ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೆಡಿ ದಿ ಡೆವಿಲ್ ಚಿತ್ರದ ಹಾಡಿನ ವಿವಾದಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ನೋರಾ ಫತೇಹಿ ಮೊದಲ ಬಾರಿಗೆ ಮೌನ ಮುರಿದಿದ್ದು, ನಿರ್ದೇಶಕ ಪ್ರೇಮ್ ಕುರಿತು ಶಾಕಿಂಗ್ ಹೇಳಿಕೆ ನೀಡಿದ್ದಾರೆ.

‘ಕೆಡಿ’ (KD) ಸಿನಿಮಾದ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು ಭಾರಿ ವಿವಾದಕ್ಕೆ ಕಾರಣವಾಗಿದ್ದು, ಈ ಹಾಡಿನಲ್ಲಿ ಅಶ್ಲೀಲ ಸಾಹಿತ್ಯ ಇದೆ ಎಂಬ ಕಾರಣಕ್ಕೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ.

ಉತ್ತರ ಭಾರತದಲ್ಲಿ ಈ ಚಿತ್ರದ ಹಿಂದಿ ಅವತರಣಿಕೆಯ ಹಾಡಿಗೆ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಹಿಂದಿ ಆವೃತ್ತಿಯ ಹಾಡನ್ನು ನಿರ್ಬಂಧಿಸಿ ಡಿಲೀಟ್ ಮಾಡಲಾಗಿದೆ.

ಅಲ್ಲದೆ ಈ ಹಾಡಿನಲ್ಲಿ ನರ್ತಿಸಿರುವ ನಟಿ ನೋರಾ ಫತೇಹಿ ವಿರುದ್ಧವೂ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ತಮ್ಮ ವಿರುದ್ಧ ಕೇಳಿಬರುತ್ತಿರುವ ಟೀಕೆಗಳಿಗೆ ನಟಿ ನೋರಾ ಫತೇಹಿ ಅವರು ಮೊದಲ ಬಾರಿಗೆ ಮಾತನಾಡಿದ್ದಾರೆ.

 ಅಂದೇ ಎಚ್ಚರಿಸಿದ್ದೆ: ತಮ್ಮ ಇನ್ಸ್​ಟಾದಲ್ಲಿ ಈ ಬಗ್ಗೆ ವಿಡಿಯೋ ಮೂಲಕ ಮಾತನಾಡಿರುವ ನಟಿ ನೋರಾ ಫತೇಹಿ, '‘ಕೆಲವು ವಿಷಯಗಳನ್ನು ನಾನು ಸ್ಪಷ್ಟಪಡಿಸಬೇಕಿದೆ. ನಾನು ಈ ಹಾಡನ್ನು 3 ವರ್ಷಗಳ ಹಿಂದೆ ಕನ್ನಡ ಭಾಷೆಯಲ್ಲಿ ಚಿತ್ರೀಕರಿಸಿದ್ದು, ಸಂಜಯ್ ದತ್ ಅವರಂತಹ ದೊಡ್ಡ ಕಲಾವಿದರು ಇರುವ ದೊಡ್ಡ ಸಿನಿಮಾ ಎಂಬ ಕಾರಣಕ್ಕೆ ನಾನು ಒಪ್ಪಿಕೊಂಡಿದ್ದೆ.

ಕನ್ನಡ ಭಾಷೆ ನನಗೆ ತಿಳಿಯುವುದಿಲ್ಲ. ಹಾಡಿನಲ್ಲಿ ಇಷ್ಟು ಕೆಟ್ಟ ಸಾಹಿತ್ಯ ಇದೆ ಎಂಬುದು ನನಗೆ ಗೊತ್ತೇ ಇರಲಿಲ್ಲ. ಶೂಟಿಂಗ್ ಮಾಡುವಾಗ ಹಾಡಿನ ಅರ್ಥ ತಿಳಿಯಲು ನಾನು ಚಿತ್ರತಂಡದ ಮೇಲೆ ಅವಲಂಬಿತಳಾಗಿದ್ದೆ. ಅವರು ಭಾಷಾಂತರ ಮಾಡಿ ಹೇಳಿದಾಗ ನನಗೆ ಯಾವುದೂ ಅಸಭ್ಯ ಅಂತ ಅನಿಸಿರಲಿಲ್ಲ’ ಎಂದು ನೋರಾ ಫತೇಹಿ ಹೇಳಿದ್ದಾರೆ.

‘ಆದರೆ ಈಗ ಹಿಂದಿಗೆ ಭಾಷಾಂತರ ಮಾಡಿರುವುದು ತುಂಬ ಆಕ್ಷೇಪಾರ್ಹವಾಗಿದೆ. ಅದರ ಬಗ್ಗೆ ನನಗೆ ಮಾಹಿತಿಯೇ ಇರಲಿಲ್ಲ. ಚಿತ್ರತಂಡದವರು ನನ್ನ ಅನುಮತಿ ಪಡೆದುಕೊಂಡಿಲ್ಲ. ಹಾಡು ಬಿಡುಗಡೆಗೆ ನನ್ನನ್ನು ಕರೆದಾಗ ನನ್ನ ಫೋಟೋಗಳನ್ನು ಬಳಸಿದ ರೀತಿ ಕಂಡು ನನಗೆ ಬೇಸರವಾಯಿತು. ನನ್ನ ಮತ್ತು ಸಂಜಯ್ ದತ್ ಅವರ ಫೋಟೋಗಳನ್ನು ಎಐ ಮೂಲಕ ಸೃಷ್ಟಿಸಿ ಬಳಸಿದ್ದಾರೆ. ಅದನ್ನು ನಾನು ವಿರೋಧಿಸುತ್ತೇನೆ. ಹಾಡಿನ ಬಿಡುಗಡೆ ಕಾರ್ಯಕ್ರಮದಲ್ಲೇ ನನಗೆ ಕಿರಿಕಿರಿ ಆಯಿತು’ ಎಂದು ನೋರಾ ಫತೇಹಿ ಹೇಳಿದ್ದಾರೆ.

ನನ್ನ ಘನತೆಗೆ ಧಕ್ಕೆ: ಅಂತೆಯೇ ‘ನಾನು ಅಲ್ಲಿ ಎಲ್ಲರ ಎದುರು ಗೌರವಯುತವಾಗಿ ನಡೆದುಕೊಳ್ಳಲೇ ಬೇಕಿತ್ತು. ಹಿಂದಿ ವರ್ಷನ್ ಹಾಡು ಪ್ಲೇ ಮಾಡಿದಾಗ ನನಗೆ ಎಲ್ಲವೂ ತಿಳಿಯಿತು. ಇದು ವಿವಾದ ಆಗುತ್ತೆ ಎಂಬುದು ಗೊತ್ತಾಯಿತು. ಏಕೆಂದರೆ ನನಗೆ ಹಿಂದಿ ಅರ್ಥವಾಗುತ್ತದೆ ಎಂದಿದ್ದಾರೆ.

ಇದು ಸರಿ ಅಲ್ಲ ಅಂತ ನಾನು ನಿರ್ದೇಶಕರಿಗೆ ಆಗಲೇ ಎಚ್ಚರಿಕೆ ನೀಡಿದ್ದೆ. ನಾನು ಸಿನಿಮಾದಿಂದ ಹೊರಗೆ ಬರುತ್ತೇನೆ. ನಾವು ಯಾವುದೇ ಕಾರಣಕ್ಕೂ ಇದನ್ನು ಪ್ರಚಾರ ಮಾಡಲ್ಲ. ನನ್ನ ಘನತೆಗೆ ಧಕ್ಕೆ ಆಗಿದೆ ಅಂತ ನಿರ್ದೇಶಕರಿಗೆ ಹೇಳಿದೆ’ ಎಂದು ನೋರಾ ಹೇಳಿದ್ದಾರೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ