ಸರಸ್ವತಿ*.
RED & WHITE ಸೆವೆನ್ ರಾಜ್ ನಿರ್ಮಾಣದ ಹಾಗೂ ಅಫ್ಜಲ್ ನಿರ್ದೇಶನದ "ನೆನಪುಗಳ ಮಾತುಮಧುರ" ಚಿತ್ರ ಈ ವಾರ(ಫೆಬ್ರವರಿ 6)ರಂದು ತೆರೆಗೆ ಬರಲಿದೆ.
"ನೆನಪುಗಳ ಮಾತು ಮಧುರ" ಚಿತ್ರದಲ್ಲಿ ನಾಲ್ಕು ಸ್ನೇಹಿತರ ನಡುವೆ ನಡೆಯುವ ನಾಲ್ಕು ಕಥೆಗಳ ಗುಚ್ಛವಿದೆ.(ANTHOLOGY TYPE) ಕಥಾ ಹಂದರದ ಹೊಂದಿರುವ ಈ ಚಿತ್ರದಲ್ಲಿ ಮರ್ಡರ್ ಮಿಸ್ಟ್ರಿ, ಹಾರರ್ , ಹಾಸ್ಯ, ಈಗಿನ ಕಾಲದ ಯುವಕರ ಜೀವನದಲ್ಲಿ ನಡೆಯುತ್ತಿರುವ ಕೆಲವು ವಿಭಿನ್ನ ಅಂಶಗಳು ಇರಲಿದೆ ಎನ್ನುತ್ತಾರೆ ನಿರ್ದೇಶಕ ಅಫ್ಜಲ್.

ಅಫ್ಜಲ್(ಸೂಪರ್ ಸ್ಟಾರ್ಸ್) ಅವರೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ಸ್ವಾಮಿ ಮೈಸೂರು ಛಾಯಾಗ್ರಹಣ,
ರಾಜು ಎಮ್ಮಿಗನೂರು ಸಂಗೀತ ನಿರ್ದೇಶನ, ಕಾರ್ತಿಕ್ ಈಶ್ವರಾಚಾರಿ ಸಂಕಲನ ಹಾಗೂ ದೇವರಾಜ ಕುಷ್ಟಗಿ ಅವರ ಹಿನ್ನೆಲೆ ಸಂಗೀತವಿದೆ
ನಿರ್ದೇಶಕ ಅಫ್ಜಲ್ ಅವರು ಪ್ರಮುಖಪಾತ್ರದಲ್ಲಿ ಅಭಿನಯಿಸಿರುವ ಈ ಚಿತ್ರದ ಮತ್ತೊಂದು ಮುಖ್ಯಪಾತ್ರದಲ್ಲಿ ನಿರ್ಮಾಪಕ ಸೆವೆನ್ ರಾಜ್ ಸಹ ನಟಿಸಿದ್ದಾರೆ. ವಸಿಷ್ಠ ಬಂಟನೂರು, ರಣವೀರ್, ರಾಜಪ್ರಭು, ವಿನಯ್, ಅಂಜಲಿ, ಸೌಮ್ಯ, ರೇಖಾ ರಮೇಶ್, ಶುಭ ತೀರ್ಥ, ವಾದ್ಯಾ, ಗುಬ್ಬಚ್ಚಿ , ಅರವಿಂದ್, ನಾಗೇಂದ್ರ ಅರಸ್ ಮುಂತಾದವರು ತಾರಾಬಳಗದಲ್ಲಿದ್ದಾರೆ.





