Sj*

ಜೀ5ನ ಬಹುನಿರೀಕ್ಷಿತ ವೆಬ್‌ ಸರಣಿ ʼಜೆರಾಕ್ಸ್‌ʼ ನ ಟ್ರೈಲರ್‌ ಇಂದು ಬಿಡುಗಡೆಯಾಗಿದೆ. 6 ಸಂಚಿಕೆಗಳುಳ್ಳ ಈ ಹಾಸ್ಯ ವೆಬ್‌ ಸರಣಿ ಇಂದು ತನ್ನ ಟ್ರೈಲರ್‌ ತುಣುಕಿನ ಮೂಲಕ ಎಲ್ಲರ ಮನೆ ಮಾತಾಗಿದೆ.

ಖ್ಯಾತ ನಟ, ನಿರ್ಮಾಪಕ ಡಾಲಿ ಧನಂಜಯ ಅವರ ಡಾಲಿ ಪಿಕ್ಚರ್ಸ್‌ ಲಾಂಛನದಲ್ಲಿ ಹಾಗೂ ಬ್ಲಿಂಕ್‌ ಖ್ಯಾತಿಯ ನಿರ್ದೇಶಕ ಶ್ರೀನಿಧಿ ಬೆಂಗಳೂರು ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ʼಜೆರಾಕ್ಸ್‌ʼ ನಲ್ಲಿ ನಾಗಭೂಷಣ್‌, ಪಾಯಲ್‌ ಚೆಂಗಪ್ಪ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಮಂಜು ಪಾವಗಡ, ಓಂ ಪ್ರಕಾಶ್‌ ರಾವ್‌, ಶ್ರೀವತ್ಸ, ಯಶ್ವಂತ್‌ ಶೆಟ್ಟಿ, ವಿಜಯ್‌ ಪ್ರಸಾದ್‌, ತುಕಾಲಿ ಸಂತು, ಜಗ್ಗಪ್ಪ, ಸಿದ್ದು ಮಂಡ್ಯ, ಸುಧಾಕರ್‌ ಗೌಡ ಮುಂತಾದವರು ನಟಿಸಿರುತ್ತಾರೆ.

ಮಳವಳ್ಳಿಯ ರಾಯದುರ್ಗದ ಪ್ರಕಾಶ (ನಾಗಭೂಷಣ) ಒಬ್ಬ ಸಾಮಾನ್ಯ ಜೆರಾಕ್ಸ್‌ ಅಂಗಡಿ ಕೆಲಸಗಾರನಾಗಿರುತ್ತಾನೆ. ಅವನ ಜೆರಾಕ್ಸ್‌ ಯಂತ್ರಕ್ಕೆ ಒಂದು ತಾಯಿತ ಸೇರಿದಾಗ ಅವನ ಜೀವನ ಬದಲಾಗುತ್ತದೆ. ಅವನು ತೆಗೆಯುವ ಜೆರಾಕ್ಸ್‌ ಕಾಪಿಗಳಿಗೆ ಜೀವ ಬಂದು ಅವನ ಜೀವನ ಉಲ್ಟಾಪಲ್ಟಾವಾಗುತ್ತದೆ. ಇದರಿಂದ ಆಗುವ ಅಚಾನಕ್‌ ಬದಲಾವಣೆಗಳು, ಊರಿನಲ್ಲಾಗುವ ಆಶ್ಚರ್ಯಕರ ಘಟನೆಗಳು, ಕುತೂಹಲಕಾರಿ ಸನ್ನಿವೇಶಗಳನ್ನು ಕಥೆ ಎಳೆ ಎಳೆಯಾಗಿ ಬಿಚ್ಚಿಡುತ್ತದೆ. ಜೀ5ನಲ್ಲಿ ಇದೇ ಏಪ್ರಿಲ್‌ 24ರಿಂದ ಈ ವೆಬ್‌ ಸರಣಿಯು ಪ್ರೇಕ್ಷಕರಿಗೆ ನಗೆ ಊಟ ಉಣಬಡಿಸಲಿದೆ.

jerox 1

ನಟ, ನಿರ್ಮಾಪಕ ಡಾಲಿ ಧನಂಜಯ ಮಾತನಾಡಿ, "ನನಗೆ ಈ ಕಥೆ ಇಷ್ಟವಾಗಲು ಕಾರಣ ಅದು ಹೇಳುವ ತತ್ವ, ಪ್ರತಿಯೊಂದು ಹಾಸ್ಯ ಸನ್ನಿವೇಶದ ಹಿಂದೆ ಅಡಗಿರುವ ತತ್ವ, ನನ್ನನ್ನು ತನ್ನತ್ತ ಸೆಳೆಯಿತು. ಜೆರಾಕ್ಸ್‌ ಕಾಪಿಗಳಿಗೆ ಜೀವ ಬಂದಾಗ, ಜನರು ತಮ್ಮ ಪ್ರತಿಬಿಂಬವನ್ನೇ ಸ್ವೀಕರಿಸಲು ಹೇಗೆ ನಿರಾಕರಿಸುತ್ತಾರೆ ಇವೆಲ್ಲವು ನನ್ನನ್ನು ಆಕರ್ಷಿಸಿತು. ಈ ಕಥೆಯು ಒಂಟಿತನ, ಹಾಸ್ಯ, ಪಶ್ಚಾತಾಪ, ಗೊಂದಲ ಎಲ್ಲವನ್ನೂ ಒಳಗೊಂಡಿದೆ. ಇದು ಕೇವಲ ಹಾಸ್ಯವನ್ನಷ್ಟೇ ಹೇಳದೇ, ಜೀವನದ ಮೌಲ್ಯಗಳನ್ನೂ ಕೂಡ ಹೇಳುತ್ತದೆ" ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಇನ್ನು ನಿರ್ದೇಶಕ ಶ್ರೀನಿಧಿ ಬೆಂಗಳೂರು ಮಾತನಾಡಿ, "ನಮ್ಮ ಕಾಪಿ ನಾವು ನೋಡಲು ಬಯಸದ ನಮ್ಮ ಒಂದು ವ್ಯಕ್ತಿವವನ್ನು ಬಿಂಬಿಸಿದರೆ ಹೇಗೆ ಇರುತ್ತದೆ? ಜೆರಾಕ್ಸ್‌ ಈ ಒಂದು ಭಯದಿಂದ ಹುಟ್ಟಿದ ಕಥೆ ಎಂದರೆ ತಪ್ಪಾಗಲಾರದು. ಮಳವಳ್ಳಿಯಲ್ಲಿ ನಡೆಯುವ ಈ ಒಂದು ಆಶ್ಚರ್ಯಕರ ಘಟನೆ ಹೇಗೆ ಹಲವಾರು ಹೊಸ ತಿರುವುಗಳಿಗೆ ಕಾರಣವಾಗುತ್ತದೆ, ಹೇಗೆ ಜನರ ಜೀವನವನ್ನು ಬದಲಾಯಿಸುತ್ತದೆ, ಇವೆಲ್ಲವನ್ನೂ ಕುತೂಹಲಕಾರಿಯಾಗಿ ತೋರಿಸುವ ಪ್ರಯತ್ನ ʼಜೆರಾಕ್ಸ್‌ʼ ಆಗಿದೆ." ಎಂದು ತಿಳಿಸಿದರು.

ನಟ ನಾಗಭೂಷಣ ಮಾತನಾಡಿ, "ನಾನು ಪ್ರಕಾಶ ಎಂಬ ಒಬ್ಬ ಸಾಮಾನ್ಯ ಜೆರಾಕ್ಸ್‌ ಅಂಗಡಿ ಕೆಲಸಗಾರನ ಪಾತ್ರವನ್ನು ಇದರಲ್ಲಿ ವಹಿಸಿದ್ದೇನೆ. ತನ್ನ ಜೀವನದಲ್ಲಿ ಆಗುವ ಒಂದು ಘಟನೆಯಿಂದ ಹೇಗೆ ಅವನ ಜೀವನ ಸಂಪೂರ್ಣವಾಗಿ ಬದಲಾಗುತ್ತದೆ ಎಂಬುದನ್ನು ಕಥೆಯು ಹೇಳುತ್ತದೆ. ಪ್ರಕಾಶ ಸಾಮಾನ್ಯ ವ್ಯಕ್ತಿ, ಪ್ರಭಾವಿಯಲ್ಲ. ಆದರೆ ಈ ಘಟನೆಯ ನಂತರ ಎಲ್ಲರ ಜೀವನದಲ್ಲಿ ನಡೆಯುವ ಘಟನೆಗಳಿಗೆ ಇವನು ಕಾರಣಕರ್ತನಾಗಿರುತ್ತಾನೆ. ಅವನು ಶಕ್ತಿಶಾಲಿಯೇನಲ್ಲ, ಕೆಟ್ಟವನೂ ಅಲ್ಲ. ಆದರೆ ಎಲ್ಲದರ ಹಿಂದೆ ಇವನ ಕೈವಾಡವಿರುತ್ತದೆ. ಇದೊಂದು ವಿಭಿನ್ನವಾದ ಪಾತ್ರ. ವಿವಿಧ ಬಣ್ಣಗಳುಳ್ಳ ಪಾತ್ರ ಎಂದರೆ ತಪ್ಪಾಗಲಾರದು" ಎಂದು ಹೇಳಿದರು.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ