ಜಾಗೀರ್ದಾರ್*
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನಾಯಕರಾಗಿ ನಟಿಸಿದ್ದ "ಸಾರಥಿ" ಚಿತ್ರವನ್ನು ನಿರ್ಮಿಸಿದ್ದ ಕೆ.ವಿ.ಸತ್ಯಪ್ರಕಾಶ್ ಹಾಗೂ ಅವರ ಪುತ್ರ ಸೂರಜ್ ಗೌಡ "ಸಾರಥಿ ಫಿಲಂಸ್" ಮೂಲಕ ನಿರ್ಮಾಣ ಮಾಡುತ್ತಿರುವ ಹಾಗೂ ದುನಿಯಾ ವಿಜಯ್, ರಚಿತಾ ರಾಮ್, ರಿತನ್ಯ ಮುಂತಾದವರು ಅಭಿನಯಿಸುತ್ತಿರುವ "ಲ್ಯಾಂಡ್ ಲಾರ್ಡ್" ಚಿತ್ರದ ನಿರ್ದೇಶಕರಾದ ಜಡೇಶ್ ಕೆ ಹಂಪಿ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ವಿಭಿನ್ನ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ನೆಚ್ಚಿನ ನಿರ್ದೇಶಕನಿಗೆ "ಲ್ಯಾಂಡ್ ಲಾರ್ಡ್" ಚಿತ್ರತಂಡ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.
"ಜಂಟಲ್ ಮ್ಯಾನ್", "ಗುರುಶಿಷ್ಯರು" ಚಿತ್ರಗಳ ನಿರ್ದೇಶಕ, "ಕಾಟೇರ" ಚಿತ್ರದ ಲೇಖಕ ಜಡೇಶ ಕೆ ಹಂಪಿ ಅವರು ನಿರ್ದೇಶಿಸುತ್ತಿರುವ ಬಹು ನಿರೀಕ್ಷಿತ "ಲ್ಯಾಂಡ್ ಲಾರ್ಡ್" ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಇದೇ ವರ್ಷದಲ್ಲೇ ತೆರೆಗೆ ಬರುವ ಸಾಧ್ಯತೆ ಇದೆ.
ವಿಜಯ್ ಕುಮಾರ್(ದುನಿಯಾ ವಿಜಯ್) ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ನಾಯಕಿಯಾಗಿ ರಚಿತಾ ರಾಮ್ ಅಭಿನಯಿಸುತ್ತಿದ್ದಾರೆ. ದುನಿಯಾ ವಿಜಯ್ ಅವರ ಪುತ್ರಿ ರಿತನ್ಯ ಅವರು ಈ ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸುತ್ತಿದ್ದಾರೆ.