ಜಾಗೀರ್ದಾರ್*

ರಿಯಾಲಿಟಿ ಶೋ ಮೂಲಕ ಜನಪ್ರಿಯರಾಗಿದ್ದ ಮಡೆನೂರು ಮನು, "ಕುಲದಲ್ಲಿ ಕೀಳ್ಯಾವುದೊ" ಚಿತ್ರದ ಮೂಲಕ ನಾಯಕನಾದರು. ಪ್ರಸ್ತುತ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಮನು, ತಮ್ಮ ನೂತನ ಚಿತ್ರದ ಶೀರ್ಷಿಕೆ ಅನಾವರಣ ಮಾಡಿದ್ದಾರೆ. ಚಿತ್ರಕ್ಕೆ "ಮುತ್ತರಸ" ಎಂದು ಹೆಸರಿಡಲಾಗಿದೆ. ಜೆ.ಕೆ.ಮೂವೀಸ್ ಲಾಂಛನದಲ್ಲಿ ಕೆ.ಎಂ.ನಟರಾಜ್ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಖ್ಯಾತ ನಟ ವಸಿಷ್ಠ ಸಿಂಹ, ಹಿರಿಯ ನಟರಾದ ಎಂ.ಎಸ್.ಉಮೇಶ್, ಕರಿ ಸುಬ್ಬು, ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್ ಮುಂತಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿ, ಮಡೆನೂರ್ ಮನು ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದರು. ಪದ್ಮಶ್ರೀ ಪುರಸ್ಕೃತರಾದ ಮಂಜಮ್ಮ ಜೋಗತಿ ಅವರು ಶೀರ್ಷಿಕೆ ಅನಾವರಣ ಮಾಡಿದರು. ನಂತರ ಸಿನಿಮಾ ತಂಡದವರು ಹಾಗೂ ಗಣ್ಯರು ಮಾತನಾಡಿದರು.

manu1

ಕೆಲವು ದಿನಗಳ ಹಿಂದೆ ನನ್ಮ ಜೀವನದಲ್ಲಿ ಆದ ಕಹಿ ಘಟನೆಗಳನೆಲ್ಲಾ ಮರೆತಿದ್ದೇನೆ. ಸದ್ಯಕ್ಕೆ ಯಾವುದೇ ಸಮಸ್ಯೆಗಳು ಇಲ್ಲ. ಆ ಸಮಯದಲ್ಲಿ ನನ್ನ ಜೊತೆಗೆ ನಿಂತವರಿಗೆ ನಾನು ಚಿರ ಋಣಿ . ಇಂದು ನನ್ನ ಹೊಸ ಸಿನಮಾದ ಶೀರ್ಷಿಕೆ ಬಿಡುಗಡೆಯಾಗಿದೆ. ಅನಾವರಣ ಮಾಡಿಕೊಟ್ಟ ವಸಿಷ್ಠ ಸಿಂಹ ಅವರು ಸೇರಿದಂತೆ ಪ್ರತಿಯೊಬ್ಬ ಗಣ್ಯರಿಗೆ ಧನ್ಯವಾದ. ನಾನು ವಸಿಷ್ಠ ಸಿಂಹ ಅವರೊಟ್ಟಿಗೆ ತಲ್ವಾರ್ ಪೇಟೆ ಚಿತ್ರದಲ್ಲಿ ನಟಿಸಿದ್ದೇನೆ. ಇನ್ನೂ "ಮುತ್ತರಸ" ಚಿತ್ರದ ಶೀರ್ಷಿಕೆ ಕೊಟ್ಟದ್ದು ನಿರ್ದೇಶಕ ರಾಮ್ ನಾರಾಯಣ್ ಅವರು. ಮುಂದಿನ ತಿಂಗಳಿನಿಂದ ಈ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ. ಈ ಚಿತ್ರದ ನಿರ್ದೇಶಕರು ಯಾರು? ತಾರಾಬಳಗದಲ್ಲಿ ಯಾರಿದ್ದಾರೆ? ಎಂಬುದನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ. ಈ ಸಂದರ್ಭದಲ್ಲಿ ಎನ್ ಆರ್ ರಮೇಶ್, ಶಿವಕುಮಾರ್ ನಾಯಕ್, ಯೋಗರಾಜ್ ಭಟ್ ಹಾಗೂ ನನ್ನ ಹಿಂದಿನ ಚಿತ್ರದ ನಿರ್ಮಾಪಕರಾದ ಸಂತೋಷ್ ಕುಮಾರ್,‌ ವಿದ್ಯಾ ಮತ್ತು ನಿರ್ದೇಶಕ ರಾಮ್ ನಾರಾಯಣ್ ಅವರನ್ನು ನೆನೆಯುತ್ತೇನೆ ಎಂದು ತಿಳಿಸಿದ ನಟ ಮಡೆನೂರ್ ಮನು, ಈ ವರ್ಷದ ಕೊನೆಗೆ ನಾನು ನಟಿಸಿರುವ "ವಿಚಾರಣೆ" ಚಿತ್ರ ಸಹ ತೆರೆಗೆ ಬರಲಿದೆ ಎಂದು ತಿಳಿಸಿದರು.

manu2

ಮನು ನನ್ನ ಹಿಂದಿನ ನಿರ್ಮಾಣದ ಚಿತ್ರದಲ್ಲೂ ನಟಿಸಿದ್ದರು. ಈಗ ನನ್ನ , ಅವರ ಕಾಂಬಿನೇಷನ್ ನಲ್ಲಿ ಎರಡನೇ ಚಿತ್ರ ಮೂಡಿ ಬರುತ್ತಿದೆ. ಶೀರ್ಷಿಕೆ ಅನಾವರಣ ಮಾಡಿಕೊಟ್ಟ ಗಣ್ಯರಿಗೆ ಧನ್ಯವಾದ ಎಂದು "ಮುತ್ತರಸ" ಚಿತ್ರದ ನಿರ್ಮಾಪಕ ನಟರಾಜ್ ತಿಳಿಸಿದರು.

 

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ