ಜಾಗೀರ್ದಾರ್*

ಏಪ್ರಿಲ್‌ 14, ಇಂದಿಗೆ "ಕೆಜಿಎಫ್‌ ಚಾಪ್ಟರ್‌ 2" ಸಿನಿಮಾ ಬಿಡುಗಡೆ ಆಗಿ ಮೂರು ವರ್ಷಗಳಾದವು. ಬಾಕ್ಸ್ ಆಫೀಸ್ ದಾಖಲೆಗಳನ್ನು ಮುರಿದು ಭಾರತೀಯ ಆಕ್ಷನ್ ಸಿನಿಮಾಕ್ಕೆ ಹೊಸ ವ್ಯಾಖ್ಯಾನ ನೀಡಿದ ಈ ಸಿನಿಮಾದಲ್ಲಿ ರಾಕಿಂಗ್ ಸ್ಟಾರ್ ಯಶ್ ರಾಕಿ ಭಾಯ್ ಪಾತ್ರದಲ್ಲಿ ಮಿಂಚು ಹರಿಸಿದ್ದರು. ಪ್ರಶಾಂತ್ ನೀಲ್ ನಿರ್ದೇಶನದ ಈ ಸಿನಿಮಾವನ್ನು ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ವಿಜಯ್ ಕಿರಗಂದೂರ್ ನಿರ್ಮಿಸಿದ್ದಾರೆ.

ರವಿ ಬಸ್ರೂರು ಅವರ ಹಿನ್ನೆಲೆ ಸಂಗೀತ, ಭುವನ್‌ ಗೌಡ ಅವರ ಛಾಯಾಗ್ರಹಣ, ಶಿವಕುಮಾರ್‌ ಅವರ ಕಲಾ ನಿರ್ದೇಶನ ಈ ಚಿತ್ರದ ಹೈಲೈಟ್ಸ್‌. ಗಟ್ಟಿ ತಾಂತ್ರಿಕ ಬಳಗದ ಜತೆಗೆ ಘಟಾನುಘಟಿ ಪಾತ್ರವರ್ಗವನ್ನೂ ಹೊಂದಿರುವ ಈ ಸಿನಿಮಾದಲ್ಲಿ ಸಂಜಯ್ ದತ್, ರವೀನಾ ಟಂಡನ್, ಶ್ರೀನಿಧಿ ಶೆಟ್ಟಿ, ಪ್ರಕಾಶ್ ರಾಜ್ ಸಹ ಮೋಡಿ ಮಾಡಿದ್ದರು.

ಕೇವಲ ಕನ್ನಡ ಮಾತ್ರವಲ್ಲದೆ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಯಲ್ಲಿ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ ಬಂದ ಈ ಸಿನಿಮಾ ಹತ್ತಾರು ದಾಖಲೆಗಳನ್ನು ತನ್ನದಾಗಿಸಿಕೊಂಡಿದೆ. ಕನ್ನಡದ ಕೀರ್ತಿ ಪತಾಕೆಯನ್ನು ವಿಶ್ವಮಟ್ಟದಲ್ಲಿಯೂ ಹಾರಿಸಿದೆ ಕೆಜಿಎಫ್‌ ಚಾಪ್ಟರ್‌ 2 ಸಿನಿಮಾ. ಇದೀಗ ಚಾಪ್ಟರ್‌ 3 ಮೇಲೆ ಸಿನಿ ಪ್ರಿಯರ ದೃಷ್ಟಿ ನೆಟ್ಟಿದೆ. ಅದರ ಬಗ್ಗೆಯೂ ಶೀಘ್ರದಲ್ಲಿ ಹೊಂಬಾಳೆ ಫಿಲಂಸ್‌ ಅಪ್‌ಡೇಟ್ ನೀಡಲಿದೆ.

 

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ