ಸ್ಯಾಂಡಲ್​ವುಡ್​ ನಟಿ ಕೃಷಿ ತಾಪಂಡ ಅವರ ಆಪ್ತ ಸ್ನೇಹಿತ ವೈಶಾಕ್ ಅವರ ಆತ್ಮಹತ್ಯೆ ಬೆನ್ನಲ್ಲೇ, ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ಅನಗತ್ಯ ಊಹಾಪೋಹಗಳು ಹರಿದಾಡುತ್ತಿದ್ದವು. ಇದೀಗ ಕೃಷಿ ತಾಪಂಡ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಸರಣಿ ಪೋಸ್ಟ್ ಹಂಚಿಕೊಂಡಿದ್ದಾರೆ.

ತಮ್ಮ ನೋವು, ಆಪ್ತ ಸ್ನೇಹಿತನ ನೆನಪು ಮತ್ತು ಮಾಧ್ಯಮಗಳ ಅತಿರೇಕದ ವರ್ತನೆಯ ಬಗ್ಗೆ ಅವರು ಅತ್ಯಂತ ಭಾವುಕವಾಗಿ ಪ್ರತಿಕ್ರಿಯಿಸಿದ್ದಾರೆ.

ಕೃಷಿ ತಾಪಂಡ ಹಂಚಿಕೊಂಡ ಪೋಸ್ಟ್‌‌ನಲ್ಲಿ “ಇಂತಹ ಒಂದು ಬರಹವನ್ನು ಬರೆಯಬೇಕಾಗುತ್ತದೆ ಎಂದು ನಾನು ಎಂದಿಗೂ ಊಹಿಸಿರಲಿಲ್ಲ. ನನಗೆ ಅತ್ಯಂತ ಆಪ್ತವಾಗಿದ್ದ, ಯಾವಾಗಲೂ ನನ್ನ ಬೆನ್ನಿಗೆ ನಿಂತಿದ್ದ ವ್ಯಕ್ತಿಯನ್ನು ಕಳೆದುಕೊಂಡಿರುವ ನೋವಿನಿಂದ ಇನ್ನೂ ಹೊರಬರಲು ಸಾಧ್ಯವಾಗುತ್ತಿಲ್ಲ. ಈ ದುಃಖವನ್ನು ಪದಗಳಲ್ಲಿ ವಿವರಿಸಲು ಸಾಧ್ಯವಿಲ್ಲ,” ಎಂದು ಭಾವುಕರಾಗಿ ಬರೆದುಕೊಂಡಿದ್ದಾರೆ.

ಕಳೆದ ಕೆಲವು ದಿನಗಳಿಂದ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಚರ್ಚೆಗಳ ಕುರಿತು ಅಸಮಾಧಾನ ವ್ಯಕ್ತಪಡಿಸಿರುವ ಅವರು, ಕೆಲ ಮಾಧ್ಯಮಗಳು ಗೌರವಯುತವಾಗಿ ವರ್ತಿಸಿದರೆ, ಇನ್ನೂ ಕೆಲವರು ಕೇವಲ ಪ್ರತಿಕ್ರಿಯೆ ಪಡೆಯುವ ಉದ್ದೇಶದಿಂದ ನಿರಂತರವಾಗಿ ಸಂಪರ್ಕಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

“ನೀವು ಹೇಗಿದ್ದೀರಾ ಎಂದು ಕೇಳುವ ಬದಲು, ನಿಮ್ಮ ರಿಯಾಕ್ಷನ್ ಏನು ಎಂದು ಮಾತ್ರ ಕೇಳುತ್ತಿದ್ದಾರೆ. ಒಂದು ಕುಟುಂಬ ತನ್ನ ಮಗನನ್ನು ಕಳೆದುಕೊಂಡ ನೋವಿನಲ್ಲಿ ಇದೆ. ಸ್ನೇಹಿತರು ತಮ್ಮ ಆತ್ಮೀಯರನ್ನು ಕಳೆದುಕೊಂಡ ದುಃಖದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಊಹಾಪೋಹಗಳು, ಸುಳ್ಳು ಕಥೆಗಳು ಹಾಗೂ ಅನಗತ್ಯ ಪ್ರಶ್ನೆಗಳು ಉಳಿದವರ ನೋವನ್ನು ಮತ್ತಷ್ಟು ಹೆಚ್ಚಿಸುತ್ತವೆ,” ದಯವಿಟ್ಟು ಇದನ್ನು ಇಲ್ಲಿಯೇ ನಿಲ್ಲಿಸಿ ಎಂದು ಕೈಮುಗಿದು ಮನವಿ ಮಾಡಿದ್ದಾರೆ ಕೃಷಿ ತಾಪಂಡ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ