ಬಾಲಿವುಡ್ ನಟಿ ಕತ್ರೀನಾ ಕೈಫ್ ಹಾಗೂ ಪತಿ ವಿಕ್ಕಿ ಕೌಶಲ್ ತಮ್ಮ ದಾಂಪತ್ಯದ ಮಹತ್ವದ ವಿಚಾರವನ್ನು ಹಂಚಿಕೊಂಡಿದ್ದಾರೆ.

ನಟಿ ಕತ್ರೀನಾ ಕೈಫ್ ಗರ್ಭಿಣಿಯಾಗಿದ್ದಾರೆ ಎಂದು ಕಳೆದ ಕೆಲವು ದಿನಗಳಿಂದ ಸುದ್ದಿ ಹರಿದಾಡುತ್ತಿತ್ತು. ಇದೀಗ ಕತ್ರೀನಾ ಕೈಫ್ ಮತ್ತು ವಿಕ್ಕಿ ಕೌಶಲ್ ಇಬ್ಬರೂ ತಮ್ಮ ಇನ್ಸ್​ಟಾದಲ್ಲಿ ಫೋಟೋ ಶೇರ್​ ಮಾಡಿದ್ದಾರೆ.

ಕತ್ರೀನಾ ತುಂಬು ಗರ್ಭಿಣಿಯಾಗಿರುವ ಪೋಟೋವನ್ನು ವಿಕ್ಕಿ ಕೌಶಲ್ ಮತ್ತು ಕತ್ರೀನಾ ಇಬ್ಬರೂ ಶೇರ್ ಮಾಡಿದ್ದಾರೆ. ನಾವು ನಮ್ಮ ಜೀವನದ ಉತ್ತಮ ಅಧ್ಯಾಯ ಆರಂಭಿಸುವ ಹಾದಿಯಲ್ಲಿದ್ದೇವೆ. ಹೃದಯ ಸಂಪೂರ್ಣ ಸಂತೋಷದಿಂದ ತುಂಬಿದೆ. ಕೃತಜ್ಞತೆಯಿಂದ ಇದ್ದೇವೆ ಎಂದು ಇಬ್ಬರೂ ಹೇಳಿಕೊಂಡಿದ್ದಾರೆ.

ನಟಿ ಕತ್ರೀನಾ ಕೈಫ್ ಈಗಾಗಲೇ ಸಿನಿಮಾಗಳಿಂದ ಬ್ರೇಕ್ ತೆಗೆದುಕೊಂಡಿದ್ದಾರೆ. 2021 ರಲ್ಲಿ ಕತ್ರೀನಾ ಕೈಫ್ ಮತ್ತು ವಿಕ್ಕಿ ಕೌಶಲ್ ರಾಜಸ್ಥಾನದ ಬರ್ವಾರಾದಲ್ಲಿರುವ ಸಿಕ್ಸ್ ಸೆನ್ಸಸ್ ಪೋರ್ಟ್​ನಲ್ಲಿ ವಿವಾಹವಾಗಿದ್ದರು.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ