ಸರಸ್ವತಿ ಜಾಗೀರ್ದಾರ್

ಟಾಲಿವುಡ್‌ನ ಪವರ್‌ಸ್ಟಾರ್ ಹಾಗೂ ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ತಮ್ಮ ಅಭಿಮಾನಿಗಳಿಗೆ ಸರ್ಪ್ರೈಸ್ ಕೊಟ್ಟಿದ್ದಾರೆ. ಡಿಸಿಎಂ ಸ್ಥಾನಕ್ಕೇರಿದ ಬಳಿಕ ಪವನ್ ರಾಜಕೀಯದಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾಗಿಬಿಟ್ಟಿದ್ದರು. ಹೀಗಾಗಿ ಸಿನಿಮಾಗಳಿಗೆ ಬ್ರೇಕ್ ಕೊಟ್ಟಿದ್ದರು. ಇದೀಗ ಪವನ್ ಕಲ್ಯಾಣ್ ನಟನೆಯ ಬಹುನಿರೀಕ್ಷಿತ ಸಿನಿಮಾ ಹರಿ ಹರ ವೀರ ಮಲ್ಲು-1 ಮೊದಲ ಹಾಡು ಬಿಡುಗಡೆಯಾಗಿದೆ.

ಕನ್ನಡ, ತೆಲುಗು, ಹಿಂದಿ, ತಮಿಳು ಹಾಗೂ ಮಲಯಾಳಂ ಭಾಷೆಯಲ್ಲಿ ಹರಿ ಹರ ವೀರ ಮಲ್ಲು-1 ಸಿನಿಮಾದ ಮೊದಲ ಹಾಡು ಅನಾವರಣ ಮಾಡಲಾಗಿದೆ. ಮಾತು ಕೇಳಯ್ಯ ಅಂತಾ ಪವನ್ ಕನ್ನಡದಲ್ಲಿಯೇ ಧ್ವನಿ ಕುಣಿಸಿದ್ದಾರೆ. ಕನ್ನಡ ಮಾತ್ರವಲ್ಲ ಎಲ್ಲಾ ಭಾಷೆಯಲ್ಲಿಯೂ ಪವರ್ ಸ್ಟಾರ್ ಹಾಡನ್ನು ಹಾಡಿರುವುದು ವಿಶೇಷ. ಜನಪದ ಶೈಲಿಯಲ್ಲಿ ಮೂಡಿಬಂದಿರುವ ಗೀತೆಗೆ ಆಸ್ಕರ್ ವಿಜೇತ ಎಂ ಎಂ ಕೀರವಾಣಿ ಟ್ಯೂನ್ ಹಾಕಿದ್ದಾರೆ. ಕನ್ನಡ ಹಾಡಿಗೆ ವರದರಾಜು ಚಿಕ್ಕಬಳ್ಳಾಪುರ ಸಾಹಿತ್ಯ ಬರೆದಿದ್ದಾರೆ.

ಹರಿ ಹರ ವೀರ ಮಲ್ಲುವಾಗಿ ಪವನ್ ಕಲ್ಯಾಣ್ ಸಿನಿಮಾದಲ್ಲಿ ಅಬ್ಬರಿಸಿದ್ದಾರೆ. 17ನೇ ಶತಮಾನದಲ್ಲಿ ಮೊಘಲ್ ಸಾಮ್ರಾಟ್ಯದ ವಿರುದ್ಧ ಹೋರಾಡಿದ ನಾಯಕನಾಗಿ ಪವರ್ ಸ್ಟಾರ್ ಮಿಂಚಿದ್ದಾರೆ. ಜ್ಯೋತಿ ಕೃಷ್ಣ ಮತ್ತು ಕ್ರಿಶ್ ಜಗರ್ಲಮುಡಿ ನಿರ್ದೇಶನದಲ್ಲಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಚಿತ್ರ ಮೂಡಿಬಂದಿದೆ. ಬಾಬಿ ಡಿಯೋಲ್, ನಿಧಿ ಅಗರ್ವಾಲ್, ನರ್ಗಿಸ್ ಫಕ್ರಿ ಮತ್ತು ನೋರಾ ಫತೇಹಿ ಸೇರಿದಂತೆ ಹಲವರು ತಾರಾಬಳಗದಲ್ಲಿದ್ದಾರೆ. ಮಾರ್ಚ್ 28ಕ್ಕೆ ಹರಿ ಹರ ವೀರ ಮಲ್ಲು ಮೊದಲ ಭಾಗ ವಿಶ್ವಾದ್ಯಂತ ತೆರೆಗೆ ಬರ್ತಿದೆ.

 

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ