Sj*
ಖ್ಯಾತ ಪತ್ರಕರ್ತ, ಲೇಖಕ ಪಿ.ಲಂಕೇಶ್ ಮೊಮ್ಮಗಳು, ನಿರ್ದೇಶಕಿ ಕವಿತಾ ಲಂಕೇಶ್ ಪುತ್ರಿ ಇಶಾ ಲಂಕೇಶ್ ನಾಯಕಿಯಾಗಿ ಕನ್ನಡ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕ ಪ್ರೀತಂ ಗುಬ್ಬಿ ಈ ಚಿತ್ರವನ್ನು ನಿರ್ದೇಶಿಸಲಿದ್ದಾರೆ. ನವಿಶಾ ಫಿಲಂಸ್ ಲಾಂಛನದಲ್ಲಿ ಶಿವರಾಜ್ ಕನಗನಪಲ್ಲಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಇದು ಈ ಸಂಸ್ಥೆಯ ನಿರ್ಮಾಣದ ಎರಡನೇ ಚಿತ್ರವಾಗಿದೆ.

ಈಗಾಗಲೇ ರಂಗಭೂಮಿಯಲ್ಲಿ ಸಾಕಷ್ಟು ಹೆಸರು ಮಾಡಿರುವ ಇಶಾ ಲಂಕೇಶ್, ನಟನೆಗೆ ಬೇಕಾಗಿರುವ ಪೂರ್ವತಯಾರಿಗಳನ್ನು ಮಾಡಿಕೊಂಡಿದ್ದಾರೆ. ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ಪ್ರೀತಂ ಗುಬ್ಬಿ ನಿರ್ದೇಶನ ಹಾಗೂ ಇಶಾ ಲಂಕೇಶ್ ಚೊಚ್ಚಲ ಅಭಿನಯದ ಈ ಚಿತ್ರದ ಕುರಿತು ಸಾಕಷ್ಟು ನಿರೀಕ್ಷೆ ಇದೆ.
ಸದ್ಯ ಇನ್ನೂ ಹೆಸರಿಡದ ಈ ನೂತನ ಚಿತ್ರದ ನಾಯಕಿಯ ಕುರಿತಾಗಿ ಮಾತ್ರ ತಿಳಿಸಿರುವ ನಿರ್ದೇಶಕ ಪ್ರೀತಂ ಗುಬ್ಬಿ, ಮುಂದಿನ ದಿನಗಳಲ್ಲಿ ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡುವುದಾಗಿ ಹೇಳಿದ್ದಾರೆ.
आगे की कहानी पढ़ने के लिए सब्सक्राइब करें
ಸಬ್ ಸ್ಕಿರಪ್ಶನ್ ಜೊತೆ ಪಡೆಯಿರಿ
700ಕ್ಕಿಂತಲೂ ಹೆಚ್ಚಿನ ಆಡಿಯೋ ಕಥೆಗಳು
6000ಕ್ಕೂ ಹೆಚ್ಚಿನ ಸ್ವಾರಸ್ಯಕರ ಕಥೆಗಳು
ಗೃಹಶೋಭಾ ಪತ್ರಿಕೆಯ ಎಲ್ಲಾ ಹೊಸ ಲೇಖನಗಳು
5000ಕ್ಕೂ ಹೆಚ್ಚಿನ ಲೈಫ್ ಸ್ಟೈಲ್ ಟಿಪ್ಸ್
2000ಕ್ಕೂ ಹೆಚ್ಚಿನ ಬ್ಯೂಟಿ ಟಿಪ್ಸ್
2000ಕ್ಕೂ ಹೆಚ್ಚಿನ ಟೇಸ್ಟಿ ಫುಡ್ ರೆಸಿಪೀಸ್
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ





