ಸರಸ್ವತಿ*
ವಿಭಿನ್ನ ಕಾಮಿಡಿಯಿಂದಲೇ ಕನ್ನಡ ಚಿತ್ರರಂಗದಲ್ಲಿ ಬೇಡಿಕೆ ಹೊಂದಿರುವ ನಟ ಚಿಕ್ಕಣ್ಣ ನಾಯಕನಾಗಿ ನಟಿಸುತ್ತಿರುವ ಎರಡನೇ ಸಿನಿಮಾ ಲಕ್ಷ್ಮಿಪುತ್ರ. ಟೈಟಲ್ ನಿಂದ ಕುತೂಹಲ ಹೆಚ್ಚಿಸಿರುವ ಈ ಚಿತ್ರವನ್ನು ಎ.ಪಿ.ಅರ್ಜುನ್ ಕಥೆ ಬರೆದು ತಮ್ಮದೇ ಎ.ಪಿ.ಅರ್ಜುನ್ ಫಿಲ್ಮ್ ಬ್ಯಾನರ್ನಡಿ ನಿರ್ಮಿಸುತ್ತಿದ್ದಾರೆ. ವಿಜಯ್ ಸ್ವಾಮಿ ಆ್ಯಕ್ಷನ್ ಕಟ್ ಹೇಳಿರುವ ಲಕ್ಷ್ಮಿಪುತ್ರ ಸಿನಿಮಾದ ಫಸ್ಟ್ ಲುಕ್ ಬಿಡುಗಡೆ ಮಾಡಲಾಗಿದೆ.
ಸಂಕ್ರಾಂತಿ ಹಬ್ಬದ ವಿಶೇಷವಾಗಿ ರಿಲೀಸ್ ಆದ ಲಕ್ಷ್ಮಿಪುತ್ರ ಚಿತ್ರದ ಫಸ್ಟ್ ಲುಕ್ ಗೆ ಒಳ್ಳೆ ರೆಸ್ಪಾನ್ಸ್ ಸಿಕ್ಕಿದೆ. ಹೋರಿ ಹಿಡಿದು ಚಿಕ್ಕಣ್ಣ ಕಿಚ್ಚಾಯಿಸುತ್ತಿದ್ದು, ತಾರಾ ಚಿಕ್ಕಣ್ಣ ತಾಯಿಯಾಗಿ ಅಭಿನಯಿಸಿದ್ದಾರೆ.
ಚಿತ್ರದಲ್ಲಿ ತಾರಾ, ಕುರಿ ಪ್ರತಾಪ್, ಧರ್ಮಣ್ಣ ಸೇರಿ ದೊಡ್ಡ ತಾರಾಗಣವಿದೆ. ಅರ್ಜುನ್ ಜನ್ಯ ಸಂಗೀತ ಚಿತ್ರಕ್ಕಿದ್ದು, ಎ.ಪಿ.ಅರ್ಜುನ್ ಚಿತ್ರದ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ತಾಯಿ ಮಗನ ಬಾಂಧವ್ಯದ ಕಥೆಯನ್ನು ಹೇಳುವ ಪ್ರಯತ್ನದಲ್ಲಿ ಲಕ್ಷ್ಮಿಪುತ್ರ ತಂಡವಿದೆ.
ಎ.ಪಿ.ಅರ್ಜುನ್ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ನಿರ್ದೇಶಕ ಎ.ಪಿ.ಅರ್ಜುನ್ ಪತ್ನಿ ಅನ್ನಪೂರ್ಣ ಅರ್ಜುನ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ರವಿಕಿರಣ್ ಗೌಡ ಸಹ-ನಿರ್ಮಾಣದಲ್ಲಿ ಸಾಥ್ ಕೊಡುತ್ತಿದ್ದಾರೆ. ಚಿತ್ರದ ಆ್ಯಕ್ಷನ್ ಸೀಕ್ವೆನ್ಸ್‌ಗಳಿಗೆ ಮಾಸ್ ಮಾದ ನಿರ್ದೇಶನ ಮಾಡಿದ್ದಾರೆ. ಗಿರೀಶ್ ಆರ್.ಗೌಡ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.





