ಬಾಲಿವುಡ್ ನಟ ಹೃತಿಕ್ ರೋಷನ್ ಅವರಿಗೆ ಮಲಯಾಳಂ ನಟ ಪೃಥ್ವಿರಾಜ್ ಸುಕುಮಾರನ್ ನಿರ್ದೇಶನ ಮಾಡಲಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿದೆ.
ಕಾಂತಾರ, ಕೆಜಿಎಫ್ 2 ಸಿನಿಮಾ ನಿರ್ಮಿಸಿದ್ದ ಕನ್ನಡದ ಖ್ಯಾತ ಸಂಸ್ಥೆ ಹೊಂಬಾಳೆ ಫಿಲಂಸ್ ಜೊತೆ ಹೃತಿಕ್ ರೋಷನ್ ಕೈಜೋಡಿಸಿದ್ದಾರೆ. ಹೃತಿಕ್ ನಟಿಸಿರುವ ಈ ಚಿತ್ರಕ್ಕೆ ನಟ ಕಮ್ ನಿರ್ದೇಶಕ ಪೃಥ್ವಿರಾಜ್ ಅವರು ನಿರ್ದೇಶನ ಮಾಡಲಿದ್ದಾರೆ ಎನ್ನಲಾಗಿದೆ.ತೆರೆಮರೆಯಲ್ಲಿ ಇದಕ್ಕಾಗಿ ಸಿದ್ಧತೆ ನಡೆಯುತ್ತಿದೆ ಎನ್ನಲಾಗಿದ್ದು, ಈಗಾಗಲೇ ಹೃತಿಕ್ ಜೊತೆ ಸಿನಿಮಾ ಮಾಡುವ ಬಗ್ಗೆ ನಿರ್ಮಾಣ ಸಂಸ್ಥೆ ಅಧಿಕೃತವಾಗಿ ಘೋಷಿಸಿದೆ. ಅದರಂತೆ ಪೃಥ್ವಿರಾಜ್ ಈ ಸಿನಿಮಾಗೆ ನಿರ್ದೇಶನ ಮಾಡುತ್ತಾರೆಯೇ ಎಂದು ನಿರ್ಮಾಣ ಸಂಸ್ಥೆಯೇ ಅಧಿಕೃತವಾಗಿ ತಿಳಿಸಬೇಕಿದೆ.
ಹೊಂಬಾಳೆ ಸಂಸ್ಥೆಯ ‘ಸಲಾರ್’ ಸಿನಿಮಾದಲ್ಲಿ ಪೃಥ್ವಿರಾಜ್ ನಟಿಸಿದ್ದರು. ಈ ನಿರ್ಮಾಣ ಸಂಸ್ಥೆಯೊಂದಿಗೆ ನಟ ಉತ್ತಮ ಒಡನಾಟ ಹೊಂದಿದ್ದಾರೆ. ಹೀಗಾಗಿ ಹೃತಿಕ್‌ಗೆ ಪೃಥ್ವಿರಾಜ್ ನಿರ್ದೇಶನ ಮಾಡುತ್ತಾರೆ ಎಂಬ ಮಾತುಗಳು ಕೇಳಿ ಬಂದಿವೆ.ಸದ್ಯ ಹೃತಿಕ್ ರೋಷನ್ ಅವರು ‘ವಾರ್-2’ ಸಿನಿಮಾ ರಿಲೀಸ್‌ಗೆ ಎದುರು ನೋಡುತ್ತಿದ್ದಾರೆ. ಆ.14ರಂದು ಸಿನಿಮಾ ರಿಲೀಸ್ ಆಗಲಿದೆ. ಆ ನಂತರ ಹೊಂಬಾಳೆ ಸಂಸ್ಥೆಯ ಸಿನಿಮಾದ ಶೂಟಿಂಗ್‌ನಲ್ಲಿ ಅವರು ಭಾಗಿಯಾಗಲಿದ್ದಾರೆ.