ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನಟಿ ರನ್ಯಾರಾವ್‌ಗೆ ಆರ್ಥಿಕ ವ್ಯವಹಾರಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.ಪ್ರಕರಣದ 2ನೇ ಆರೋಪಿ ತರುಣ್ ಕೊಂಡರಾಜುಗೂ ಜಾಮೀನು ಮಂಜೂರು ಮಾಡಿ ಕೋರ್ಟ್ ಆದೇಶಿಸಿದೆ. 60 ದಿನ ಕಳೆದರೂ ಡಿಆರ್‌ಐ ಅಧಿಕಾರಿಗಳು ದೋಷಾರೋಪ ಪಟ್ಟಿ ಸಲ್ಲಿಸದ ಹಿನ್ನೆಲೆ ಆರೋಪಿಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ಆರ್ಥಿಕ ವ್ಯವಹಾರಗಳ ವಿಶೇಷ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಇಬ್ಬರು ಶ್ಯೂರಿಟಿ, 2 ಲಕ್ಷ ರೂ. ಬಾಂಡ್ ಮೇಲೆ ಜಾಮೀನು ನೀಡಲಾಗಿದೆ. ಅಲ್ಲದೇ ಮುಂದೆ ಇಂತಹ ಕೃತ್ಯಗಳಲ್ಲಿ ಭಾಗಿಯಾದಂತೆ ಹಾಗೂ ದೇಶ ಬಿಟ್ಟು ಹೊರಗೆ ಹೋಗದಂತೆ ಸೂಚನೆ ನೀಡಿದೆ. ರನ್ಯಾರಾವ್ ಪರವಾಗಿ ವಕೀಲ ಗಿರೀಶ್ ವಾದ ಮಂಡಿಸಿದರು.
12 ಕೋಟಿ ರೂ. ಮೌಲ್ಯದ 14 ಕೆ.ಜಿ ಚಿನ್ನದ ಗಟ್ಟಿಗಳನ್ನು ದುಬೈನಿಂದ ಬೆಂಗಳೂರಿಗೆ ತಂದು ನಟಿ ರನ್ಯಾ ರಾವ್ ಬಂಧನಕ್ಕೆ ಒಳಗಾಗಿದ್ದರು. ಈ ಹಿಂದೆ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಮತ್ತು ಮ್ಯಾಜಿಸ್ಟ್ರೇಟ್ ಕೋರ್ಟ್ ತಿಸ್ಕರಿಸಿತ್ತು.