-  ರಾಘವೇಂದ್ರ ಅಡಿಗ ಎಚ್ಚೆನ್.

ಪ್ರಜ್ವಲ್ ದೇವರಾಜ್, ರಾಜ್ ಬಿ ಶೆಟ್ಟಿ, ಮಿತ್ರ, ರಮೇಶ್ ಅರವಿಂದ್ ಸೇರಿದಂತೆ ದೊಡ್ಡ ತಾರಾಬಳಗ ಹೊಂದಿರುವ ಕರಾವಳಿಸಿನಿಮಾ ಜುಲೈ 24ರಂದು ರಾಜ್ಯಾದ್ಯಂತ ಬಿಡುಗಡೆಯಾಗಿದೆ. ಸಿನಿಮಾ ಬಿಡುಗಡೆಗೂ ಮುನ್ನ ಡಬ್ಬಿಂಗ್ ವಿವಾದದಿಂದ ಸುದ್ದಿಯಾಗಿದ್ದ ಚಿತ್ರದ ಬಗ್ಗೆ ಇದೀಗ ನಟ ಪ್ರಜ್ವಲ್ ದೇವರಾಜ್ ತಮ್ಮ ಮೌನ ಮುರಿದಿದ್ದಾರೆ.

ಗುರುದತ್ ಗಾಣಿಗ ನಿರ್ದೇಶನದ ‘ಕರಾವಳಿ’ ಸಿನಿಮಾದ ಪ್ರೀಮಿಯರ್ ಶೋಗಳಿಗೆ ಈಗಾಗಲೇ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಪ್ರೇಕ್ಷಕರು ಚಿತ್ರದ ಕಥೆ ಮತ್ತು ನಿರೂಪಣೆಯನ್ನು ಮೆಚ್ಚಿಕೊಂಡಿದ್ದಾರೆ.

ಆದರೆ, ಸಿನಿಮಾ ಬಿಡುಗಡೆಗೂ ಮುನ್ನ ನಾಯಕ ನಟ ಪ್ರಜ್ವಲ್ ದೇವರಾಜ್ ಮತ್ತು ನಿರ್ದೇಶಕ ಗುರುದತ್ ಗಾಣಿಗ ನಡುವೆ ಉಂಟಾದ ಭಿನ್ನಾಭಿಪ್ರಾಯ ದೊಡ್ಡ ಚರ್ಚೆಗೆ ಕಾರಣವಾಗಿತ್ತು. ಪ್ರಜ್ವಲ್ ಅವರಿಂದ ಪಾತ್ರಕ್ಕೆ ಡಬ್ಬಿಂಗ್ ಮಾಡಿಸದೇ ಬೇರೆ ಧ್ವನಿ ಬಳಸಿರುವುದು ವಿವಾದಕ್ಕೆ ಕಾರಣವಾಗಿತ್ತು.

ಈ ಬಗ್ಗೆ ಮಾತನಾಡಿದ ಪ್ರಜ್ವಲ್ ದೇವರಾಜ್, ತಮ್ಮ ಅನುಮತಿ ಇಲ್ಲದೆ ಮತ್ತೊಬ್ಬರಿಂದ ಡಬ್ಬಿಂಗ್ ಮಾಡಿಸಿರುವುದು ನೋವು ತಂದಿದೆ ಎಂದು ಹೇಳಿದ್ದಾರೆ.

“ಯಾವುದೇ ನಟನ ಒಪ್ಪಿಗೆ ಇಲ್ಲದೆ ಅವರ ಪಾತ್ರಕ್ಕೆ ಮತ್ತೊಬ್ಬರಿಂದ ಧ್ವನಿ ನೀಡಿಸುವಂತಿಲ್ಲ. ಅದು ನಟನ ಹಕ್ಕಿನ ವಿಚಾರ. ನಟನಿಂದ ಎನ್‌ಒಸಿ ಪಡೆದ ಬಳಿಕವೇ ಬೇರೆಯವರಿಂದ ಡಬ್ಬಿಂಗ್ ಮಾಡಿಸಬಹುದು” ಎಂದು ಪ್ರಜ್ವಲ್ ತಿಳಿಸಿದ್ದಾರೆ.

ತಮ್ಮ ಸುತ್ತಲಿನ ಕೆಲವರು ಸಿನಿಮಾದ ವಿರುದ್ಧ ಕಾನೂನು ಹೋರಾಟ ನಡೆಸುವಂತೆ ಸಲಹೆ ನೀಡಿದ್ದರು ಎಂದು ಹೇಳಿದ ಅವರು, ಬಿಡುಗಡೆಗೆ ತಡೆಯಾಜ್ಞೆ ತರುವ ನಿರ್ಧಾರವನ್ನು ತಾವು ತೆಗೆದುಕೊಳ್ಳಲಿಲ್ಲ ಎಂದಿದ್ದಾರೆ.

“ಈ ಸಿನಿಮಾಗಾಗಿ ಹಲವಾರು ಕಲಾವಿದರು ಮತ್ತು ತಂತ್ರಜ್ಞರು ವರ್ಷಗಳ ಕಾಲ ದುಡಿದಿದ್ದಾರೆ. ನನ್ನೊಬ್ಬನಿಗೆ ಅನ್ಯಾಯವಾಗಿದೆ ಎಂದು ಇಡೀ ಸಿನಿಮಾಗೆ ಸಮಸ್ಯೆ ಮಾಡುವುದು ಸರಿಯಲ್ಲ ಎಂದು ನಾನು ಭಾವಿಸಿದೆ. ನಮ್ಮ ಭಿನ್ನಾಭಿಪ್ರಾಯಗಳಿಗಿಂತ ಸಿನಿಮಾ ದೊಡ್ಡದು” ಎಂದು ಹೇಳಿದ್ದಾರೆ.

‘ಕರಾವಳಿ’ ಸಿನಿಮಾ ಬಗ್ಗೆ ತಮಗೆ ಸಾಕಷ್ಟು ನಿರೀಕ್ಷೆ ಇತ್ತು. ಕನ್ನಡ ಚಿತ್ರರಂಗದ ಮಟ್ಟವನ್ನು ಹೆಚ್ಚಿಸುವ ಸಿನಿಮಾ ಆಗಲಿದೆ ಎಂಬ ನಂಬಿಕೆಯಿಂದ ಕೆಲಸ ಮಾಡಿದ್ದೆ ಎಂದು ಪ್ರಜ್ವಲ್ ಹೇಳಿದ್ದಾರೆ.

ಸಿನಿಮಾ ಪ್ರೇಕ್ಷಕರಿಂದ ಮೆಚ್ಚುಗೆ ಪಡೆಯುತ್ತಿರುವುದು ಸಂತೋಷ ತಂದಿದೆ. ಆದರೆ, ಸಂಪೂರ್ಣವಾಗಿ ಚಿತ್ರದ ಭಾಗವಾಗಲು ಸಾಧ್ಯವಾಗದಿರುವ ಬಗ್ಗೆ ಬೇಸರವಿದೆ ಎಂದು ಅವರು ತಿಳಿಸಿದ್ದಾರೆ.

ಸಂಭಾವನೆ ಸೇರಿದಂತೆ ಹಲವು ವಿಚಾರಗಳಲ್ಲಿ ಉಂಟಾದ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ ಪ್ರಜ್ವಲ್ ಅವರಿಂದ ಡಬ್ಬಿಂಗ್ ಮಾಡಿಸದೆ ಬೇರೆ ಕಲಾವಿದರಿಂದ ಧ್ವನಿ ನೀಡಿಸಲಾಗಿದೆ ಎನ್ನಲಾಗಿತ್ತು. ಈ ವಿಚಾರವನ್ನು ಅಭಿಮಾನಿಗಳು ಕೂಡ ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಪ್ರಶ್ನಿಸಿದ್ದರು.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ