ಸರಸ್ವತಿ*

"ಬನಾರಸ್" ಚಿತ್ರದ ಮೂಲಕ ಎಲ್ಲರ ಗಮನ ಸೆಳಿದಿದ್ದ ನಟ ಝೈದ್ ಖಾನ್ ನಾಯಕರಾಗಿ ನಟಿಸಿರುವ , "ಉಪಾಧ್ಯಕ್ಷ" ಸೇರಿದಂತೆ ಯಶಸ್ವಿ ಚಿತ್ರಗಳ ನಿರ್ದೇಶಕ ಅನಿಲ್ ಕುಮಾರ್ ನಿರ್ದೇಶನದ ಹಾಗೂ ರಚಿತರಾಮ್ ಮತ್ತು ಮಲೈಕಾ ನಾಯಕಿಯರಾಗಿ ಅಭಿನಯಿಸಿರುವ ಬಹು ನಿರೀಕ್ಷಿತ "ಕಲ್ಟ್" ಚಿತ್ರದ ಎರಡನೇ ಹಾಡು "ಬ್ಲಡಿ ಲವ್" ಕಿತ್ತೂರು ಉತ್ಸವದಲ್ಲಿ ಬಿಡುಗಡೆಯಾಗಿದೆ. ನಿರ್ದೇಶಕ ಅನಿಲ್ ಕುಮಾರ್ ಅವರೆ ಬರೆದಿರುವ ಈ ಹಾಡನ್ನು ಚಂದನ್ ಶೆಟ್ಟಿ ಹಾಡಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ಮೂಲಕ ಬಿಡುಗಡೆಯಾಗಿರುವ ಈ ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿರುವ ಈ ಚಿತ್ರ 2026 ರ ಜನವರಿ 23 ರಂದು ಬಿಡುಗಡೆಯಾಗುತ್ತಿದೆ. ಹಾಡು ಬಿಡುಗಡೆ ಸಮಾರಂಭದ ನಂತರ ನಾಯಕ ಝೈದ್ ಖಾನ್ ಹಾಗೂ ನಾಯಕಿ ಮಲೈಕಾ ಮಾತನಾಡಿದರು.
ಕಿತ್ತೂರು ಉತ್ಸವಕ್ಕೆ ನಾನು ಇದೇ ಮೊದಲ ಬಾರಿ ಬಂದಿರುವುದು. ಇಲ್ಲಿಗೆ ಬಂದು ಬಹಳ ಖುಷಿಯಾಗಿದೆ ಎಂದು ಮಾತನಾಡಿದ ನಾಯಕ ಝೈದ್ ಖಾನ್, ನಮ್ಮ ಚಿತ್ರದ ಮೊದಲ ಹಾಡು "ಅಯ್ಯೋ ಶಿವನೇ"ಗೆ ತಾವೆಲ್ಲಾ ನೀಡಿದ ಪ್ರೋತ್ಸಾಹಕ್ಕೆ ಧನ್ಯವಾದ. ಎರಡನೇ ಹಾಡು "ಬ್ಲಡಿ ಲವ್" ನಿಮ್ಮೆಲ್ಲರ ಸಮ್ಮುಖದಲ್ಲಿ ಬಿಡುಗಡೆಯಾಗಿದೆ. ಈ ಹಾಡಿಗೂ ನಿಮ್ಮೆಲ್ಲರ ಪ್ರೋತ್ಸಾಹವಿರಲಿ. 2026 ರ ಜನವರಿ 23 ರಂದು ನಮ್ಮ "ಕಲ್ಟ್" ಚಿತ್ರ ತೆರೆಗೆ ಬರುತ್ತಿದೆ. ಲವ್, ಆಕ್ಷನ್,‌ ಸೆಂಟಿಮೆಂಟ್ ಹೀಗೆ ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳು ನಮ್ಮ ಚಿತ್ರದಲ್ಲಿದೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಬೆಂಬಲವಿರಲಿ ಎಂದರು.

kitturu

ನಾನು ದಾವಣಗೆರೆ ಹುಡುಗಿ. ನನ್ನ ನಟನೆಯ ಆರಂಭದ ದಿನಗಳಿಂದಲೂ ತಾವೆಲ್ಲಾ ತೋರುತ್ತಿರುವ ಪ್ರೋತ್ಸಾಹಕ್ಕೆ ಚಿರ ಋಣಿ. ಇಂದು "ಕಲ್ಟ್" ನಮ್ಮ ಚಿತ್ರದ ಎರಡನೇ ಹಾಡು ಬಿಡುಗಡೆಯಾಗಿದೆ. ಚಿತ್ರ ಜನವರಿ 23 ಕ್ಕೆ ತೆರೆಗೆ ಬರಲಿದೆ. ನಿಮ್ಮ ಪ್ರೋತ್ಸಾಹ ಸದಾ ಇರಲಿ ಎಂದರು ನಾಯಕಿ ಮಲೈಕಾ.

kitturu2

ಕೆ.ವಿ.ಎನ್ ಪ್ರೊಡಕ್ಷನ್ಸ್ ಅರ್ಪಿಸುವ, ಲೋಕಿ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ "ಕಲ್ಟ್" ಚಿತ್ರದ ರಚನೆ ಹಾಗೂ ನಿರ್ದೇಶನ ಅನಿಲ್ ಕುಮಾರ್ ಅವರದು. ಜೆ.ಎಸ್ ವಾಲಿ ಛಾಯಾಗ್ರಹಣ, ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

 

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ