ವಿಭಾ *

ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂತಸದ ಸಮಯದಲ್ಲಿ ನೂತನ ಚಿತ್ರದ ಘೋಷಣೆಯಾಗಿದೆ.

ಎಸ್ ವಿ ಸಿ ಫಿಲಂಸ್ ಲಾಂಛನದಲ್ಲಿ ಎಂ.ಮುನೇಗೌಡ ಅವರು ನಿರ್ಮಿಸುತ್ತಿರುವ "ಪ್ರೊಡಕ್ಷನ್ ನಂ 3" ಚಿತ್ರವನ್ನು "ಬಹದ್ದೂರ್", "ಭರ್ಜರಿ ", "ಭರಾಟೆ", "ಜೇಮ್ಸ್" ನಂತಹ ಸೂಪರ್ ಹಿಟ್ ಚಿತ್ರಗಳನ್ನು ನಿರ್ದೇಶಿಸಿರುವ ಚೇತನ್ ಕುಮಾರ್ ನಿರ್ದೇಶಿಸುತ್ತಿದ್ದಾರೆ. ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸುತ್ತಿದ್ದಾರೆ. ಗಣೇಶ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ತಮ್ಮ ಸಂಸ್ಥೆಯ ಮೂರನೇ ಚಿತ್ರವನ್ನು ಘೋಷಿಸಿರುವ ನಿರ್ಮಾಪಕ ಎಂ ಮುನೇಗೌಡ ಅವರು ಗಣೇಶ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ಈ ಹಿಂದೆ "ಭುವನಂ ಗಗನಂ" ನಿರ್ಮಿಸಿದ್ದ ಎಂ.ಮುನೇಗೌಡ ಅವರು ಪ್ರಸ್ತುತ "ಅಯೋಗ್ಯ ೨" ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈಗ ಮೂರನೇ ಚಿತ್ರದ ನಿರ್ಮಾಣಕ್ಕೆ ಮುಂದಾಗಿದ್ದಾರೆ‌.

kumar1

ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಚೇತನ್ ಕುಮಾರ್ ಅವರ ಕಾಂಬಿನೇಶನ್ ನಲ್ಲಿ ಮೂಡಿಬರುತ್ತಿರುವ ಮೊದಲ ಚಿತ್ರವಿದು. ಈ ನೂತನ ಚಿತ್ರದ ಚಿತ್ರೀಕರಣ ಅಕ್ಟೋಬರ್ ನಲ್ಲಿ ಆರಂಭವಾಗಲಿದೆ. ಶಿವು ಗೌಡ ಅವರು ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ "ಪ್ರೊಡಕ್ಷನ್ ನಂ ೩" ಚಿತ್ರದ ತಾರಾಬಳಗ ಹಾಗೂ ತಂತ್ರಜ್ಞರ ಕುರಿತು ಹೆಚ್ಚಿನ ಮಾಹಿತಿ ಸದ್ಯದಲ್ಲೇ ಹೊರ ಬೀಳಲಿದೆ.

 

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ