ಸ್ಟಾರ್ ಡೈರೆಕ್ಟರ್ ಯೋಗರಾಜ್ ಭಟ್ , ಮ್ಯೂಸಿಕ್ ಮಾಂತ್ರಿಕ ವಿ ಹರಿಕೃಷ್ಣ ಅವರೊಂದಿಗೆ ಭುವನ್ ಪೊನ್ನಣ್ಣ ಸ್ಯಾಂಡಲ್ವುಡ್ ರಿ ಎಂಟ್ರಿ.
ರಾಘವೇಂದ್ರ ಅಡಿಗ ಎಚ್ಚೆನ್.

‘ರಾಂಧವ’ ಚಿತ್ರದಲ್ಲಿ ಹೀರೋ ಆಗಿದ್ದ ಭುವನ್ ಪೊನ್ನಣ್ಣ, ಇದೀಗ ಯೋಗರಾಜ್ ಭಟ್ ನಿರ್ದೇಶನದ ಹೊಸ ಚಿತ್ರದಲ್ಲಿ ನಟಿಸುವುದಕ್ಕೆ ಸಜ್ಜಾಗಿದ್ದಾರೆ. ‘ಹಲೋ 123’ ಎಂಬ ಈ ಚಿತ್ರಕ್ಕೆ ವಿ. ಹರಿಕೃಷ್ಣ ಸಂಗೀತ ಸಂಯೋಜಿಸುತ್ತಿದ್ದು, ಅಮೃತಾ ಸಿನಿ ಕ್ರಾಫ್ಟ್ ಸಂಸ್ಥೆಯಡಿ ಈ ಚಿತ್ರವನ್ನು ವಿಜಯ್‍ ಟಾಟಾ ನಿರ್ಮಾಣ ಮಾಡುತ್ತಿದ್ದಾರೆ. ಬುಧವಾರ ಸಂಜೆ ಹಲೋ 123 ಚಿತ್ರ ನಿರ್ಮಾಪಕ ವಿಜಯ್ ಟಾಟಾ ಅವರ ಮನೆಯಲ್ಲಿ ಚಿತ್ರದ ಸ್ಕ್ರಿಪ್ಟ್ ಪೂಜೆ ಮತ್ತು ಶೀರ್ಷಿಕೆ

Hello

ಅನಾವರಣಗೊಂಡಿದೆ. ಹರ್ಷಿಕಾ ಹಾಗೂ ಭುವನ್ ಪುತ್ರಿ ತ್ರಿದೇವಿಯವ್ರ ಅಮೃತ ಹಸ್ತದಿಂದ ಚಿತ್ರಕ್ಕೆ ಚಾಲನೆ ನೀಡಿದ್ದು ವಿಶೇಷ. ದೇವರ ಪೂಜೆಯೊಂದಿಗೆ ನಾಯಕ ಭುವನ್ ನಿರ್ದೇಶಕ ಯೋಗರಾಜ್ ಭಟ್ ಹಾಗೂ ಸಂಗೀತ ನಿರ್ದೇಶಕ ವಿ. ಹರಿಕೃಷ್ಣರವರಿಗೆ ಅಡ್ವಾನ್ಸ್ ಕೊಟ್ಟು ನಿರ್ಮಾಪಕರು ಶುಭ ಕೋರಿದರು. ಯೋಗರಾಜ್ ಭಟ್ ಅಮೇರಿಕಾ ಪ್ರವಾಸ ಹೊರಟಿದ್ದು, ವಾಪಸ್ ಬಂದ ಕೂಡಲೇ ಚಿತ್ರದ ಉಳಿದ ಕೆಲಸಗಳು ಶುರುವಾಗಲಿದ್ದು, ಅಕ್ಟೋಬರ್ ತಿಂಗಳಲ್ಲಿ ಚಿತ್ರೀಕರಣಕ್ಕೆ ಚಾಲನೆ ಸಿಗಲಿದೆ. ಎಲ್ಲಾ ಅಂದುಕೊಂಡಂಗೆ ಆದರೆ, ‘ಹಲೋ 123’ ಮುಂದಿನ ವರ್ಷ ಮಾರ್ಚ್ ವೇಳೆಗೆ ಬಿಡುಗಡೆ ಆಗಲಿದೆ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ