- ರಾಘವೇಂದ್ರ ಅಡಿಗ ಎಚ್ಚೆನ್.

ಗುಮ್ಮಡಿ ನರಸಯ್ಯ ಅವರ ಮನೆಗೆ ನಟ ಶಿವರಾಜ್​​ಕಮಾರ್ ಅವರು ಭೇಟಿ ನೀಡಿದ್ದಾರೆ. ಈ ವೇಳೆ ಗೀತಾ ಶಿವರಾಜ್​​ಕುಮಾರ್ ಕೂಡ ಸಾಥ್ ನೀಡಿದರು. ಈ ಸಂದರ್ಭದ ಫೋಟೋ ಎಲ್ಲ ಕಡೆಗಳಲ್ಲಿ ವೈರಲ್ ಆಗುತ್ತಿದೆ.

FB_IMG_1764996673463

ಮಾಜಿ ಶಾಸಕ ಗುಮ್ಮಡಿ ನರಸಯ್ಯ ಅವರ ಜೀವನಧಾರಿತ ಸಿನಿಮಾದಲ್ಲಿ ಶಿವರಾಜ್​​ಕುಮಾರ್ ಅವರು ನಟಿಸಲಿದ್ದಾರೆ. ಗುಮ್ಮಡಿ ನರಸಯ್ಯ ಅವರ ಪಾತ್ರವನ್ನು ಶಿವಣ್ಣ ಮಾಡಲಿದ್ದಾರೆ. ಹಾಗಾಗಿ ಭೇಟಿ ಮಾಡಿದ್ದಾರೆ. ಶನಿವಾರ (ಡಿಸೆಂಬರ್ 6) ‘ಗುಮ್ಮಡಿ ನರಸಯ್ಯ’ ಸಿನಿಮಾದ ಮುಹೂರ್ತ ಸಮಾರಂಭ ನಡೆಯಲಿದೆ. ಅದಕ್ಕೂ ಮುನ್ನ ಗುಮ್ಮಡಿ ನರಸಯ್ಯ ಅವರ ಕುಟುಂಬವನ್ನು ಶಿವಣ್ಣ ಭೇಟಿಯಾಗಿ ಮಾತುಕಥೆ ನಡೆಸಿದ್ದಾರೆ.

shiva-rajkumar-6

ಆಂಧ್ರ ಪ್ರದೇಶದಲ್ಲಿ ಗುಮ್ಮಡಿ ನರಸಯ್ಯ ಅವರು ಸಾಕಷ್ಟು ಖ್ಯಾತಿ ಹೊಂದಿದ್ದಾರೆ. 5 ಬಾರಿ ಅವರು ಶಾಸಕರಾಗಿ ಆಯ್ಕೆ ಆಗಿದ್ದರು. ತಮ್ಮ ಸರಳ ವ್ಯಕ್ತಿತ್ವ ಕಾರಣದಿಂದ ಅವರು ಎಲ್ಲರಿಗೂ ಮಾದರಿ ಆಗಿದ್ದರು.
ಶಿವರಾಜ್​​ಕುಮಾರ್ ಮುಖ್ಯ ಪಾತ್ರದಲ್ಲಿ ನಟಿಸಲಿರುವ ಮೊದಲ ತೆಲುಗು ಸಿನಿಮಾ ಇದು. ಹಾಗಾಗಿ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಈಗಾಗಲೇ ಈ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಕೂಡ ಬಿಡುಗಡೆ ಆಗಿದೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ