- ರಾಘವೇಂದ್ರ ಅಡಿಗ ಎಚ್ಚೆನ್.

ಖ್ಯಾತ ಚಲನಚಿತ್ರ ನಿರ್ಮಾಪಕ, ನಿರ್ದೇಶಕ ಹಾಗೂ ಸಂಕಲನಕಾರರಾದ ನರಹಳ್ಳಿ ಜ್ಞಾನೇಶ್ (48) ಅವರು ಶುಕ್ರವಾರ ಹೃದಯಾಘಾತದಿಂದ ನಿಧಾನರಾಗಿದ್ದಾರೆ.
ಮೂಲತಃ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನವರಾದ ಇವರು, ಕಾರ್ಯನಿಮಿತ್ತ ತಮ್ಮ ಸ್ವಗ್ರಾಮ ನರಹಳ್ಳಿಗೆ ತೆರಳಿದ್ದ ಸಂದರ್ಭದಲ್ಲಿ ತೀವ್ರ ಹೃದಯಾಘಾತಕ್ಕೊಳಗಾಗಿ ಕೊನೆಯುಸಿರೆಳೆದಿದ್ದಾರೆ.
ಕಳೆದ ಎರಡು ದಶಕಗಳಿಂದ ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಸಕ್ರಿಯರಾಗಿದ್ದ ಜ್ಞಾನೇಶ್ ಅವರು, ಹಿರಿಯ ಸಂಕಲನಕಾರ ಸುರೇಶ್ ಅರಸ್ ಅವರ ಗರಡಿಯಲ್ಲಿ ಪಳಗಿದ್ದರು.
ತಮ್ಮ ವೃತ್ತಿಜೀವನದಲ್ಲಿ ಹಲವಾರು ಧಾರಾವಾಹಿಗಳು, ಸಾಕ್ಷ್ಯಚಿತ್ರಗಳು, ಕಿರುಚಿತ್ರಗಳು ಹಾಗೂ ಸಿನಿಮಾಗಳಿಗೆ ಸಂಕಲನಕಾರರಾಗಿ ಸೇವೆ ಸಲ್ಲಿಸಿದ್ದರು. ವಿಶೇಷವಾಗಿ, ನಟ ಜಗ್ಗೇಶ್ ಅಭಿನಯದ ‘ಎದ್ದೇಳು ಮಂಜುನಾಥ’ ಚಿತ್ರದ ಅತ್ಯುತ್ತಮ ಸಂಕಲನಕ್ಕಾಗಿ ಇವರು ಪ್ರತಿಷ್ಠಿತ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದರು.

 

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ