- ರಾಘವೇಂದ್ರ ಅಡಿಗ ಎಚ್ಚೆನ್.
ಕೊಪ್ಪಳ ಜಿಲ್ಲೆಯ ಪುರಾಣ ಪ್ರಸಿದ್ಧ ಅಂಜನಾದ್ರಿ ಬೆಟ್ಟಕ್ಕೆ ಖ್ಯಾತ ನಟ ರಿಷಬ್ ಶೆಟ್ಟಿ ಹಾಗೂ ಅವರ ಪತ್ನಿ ಪ್ರಗತಿ ಶೆಟ್ಟಿ ಭೇಟಿ ನೀಡಿ, ಹನುಮಂತನಿಗೆ ವಿಶೇಷ ಪೂಜೆ ಸಲ್ಲಿಸಿದರು./
ಹನುಮ ಜನ್ಮಸ್ಥಳವೆಂದು ನಂಬಲಾಗುವ ಅಂಜನಾದ್ರಿಯಲ್ಲಿ ತೆಲುಗು ಸಿನಿಮಾ ಜೈ ಹನುಮಾನ್ಗೆ ಭಕ್ತಿಭಾವದಿಂದ ಮುಹೂರ್ತ ನೆರವೇರಿತು. ಬೆಳಗ್ಗೆ 11:50ರ ಶುಭ ಮುಹೂರ್ತದಲ್ಲಿ ಚಿತ್ರಾರಂಭಕ್ಕೆ ಅಧಿಕೃತ ಚಾಲನೆ ನೀಡಲಾಗಿದ್ದು, ಈ ಪೂಜಾ ಕಾರ್ಯಕ್ರಮದಲ್ಲಿ ಸ್ಥಳೀಯ ಅರ್ಚಕರು, ಚಿತ್ರತಂಡದ ಸದಸ್ಯರು ಹಾಗೂ ಭಕ್ತರು ಭಾಗವಹಿಸಿದ್ದರು.
ಈ ಚಿತ್ರದಲ್ಲಿ ರಿಷಬ್ ಶೆಟ್ಟಿ ಆಂಜನೇಯನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ಪಾತ್ರಕ್ಕಾಗಿ ಅವರು ವಿಶೇಷ ತಯಾರಿ ನಡೆಸುತ್ತಿದ್ದಾರೆ ಎನ್ನಲಾಗಿದೆ. ಪೌರಾಣಿಕ ಕಥಾವಸ್ತು ಮತ್ತು ಆಧುನಿಕ ನಿರೂಪಣೆಯ ಸಂಯೋಜನೆಯೊಂದಿಗೆ ಸಿನಿಮಾ ಮೂಡಿಬರಲಿದ್ದು, ಈಗಾಗಲೇ ಸಿನಿ ಪ್ರೇಕ್ಷಕರಲ್ಲಿ ಭಾರಿ ನಿರೀಕ್ಷೆ ಹುಟ್ಟಿಸಿದೆ.
‘ಜೈ ಹನುಮಾನ್’ ಚಿತ್ರವನ್ನು ಖ್ಯಾತ ತೆಲುಗು ನಿರ್ದೇಶಕ ಪ್ರಶಾಂತ್ ವರ್ಮ ನಿರ್ದೇಶಿಸುತ್ತಿದ್ದು, ಅಂಜನಾದ್ರಿಯಂತಹ ಪವಿತ್ರ ಕ್ಷೇತ್ರದಲ್ಲಿ ಮುಹೂರ್ತ ನಡೆದಿರುವುದು ಚಿತ್ರಕ್ಕೆ ವಿಶೇಷ ಮಹತ್ವ ತಂದಿದೆ.





