- ರಾಘವೇಂದ್ರ ಅಡಿಗ ಎಚ್ಚೆನ್.
ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಆನೆಕಾಡು ಅರಣ್ಯ ಪ್ರದೇಶದಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್ (40) ದಾರುಣವಾಗಿ ಸಾವನ್ನಪ್ಪಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 275ರ ಆನೆಕಾಡು ಸಮೀಪ ಈ ದುರ್ಘಟನೆ ನಡೆದಿದೆ. ಕೆಲಸ ಮುಗಿಸಿಕೊಂಡು ಕುಶಾಲನಗರದಿಂದ ಸ್ವಗ್ರಾಮ ಹೊಸಕೋಟೆ ಕಡೆಗೆ ಕಾರಿನಲ್ಲಿ ತೆರಳುತ್ತಿದ್ದ ಹರೀಶ್, ರಸ್ತೆ ಬದಿಯಲ್ಲಿ ನಿಂತಿದ್ದ ಟ್ಯಾಂಕರ್‌ಗೆ ಭಾರೀ ವೇಗದಲ್ಲಿ ಡಿಕ್ಕಿ ಹೊಡೆದಿದ್ದಾರೆ.
ಡಿಕ್ಕಿಯ ತೀವ್ರತೆಯಿಂದ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಹರೀಶ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯಿಂದ ಚಿತ್ರರಂಗ ಮತ್ತು ಕಿರುತೆರೆ ವಲಯದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
आगे की कहानी पढ़ने के लिए सब्सक्राइब करें
ಸಬ್ ಸ್ಕಿರಪ್ಶನ್ ಜೊತೆ ಪಡೆಯಿರಿ
700ಕ್ಕಿಂತಲೂ ಹೆಚ್ಚಿನ ಆಡಿಯೋ ಕಥೆಗಳು
6000ಕ್ಕೂ ಹೆಚ್ಚಿನ ಸ್ವಾರಸ್ಯಕರ ಕಥೆಗಳು
ಗೃಹಶೋಭಾ ಪತ್ರಿಕೆಯ ಎಲ್ಲಾ ಹೊಸ ಲೇಖನಗಳು
5000ಕ್ಕೂ ಹೆಚ್ಚಿನ ಲೈಫ್ ಸ್ಟೈಲ್ ಟಿಪ್ಸ್
2000ಕ್ಕೂ ಹೆಚ್ಚಿನ ಬ್ಯೂಟಿ ಟಿಪ್ಸ್
2000ಕ್ಕೂ ಹೆಚ್ಚಿನ ಟೇಸ್ಟಿ ಫುಡ್ ರೆಸಿಪೀಸ್
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ





