ಸರಸ್ವತಿ ಜಾಗೀರ್ದಾರ್*

ಕನ್ನಡದಲ್ಲಿ ಈಗಾಗಲೇ ‘ಅಮೃತ್ ಅಪಾರ್ಟ್ಮೆಂಟ್’ ಮತ್ತು ‘ದ ಜಡ್ಜ್ ಮೆಂಟ್’ ಸಿನೆಮಾಗಳನ್ನು ನಿರ್ದೇಶಿಸಿ ಸೈ ಎನಿಸಿಕೊಂಡಿರುವ ನಿರ್ದೇಶಕ ಕಂ ನಿರ್ಮಾಪಕ ಗುರುರಾಜ ಕುಲಕರ್ಣಿ (ನಾಡಗೌಡ) ಸದ್ದಿಲ್ಲದೆ ಹೊಸ ಸಿನೆಮಾಕ್ಕೆ ತಯಾರಿ ನಡೆಸಿದ್ದಾರೆ. ಬಹುಭಾಷೆಗಳಲ್ಲಿ ಏಕಕಾಲಕ್ಕೆ ನಿರ್ಮಾಣವಾಗುತ್ತಿರುವ ಈ ಸಿನೆಮಾದ ಕಥಾಹಂದರ ಈಗಾಗಲೇ ಪೂರ್ಣಗೊಂಡಿದ್ದು, ಈ ಸಿನೆಮಾಕ್ಕೆ ಹಿಂದಿಯ ‘ಲಾಪತ ಲೇಡಿಸ್’ ಖ್ಯಾತಿಯ ಸೋನು ಆನಂದ್ ಬರಹಗಾರರಾಗಿ ಎಂಟ್ರಿಯಾಗಿದ್ದಾರೆ.

ಇತ್ತೀಚೆಗಷ್ಟೇ ಹಿಂದಿಯ ‘ಲಾಪತ ಲೇಡಿಸ್’ ಸಿನೆಮಾ ಭಾರತದಿಂದ ಅಧಿಕೃತವಾಗಿ ‘ಆಸ್ಕರ್ ಪ್ರಶಸ್ತಿ’ ನಾಮನಿರ್ದೇಶನವಾಗಿದೆ. ‘ಆಮೀರ್ ಖಾನ್ ಪ್ರೊಡಕ್ಷನ್’ ನಿರ್ಮಾಣದ ಈ ಸಿನೆಮಾಕ್ಕೆ ಬರಹಗಾರನಾಗಿರುವ ಸೋನು ಆನಂದ್, ಇದೀಗ ಕನ್ನಡದ ಮೂಲಕ ಬಹುಭಾಷೆಗಳಿಗೆ ಹೋಗುತ್ತಿರುವ ಸಿನೆಮಾಕ್ಕೂ ಬರಹಗಾರನಾಗಿ ತೊಡಗಿಸಿಕೊಂಡಿರುವುದು ವಿಶೇಷ.

ಇನ್ನೂ ಹೆಸರಿಡ ಈ ಬಗ್ಗೆ ಮಾಗ್ಗೆ ಮಾತನಾಡುವ ನಿರ್ದೇಶಕ ಕಂ ನಿರ್ಮಾಪಕ ಗುರುರಾಜ ಕುಲಕರ್ಣಿ (ನಾಡಗೌಡ), ‘ಈಗಾಗಲೇ ಐದಾರು ಸಿನೆಮಾಗಳನ್ನು ನಿರ್ಮಿಸಿ, ಎರಡು ಸಿನೆಮಾಗಳನ್ನು ನಿರ್ದೇಶಿಸಿರುವ ನಾನು ಮುಂದೆ ಯಾವ ಥರದ ಸಿನೆಮಾಗಳನ್ನು ಮಾಡಬೇಕು ತಿಳಿಯಲು ಆಡಿಯನ್ಸ್ ಸರ್ವೇ ಮಾಡಿದ್ದೆ. ಈ ಹಿಂದೆ ನಾನು ನಿರ್ದೇಶಿಸಿದ್ದ ‘ದ ಜಡ್ಜ್‌ಮೆಂಟ್‌’ ಚಿತ್ರಕ್ಕೆ ಮೆಚ್ಚುಗೆಯ ವಿಮರ್ಶೆ ಬಂದಿತ್ತು. ಆ ಸಿನೆಮಾದ ಬಳಿಕ ಆನ್ ಲೈನ್ ಮತ್ತು ಆಫ್ ಲೈನ್ ಮೂಲಕ ನಡೆದ ಈ ಸರ್ವೇಯಲ್ಲಿ ಸುಮಾರು 65% ಕ್ಕೂ ಅಧಿಕ ಸಂಖ್ಯೆಯ ಆಡಿಯನ್ಸ್ ತಮಗೆ ಸಸ್ಪೆನ್ಸ್ ಕಂ ಕ್ರೈಂ-ಥ್ರಿಲ್ಲರ ಶೈಲಿಯ ಸಿನೆಮಾಗಳು ಇಷ್ಟವಾಗಿದ್ದು, ಅಂಥದ್ದೇ ಸಿನೆಮಾಗಳನ್ನು ಮಾಡುವಂತೆ, ತಮ್ಮ ಅನಿಸಿಕೆ-ಅಭಿಪ್ರಾಯ ಹಂಚಿಕೊಂಡಿರುತ್ತಾರೆ. ಹೀಗಾಗಿ, ನಮ್ಮ ಮುಂದಿನ ಸಿನೆಮಾವನ್ನು ಪ್ರೇಕ್ಷಕರ ಆಸಕ್ತಿ ಮತ್ತು ಹಕ್ಕೊತ್ತಾಯದಂತೆ ಸಸ್ಪೆನ್ಸ್ ಕಂ ಕ್ರೈಂ-ಥ್ರಿಲ್ಲರ ಶೈಲಿಯಲ್ಲೇ ಮಾಡಲು ಮುಂದಾಗಿದ್ದೇವೆ. ಇದು ಥ್ರಿಲ್ಲರ್ ನೊಂದಿಗೆ ಭಾವನಾತ್ಮಕ ಕಥಾ ಹಂದರವುಳ್ಳ ಚಿತ್ರ’ ಎಂಬುದನ್ನು ಅವರು ಖಚಿತಪಡಿಸಿದ್ದಾರೆ.
ಈ ಮೂಲಕ ಗುರುರಾಜ್ ಕುಲಕರ್ಣಿ ತಮ್ಮ ಸಿನಿಮಾ ಆದ್ಯತೆಗಳನ್ನು ಅರ್ಥ ಮಾಡಿಕೊಂಡ ಪ್ರೇಕ್ಷಕರೊಂದಿಗೆ ಕನೆಕ್ಟ್ ಆಗಲು ಉತ್ಸುಕರಾಗಿದ್ದಾರೆ.

LADIES 2

'’ದ ಜಡ್ಜ್ ಮೆಂಟ್' ನಂತರ ಅಂತಹ ಪ್ರೇಕ್ಷಕರನ್ನು ತಲುಪಲು ಮತ್ತು ಅವರು ಯಾವ ರೀತಿ ಸಿನಿಮಾ ನೋಡಲು ಆಸಕ್ತಿ ಹೊಂದಿದ್ದಾರೆ ಎಂಬುದನ್ನು ತಿಳಿಯಲು ಬಯಸುತ್ತೇನೆ. ನಾನು ಸಮೀಕ್ಷೆ ನಡೆಸಿದ್ದು, ಬೀದಿಗಳಲ್ಲಿ ಜನರೊಂದಿಗೆ ಮಾತನಾಡಿದ್ದೇನೆ. ಅವರು ಕೊನೆಗೆ ಥ್ರಿಲ್ಲರ್‌ ಕಥೆಗೆ ಮಣೆ ಹಾಕಿದರು. ಹೆಚ್ಚಿನ ಜನರನ್ನು ತಲುಪುವಂತಹ ಚಿತ್ರ ಮಾಡುವುದು ನನ್ನ ಗುರಿಯಾಗಿದೆ’ ಎಂದು ಅವರು ವಿವರಿಸುತ್ತಾರೆ.

ಕುತೂಹಲಕಾರಿ ವಿಷಯ ಏನೆಂದರೆ, ಇನ್ನೂ ಹೆಸರಿಡದ ಚಿತ್ರವನ್ನು ಪ್ಯಾನ್- ಇಂಡಿಯಾ ಮಟ್ಟದಲ್ಲಿ ತಯಾರಿಸಲು ಗುರುರಾಜ್ ಯೋಜಿಸಿದ್ದಾರೆ. ವಿವಿಧ ಭಾಷೆಗಳ ಪ್ರತಿಭಾವಂತರೊಂದಿಗೆ ಆ ನೆಲಕ್ಕೆ ತಕ್ಕಂತೆ ಚಿತ್ರ ಮಾಡಲು ಎದುರು ನೋಡುತ್ತಿದ್ದಾರೆ. ಅವರೇ ಕಥೆ, ಚಿತ್ರಕಥೆ ಬರೆದಿದ್ದಾರೆ. ಕಿರಣ್ ರಾವ್ ನಿರ್ದೇಶನದ ‘ಲಾಪತಾ ಲೇಡೀಸ್’‌ನ ಸಂಭಾಷಣೆಗಾರ ಸೋನು ಆನಂದ್ ಸೇರಿದಂತೆ ವೈವಿಧ್ಯಮಯ ಬರಹಗಾರರ ತಂಡವನ್ನು ಅವರು ಒಟ್ಟುಗೂಡಿಸಿದ್ದಾರೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ