- ರಾಘವೇಂದ್ರ ಅಡಿಗ ಎಚ್ಚೆನ್.

ದಕ್ಷಿಣ ಭಾರತೀಯ ಚಿತ್ರರಂಗದ ಜನಪ್ರಿಯ ನಟಿ ರಶ್ಮಿಕಾ ಮಂದಣ್ಣ ಅವರಿಗೆ ಮದುವೆಯಾದ ಕೆಲವೇ ದಿನಗಳಲ್ಲಿ ದೊಡ್ಡ ಗೌರವ ಲಭಿಸಿದೆ. ತೆಲಂಗಾಣ ಸರ್ಕಾರ ನೀಡುವ ‘2025ರ ಗದ್ದರ್ ಫಿಲ್ಮ್ ಅವಾರ್ಡ್’ ಅವರಿಗೆ ಲಭಿಸಿದ್ದು ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ.

ನಟಿ ರಶ್ಮಿಕಾ ಮಂದಣ್ಣ ಅವರು ವಿಜಯ್ ದೇವರಕೊಂಡ ಅವರೊಂದಿಗೆ ಫೆಬ್ರವರಿ 26ರಂದು ಉದಯಪುರದಲ್ಲಿ ವಿವಾಹವಾದರು. ಫೆಬ್ರವರಿ 4ರಂದು ಅವರ ಆರತಕ್ಷತೆ ಕಾರ್ಯಕ್ರಮವೂ ನಡೆದಿತ್ತು. ಮದುವೆಯಾದ ಕೇವಲ ಒಂದೇ ವಾರದಲ್ಲಿ ಅವರಿಗೆ ಈ ರಾಜ್ಯ ಪ್ರಶಸ್ತಿ ಸಿಕ್ಕಿರುವುದು ವಿಶೇಷವಾಗಿದೆ.

ಗರ್ಲ್ಫ್ರೆಂಡ್ ಸಿನಿಮಾದಲ್ಲಿ ನೀಡಿದ ಅಭಿನಯಕ್ಕಾಗಿ ರಶ್ಮಿಕಾ ಮಂದಣ್ಣ ಅವರಿಗೆ ಈ ಪ್ರಶಸ್ತಿ ಲಭಿಸಿದೆ. ಈ ಚಿತ್ರವನ್ನು ರಾಹುಲ್ ರವೀಂದ್ರನ್ ನಿರ್ದೇಶಿಸಿದ್ದು, ನವೆಂಬರ್ 7ರಂದು ಬಿಡುಗಡೆಯಾಗಿ ಪ್ರೇಕ್ಷಕರ ಗಮನ ಸೆಳೆದಿತ್ತು. ವರದಿಗಳ ಪ್ರಕಾರ ಈ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸುಮಾರು 29 ಕೋಟಿ ರೂಪಾಯಿ ವಸೂಲಿ ಮಾಡಿದೆ.

ಇದೇ ಅವಾರ್ಡ್ ಸಮಾರಂಭದಲ್ಲಿ ನಾಗ ಚೈತನ್ಯ ಅವರಿಗೆ ಥಂಡೇಲ್ ಸಿನಿಮಾದ ಅಭಿನಯಕ್ಕಾಗಿ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ. ರಾಜು ವೆಡ್ಸ್ ರಾಂಬಾಯಿ ಸಿನಿಮಾಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ ದೊರೆತಿದೆ.

ಇನ್ನೂ ಶಿವಾಜಿ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ಪಡೆದರೆ, ಭೂಮಿಕಾ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಜೊತೆಗೆ ಎನ್‌ಟಿಆರ್ ನ್ಯಾಷನಲ್ ಫಿಲ್ಮ್ ಅವಾರ್ಡ್ ಅನ್ನು ಚಿರಂಜೀವಿ ಅವರಿಗೆ ನೀಡಲಾಗಿದೆ.

 

 

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ