-  ರಾಘವೇಂದ್ರ ಅಡಿಗ ಎಚ್ಚೆನ್.

ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಅಮೃತ ಮಹೋತ್ಸವವನ್ನು ಸೆಪ್ಟೆಂಬರ್ 27ರಂದು ಬೆಳಗ್ಗೆ 6ರಿಂದ ರಾತ್ರಿ 12ರವರೆಗೆ ಬರೋಬ್ಬರಿ 18 ಗಂಟೆಗಳ ಕಾಲ ಅದ್ಧೂರಿಯಾಗಿ ಆಚರಿಸಲು ಸಿದ್ಧತೆ ನಡೆಯುತ್ತಿದೆ ಎಂದು ವಿಷ್ಣುಸೇನಾ ಸಮಿತಿಯ ರಾಜ್ಯಾಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ತಿಳಿಸಿದ್ದಾರೆ.

ಸುಮಾರು ₹1 ಕೋಟಿಗೂ ಮಿಗಿಲಾದ ವೆಚ್ಚದಲ್ಲಿ ನಡೆಯಲಿರುವ ಈ ಬೃಹತ್ ಮಹೋತ್ಸವಕ್ಕೆ ಈಗಾಗಲೇ ಪೂರ್ವಸಿದ್ಧತೆಗಳು ಆರಂಭವಾಗಿವೆ. ನೂರಾರು ಜನರ ಶ್ರಮ, ಸಾವಿರಾರು ಅಭಿಮಾನಿಗಳ ಸಹಕಾರ ಹಾಗೂ ಹಲವು ತಿಂಗಳ ಸಿದ್ಧತೆಯೊಂದಿಗೆ ಕಾರ್ಯಕ್ರಮವನ್ನು ರೂಪಿಸಲಾಗುತ್ತಿದೆ.

ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿ ಅರ್ಧ ಕಿಲೋಮೀಟರ್ ಉದ್ದದ ಬೃಹತ್ ಧ್ವಜ ಮೆರವಣಿಗೆ ನಡೆಯಲಿದೆ. ಸೆಪ್ಟೆಂಬರ್ 27ರಂದು ಬೆಳಗ್ಗೆ 6 ಗಂಟೆಗೆ ಬೆಂಗಳೂರಿನ ಟೌನ್ ಹಾಲ್‌ನಿಂದ ಮೆರವಣಿಗೆ ಆರಂಭವಾಗಿ ನಾಯಂಡಹಳ್ಳಿಯವರೆಗೆ ಸಾಗಲಿದೆ. ಸಾವಿರಾರು ವಿಷ್ಣುವರ್ಧನ್ ಅಭಿಮಾನಿಗಳು ಬೃಹತ್ ಧ್ವಜವನ್ನು ಹೊತ್ತು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಮೆರವಣಿಗೆಯ ಬಳಿಕ ನಾಯಂಡಹಳ್ಳಿಯ ನಂದಿ ಲಿಂಕ್ ಗ್ರೌಂಡ್‌ನಲ್ಲಿ ದಿನವಿಡೀ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಬೆಳಗ್ಗೆ ಆರಂಭವಾಗುವ ಸಂಭ್ರಮ ರಾತ್ರಿ 12 ಗಂಟೆಯವರೆಗೆ ಮುಂದುವರಿಯಲಿದೆ. ವಿಷ್ಣುಸೇನಾನಿಗಳು ಕೇವಲ ಒಂದು ಕಾರ್ಯಕ್ರಮಕ್ಕೆ ಸೀಮಿತವಾಗದೆ, ಮಹಾನ್ ಕಲಾವಿದನ ಮೇಲಿನ ಅಭಿಮಾನವನ್ನು ಇಡೀ ನಾಡಿಗೆ ತೋರಿಸುವ ಉದ್ದೇಶ ಹೊಂದಿದ್ದಾರೆ ಎಂದು ವೀರಕಪುತ್ರ ಶ್ರೀನಿವಾಸ್ ಹೇಳಿದ್ದಾರೆ.

ಅಮೃತ ಮಹೋತ್ಸವಕ್ಕೆ ಭಾರತೀಯ ಚಿತ್ರರಂಗದ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ವೀರಕಪುತ್ರ ಶ್ರೀನಿವಾಸ್ ಅವರು ಬಹುಭಾಷಾ ನಟಿ ರೋಜಾ, ನಟಿ ಸುಹಾಸಿನಿ ಸೇರಿದಂತೆ ಹಲವು ಕಲಾವಿದರ ನಿವಾಸಗಳಿಗೆ ತೆರಳಿ ಆಹ್ವಾನ ನೀಡಿದ್ದಾರೆ. ಹಿರಿಯ ನಿರ್ದೇಶಕ ಡಾ. ಎಸ್.ವಿ. ರಾಜೇಂದ್ರ ಸಿಂಗ್ ಬಾಬು ಅವರೊಂದಿಗೆ ರೋಜಾ ಹಾಗೂ ಸುಹಾಸಿನಿ ಅವರ ನಿವಾಸಗಳಿಗೆ ಭೇಟಿ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ.

ಆಹ್ವಾನ ಪತ್ರಿಕೆಯಲ್ಲಿದ್ದ ಡಾ. ವಿಷ್ಣುವರ್ಧನ್ ಅವರ ಭಾವಚಿತ್ರವನ್ನು ನೋಡಿದ ತಕ್ಷಣ ನಟಿ ರೋಜಾ ಅವರು ‘ಲೆಜೆಂಡ್’ ಎಂದು ಪ್ರತಿಕ್ರಿಯಿಸಿದ್ದಾರೆ ಎಂದು ವೀರಕಪುತ್ರ ಶ್ರೀನಿವಾಸ್ ತಿಳಿಸಿದ್ದಾರೆ. ಬಳಿಕ ವಿಷ್ಣುವರ್ಧನ್ ಅವರ ವ್ಯಕ್ತಿತ್ವ, ಚಿತ್ರರಂಗದ ಸಾಧನೆ ಹಾಗೂ ಅವರೊಂದಿಗಿನ ನೆನಪುಗಳ ಕುರಿತು ರೋಜಾ ಅವರು ಆತ್ಮೀಯವಾಗಿ ಮಾತನಾಡಿದ್ದಾರೆ. ಅವರ ಮಾತುಗಳನ್ನು ಅಮೃತ ಮಹೋತ್ಸವದ ವೇದಿಕೆಯಲ್ಲಿ ಕೇಳಬಹುದು ಎಂದು ಅವರು ಹೇಳಿದ್ದಾರೆ.

ಡಾ. ವಿಷ್ಣುವರ್ಧನ್ ಅವರ ಅಮೃತ ಮಹೋತ್ಸವವನ್ನು ಐತಿಹಾಸಿಕವಾಗಿ ಆಚರಿಸಲು ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಚಿತ್ರರಂಗದ ಹಲವು ಗಣ್ಯರು ಹಾಗೂ ವಿಷ್ಣುವರ್ಧನ್ ಅವರೊಂದಿಗೆ ಒಡನಾಟ ಹೊಂದಿದ್ದ ಕಲಾವಿದರು ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ