Sj*

ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಬುದ್ದೂರು ನಿರ್ಮಿಸುತ್ತಿರುವ,

ಕನ್ನಡದಲ್ಲಿ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ಪಿ.ಸಿ.ಶೇಖರ್ ನಿರ್ದೇಶಿಸುತ್ತಿರುವ "ಮಹಾನ್" ಚಿತ್ರದ ನಾಯಕನಾಗಿ ಪ್ರತಿಭಾವಂತ ನಟ ವಿಜಯ ರಾಘವೇಂದ್ರ ನಟಿಸಿದ್ದಾರೆ. ರೈತರ ಕುರಿತಾದ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ವಿಜಯ ರಾಘವೇಂದ್ರ ರೈತನ ಪಾತ್ರದಲ್ಲೇ ಕಾಣಿಸಿಕೊಂಡಿದ್ದಾರೆ. ನಟ ವಿಜಯ ರಾಘವೇಂದ್ರ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ "ಮಹಾನ್" ಚಿತ್ರದ ವಿಜಯ ರಾಘವೇಂದ್ರ ಅವರ ವಿಶೇಷ ಲುಕ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.‌

mahaan 1

ಚಿತ್ರವನ್ನು ಯಾವುದೇ ಕೊರತೆ ಬಾರದ ಹಾಗೆ ಪ್ರಕಾಶ್ ಬುದ್ದೂರು ನಿರ್ಮಾಣ ಮಾಡುತ್ತಿದ್ದಾರೆ. ಈವರೆಗೂ ಹತ್ತು ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿ ಜನಪ್ರಿಯರಾಗಿರುವ ಪಿ.ಸಿ.ಶೇಖರ್ ನಿರ್ದೇಶನದ ಹನ್ನೊಂದನೆ ಚಿತ್ರವಿದು. ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿರುವ ಈ ಚಿತ್ರದ ಬಿಡುಗಡೆಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ವಿಜಯ ರಾಘವೇಂದ್ರ, ರಾಧಿಕಾ ನಾರಾಯಣ್, ಮಿತ್ರ, ನಮ್ರತಾ ಗೌಡ, ವರ್ಷ ಬೊಳ್ಳಮ್ಮ, ಕಿರಣ್ ಶ್ರೀನಿವಾಸ್ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ