– ರಾಘವೇಂದ್ರ ಅಡಿಗ ಎಚ್ಚೆನ್.

‘ಕಾಂತಾರ’ ಎಂಬ ದಂತಕಥೆಯನ್ನು ಸೃಷ್ಟಿಸಿ, ಕನ್ನಡ ಚಿತ್ರರಂಗದ ಕೀರ್ತಿ ಪತಾಕೆಯನ್ನು ವಿಶ್ವದಾದ್ಯಂತ ಹಾರಿಸಿದ ‘ಡಿವೈನ್ ಸ್ಟಾರ್’ ರಿಷಬ್ ಶೆಟ್ಟಿ ಈಗ ‘ಕಾಂತಾರ ಚಾಪ್ಟರ್ 1’ ಮೂಲಕ ಮತ್ತೊಂದು ಮಹಾಕಾವ್ಯಕ್ಕೆ ಸಜ್ಜಾಗಿದ್ದಾರೆ. ಈ ಸಿನಿಮಾದ ಟ್ರೈಲರ್‌‌ಗೆ ಇಡೀ ಭಾರತೀಯ ಚಿತ್ರರಂಗವೇ ಕನ್ನಡದತ್ತ ತಿರುಗಿ ನೋಡುವಂತೆ ಮಾಡಿದೆ. ಈ ಬೆನ್ನಲ್ಲೇ ರಿಷಬ್ ಶೆಟ್ಟಿ ಅವರು ತಮ್ಮ ಯಶಸ್ಸಿನ ಮತ್ತು ನಂಬಿಕೆಯ ಮೂಲ ಬೇರುಗಳತ್ತ ಮುಖ ಮಾಡಿದ್ದಾರೆ.

WhatsApp-Image-2025-09-24-at-10.17.13-AM-1-768x511

‘ಕಾಂತಾರ ಚಾಪ್ಟರ್ 1’ನ ಟ್ರೈಲರ್‌ಗೆ ಸಿಕ್ಕ ಅದ್ಭುತ ಪ್ರತಿಕ್ರಿಯೆಯ ಬೆನ್ನಲ್ಲೇ ರಿಷಬ್ ಶೆಟ್ಟಿ ಅವರು ತಮ್ಮ ಪತ್ನಿ ಪ್ರಗತಿ ಶೆಟ್ಟಿ ಅವರೊಂದಿಗೆ ಪುಣ್ಯಕ್ಷೇತ್ರ ಕೊಲ್ಲೂರು ಶ್ರೀ ಮೂಕಾಂಬಿಕೆಯ ದರ್ಶನ ಪಡೆದಿದ್ದಾರೆ. ಮಂಗಳವಾರ (ಸೆಪ್ಟೆಂಬರ್ 23) ದೇವಸ್ಥಾನಕ್ಕೆ ಭೇಟಿ ನೀಡಿದ ದಂಪತಿ, ತಾಯಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿ, ತಮ್ಮ ಹೊಸ ಚಿತ್ರದ ಯಶಸ್ಸಿಗಾಗಿ ಪ್ರಾರ್ಥಿಸಿದ್ದಾರೆ.
ಕಾಂತಾರ ಚಾಪ್ಟರ್‌ 1 ಇದೇ ಅಕ್ಟೋಬರ್‌ 2 ರಂದು ರಾಜ್ಯಾದ್ಯಂತ ತೆರೆಗೆ ಅಪ್ಪಳಿಸಲಿದೆ. ದೇಶ-ವಿದೇಶಗಳಲ್ಲೂ ಸಿನಿಮಾ ಬಿಡುಗಡೆಗೆ ಚಿತ್ರತಂಡ ಸಿದ್ಧತೆ ನಡೆಸಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಭಾಷೆಗಳಲ್ಲೂ ಸಿನಿಮಾ ರಿಲೀಸ್‌ ಆಗಲಿದೆ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ