– ರಾಘವೇಂದ್ರ ಅಡಿಗ ಎಚ್ಚೆನ್.
ಮಹಾಲಯ ಅಮಾವಾಸ್ಯೆ ಹಿನ್ನೆಲೆ ಕಾಶಿ ವಿಶ್ವೇಶ್ವರ ಸ್ವಾಮಿ ದೇವಾಲಯದಲ್ಲಿ ನಟ ಧ್ರುವ ಸರ್ಜಾ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಕಾಶಿ ವಿಶ್ವೇಶ್ವರ ಸ್ವಾಮಿಗೆ ವಿಶೇಷ ಪೂಜೆ ಹಾಗೂ ರುದ್ರಾಭಿಷೇಕ ಮಾಡಿದ್ದು, ಕಾಲಬೈರವನಿಗೆ ವಿಶೇಷ ಅಭಿಷೇಕ ನೆರವೇರಿಸಿದ್ದಾರೆ. ಧ್ರುವ ಸರ್ಜಾ ವಿಶೇಷ ಪೂಜೆ ಸಲ್ಲಿಕೆ ವೇಳೆ ಪೂರ್ವ ವಲಯ ಡಿಸಿಪಿ ಡಿ.ದೇವರಾಜ್ ಸಹ ಪೂಜೆಯಲ್ಲಿ ಭಾಗಿಯಾಗಿದ್ದರು.
ಕೆಲವೇ ದಿನಗಳಲ್ಲಿ ತಮ್ಮ ಬಹುನಿರೀಕ್ಷೆಯ ಕೆ.ಡಿ ಸಿನಿಮಾ ಬಿಡುಗಡೆಯಾಗುತ್ತಿರುವ ಹಿನ್ನೆಲೆಯಲ್ಲಿ ನಟ ಧ್ರುವ ಸರ್ಜಾ ದೇವರ ಮೊರೆ ಹೋಗಿದ್ದಾರೆ.
ಕೋಲಾರ ತಾಲ್ಲೂಕಿನ ಕೋರಗಂಡನಹಳ್ಳಿಯ ಕಾಶಿ ವಿಶ್ವನಾಥ ಸನ್ನಿಧಿಯಲ್ಲಿ ವಿಶೇಷ ಹೋಮ, ಪೂಜೆ ನೆರವೇರಿಸಿದ್ದಾರೆ. ದೇವಾಲಯದಲ್ಲಿ ಅಮಾವಾಸ್ಯೆ ಪೂಜೆಯಲ್ಲಿ ಭಾಗಿಯಾಗಿದ್ದರು.
ಈ ದೇಗುಲ ಸಾವಿರಾರು ವರ್ಷಗಳ ಇತಿಹಾಸ ಹೊಂದಿದೆ. ಧ್ರುವ ಸರ್ಜಾ ಅವರ ಜೊತೆಯಲ್ಲಿ ಬೆಂಗಳೂರು ಪೂರ್ವ ವಲಯದ ಡಿಸಿಪಿ ಡಿ.ದೇವರಾಜ್ ಇದ್ದರು. ಅವರು ಕೂಡ ಪೂಜೆಯಲ್ಲಿ ಭಾಗಿಯಾಗಿದ್ದರು.
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ