತಜ್ಞರೊಂದಿಗೆ ಸಂವಾದ, ಉಪನ್ಯಾಸ, ಮಾಸ್ಟರ್‌ ಕ್ಲಾಸ್‌, ವಿಚಾರ ಸಂಕಿರಣ ಮೊದಲಾದ ಕಾರ್ಯಕ್ರಮಗಳಿರುತ್ತವೆ. ಚಿತ್ರೋತ್ಸವದ ರಾಯಭಾರಿ ಪ್ರಕಾಶ್‍ ರಾಜ್‍ ಅವರಿಂದ ‘ನಾವು ಮತ್ತು ನಮ್ಮ ಸಿನಿಮಾ’ ಎಂಬ ವಿಷಯದ ಕುರಿತು ಉಪನ್ಯಾಸ ನಡೆಯಲಿದೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ