- ರಾಘವೇಂದ್ರ ಅಡಿಗ ಎಚ್ಚೆನ್.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿರುವ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ಇಂದು ನಡೆದಿದೆ. ನ್ಯಾ. ಪರ್ದಿವಾಲಾ ಮತ್ತು ನ್ಯಾ. ವಿಜಯ್ ಬಿಷ್ಣೋಯಿ ಅವರ ಪೀಠದಲ್ಲಿ ವಿಚಾರಣೆ ನಡೆಯಿತು.
ದರ್ಶನ್ ಪರ ಹಿರಿಯ ವಕೀಲ ಮುಕುಲ್ ರೋಹ್ಟಗಿ ವಾದ ಮಂಡಿಸಿದ ವೇಳೆ, ಜೈಲಿನಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಬಗ್ಗೆ ಗಂಭೀರ ವಿಚಾರ ಎತ್ತಲಾಯಿತು. ಇದಕ್ಕೆ ಸ್ಪಂದಿಸಿದ ಸುಪ್ರೀಂ ಕೋರ್ಟ್, “5 ಸ್ಟಾರ್ ಸೌಲಭ್ಯ ಬೇಡ ಎಂದಿದ್ದೇವೆ, ಆದರೆ ಮೂಲ ಸೌಕರ್ಯವೂ ಇಲ್ಲವೇ?” ಎಂದು ಪ್ರಶ್ನಿಸಿ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ.
ಇದೇ ವೇಳೆ ಪ್ರಕರಣದ ಪ್ರಗತಿ ಬಗ್ಗೆ 57ನೇ ಸಿಸಿಹೆಚ್ ನ್ಯಾಯಾಲಯದಿಂದ ವಿವರವಾದ ವರದಿ ಸಲ್ಲಿಸಲು ಒಂದು ವಾರದ ಗಡುವು ನೀಡಲಾಗಿದೆ.
ಜೈಲಿನಲ್ಲಿ ದರ್ಶನ್ ಅವರಿಗೆ ಮೂಲ ಸೌಲಭ್ಯ ಒದಗಿಸಿದ್ದಾರೆಯೇ? ಎಷ್ಟು ಸಾಕ್ಷಿಗಳ ವಿಚಾರಣೆ ನಡೆದಿದೆ? ಇನ್ನಷ್ಟು ಸಾಕ್ಷಿಗಳ ವಿಚಾರಣೆ ಬಾಕಿಯಿದೆಯೇ? ವಿಚಾರಣೆ ಪೂರ್ಣಗೊಳ್ಳಲು ಎಷ್ಟು ಸಮಯ ಬೇಕು? ಎಂಬ ಮಾಹಿತಿಯನ್ನು ನೀಡುವಂತೆ ಸೂಚಿಸಲಾಗಿದೆ.
ವರದಿ ಬಂದ ಬಳಿಕ ಮುಂದಿನ ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ