ಜಾಗೀರ್ದಾರ್*
abbs studios ಲಾಂಛನದಲ್ಲಿ ಅಜನೀಶ್ ಲೋಕನಾಥ್ ಹಾಗೂ ಸಿ.ಆರ್ ಬಾಬಿ ಅವರು ನಿರ್ಮಿಸಿರುವ, ಸಿ.ಆರ್.ಬಾಬಿ ಅವರ ನಿರ್ದೇಶನದಲ್ಲಿ ಬಿಗ್ ಬಾಸ್ ಖ್ಯಾತಿಯ ಶೈನ್ ಶೆಟ್ಟಿ ಹಾಗೂ ಅಂಕಿತ ಅಮರ್ ನಾಯಕ-ನಾಯಕಿಯಾಗಿ ನಟಿಸಿರುವ ಬಹು ನಿರೀಕ್ಷಿತ "ಜಸ್ಟ್ ಮ್ಯಾರೀಡ್" ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಆನ್ ಲೈನ್ ಮೂಲಕ ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಮದುವೆ ಮನೆ ವಾತಾವರಣ ನಿರ್ಮಾಣವಾಗಿತ್ತು. ಮುಂಭಾಗಲಿನಲ್ಲೇ ಮಂಗಳದ್ರವ್ಯಗಳನ್ನು ನೀಡಿ ಮುತ್ತಿನ ಹಾರ ಹಾಕಿ ಬಂದ ಅತಿಥಿಗಳನ್ನು ಸ್ವಾಗತಿಸಲಾಯಿತು. ಹೆಣ್ಣುಮಕ್ಕಳು ಮೆಹಂದಿ ಹಾಕಿಸಿಕೊಂಡು ಸಂಭ್ರಮಿಸುತ್ತಿದ್ದದ್ದು ಅಲ್ಲಿ ಕಂಡು ಬಂತು. ಚಿತ್ರತಂಡದರು ಮದುವೆಗೆ ಹೋಗುವಾಗ‌‌ ಸಿದ್ದವಾಗುವ ಹಾಗೆ "ಜಸ್ಟ್ ಮ್ಯಾರೀಡ್" ಟ್ರೇಲರ್ ಬಿಡುಗಡೆ ಸಮಾರಂಭಕ್ಕೂ ಬಂದಿದ್ದು ವಿಶೇಷವಾಗಿತ್ತು. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

married

ನಾನು ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಲು ನೆರವಾಗಿ ನಿಂತ ಸಿ.ಆರ್ ಬಾಬಿ ಅವರಿಗೆ ಚಿತ್ರ ನಿರ್ದೇಶನ ಮಾಡಬೇಕೆಂಬ ಆಸೆ ಮೊದಲಿನಿಂದಲೂ ಇತ್ತು. ನಾನು ಕೂಡ ಚಿತ್ರ ನಿರ್ದೇಶನ ಮಾಡಿ ಅಂತ ಹೇಳುತ್ತಿದ್ದೆ. ಆದರೆ ಈಗ ಕಾಲ ಕೂಡಿ ಬಂದಿದೆ. ಚಿತ್ರ ಆರಂಭವಾದ ದಿನದಿಂದಲೂ ನನಗೆ ಚಿತ್ರತಂಡ ನೀಡುತ್ತಿರುವ ಸಹಕಾರ ಅಪಾರ. ಅದರ ಜೊತೆಗೆ ಶಿವರಾಜಕುಮಾರ್, ಉಪೇಂದ್ರ, ಕಿಚ್ಚ ಸುದೀಪ್, ರಕ್ಷಿತ್ ಶೆಟ್ಟಿ, ರಾಜ್ ಬಿ ಶೆಟ್ಟಿ, ರಿಷಬ್ ಶೆಟ್ಟಿ , ನಿಥಿಲನ್, ಅಜಯ್ ಭೂಪತಿ ಸೇರಿದಂತೆ ಅನೇಕ ಗಣ್ಯರು ನಮ್ಮ ಚಿತ್ರದ ಹಾಡುಗಳು, ಟೀಸರ್ ಹಾಗೂ ಟ್ರೇಲರ್ ಅನ್ನು ಬಿಡುಗಡೆ ಮಾಡಿ ಕೊಟ್ಟಿದ್ದಾರೆ. ಹಾಡುಗಳು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿ ಜನಪ್ರಿಯವಾಗಿದೆ. ಚಿತ್ರ ವೀಕ್ಷಣೆ ಮಾಡಿರುವ ನಿರ್ಮಾಪಕ ವಿಜಯ್ ಕಿರಗಂದೂರು ತಮ್ಮ ವಿ.ಕೆ ಫಿಲಂಸ್ ಮೂಲಕ ನಮ್ಮ ಚಿತ್ರವನ್ನು ವಿತರಣೆ ಮಾಡುತ್ತಿದ್ದಾರೆ. ಆಗಸ್ಟ್ 22 ರಂದು ನಮ್ಮ ಚಿತ್ರ ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ ಎಂದು ನಿರ್ಮಾಪಕ ಹಾಗೂ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ತಿಳಿಸಿದರು.

married 1

ನಿರ್ದೇಶನ ಮಾಡಬೇಕೆಂಬ ಹಲವು ವರ್ಷಗಳ ಕನಸು "ಜಸ್ಟ್ ಮ್ಯಾರೀಡ್" ಚಿತ್ರದ ಮೂಲಕ ನೆರವೇರಿದೆ ಎಂದು ಮಾತನಾಡಿದ ನಿರ್ದೇಶಕಿ ಸಿ.ಆರ್.ಬಾಬಿ, ಬಹು ತಾರಾಬಳಗವಿರುವ ನಮ್ಮ ಚಿತ್ರದ ಚಿತ್ರೀಕರಣ ನಿಗದಿತ ಯೋಜನೆಗೂ ಮೂರು ದಿನಗಳ ಮುಂಚೆ ಪೂರ್ಣವಾಗಿದೆ. ಅದಕ್ಕೆ ಕಾರಣ‌ ಕಲಾವಿದರ ಹಾಗೂ ತಂತ್ರಜ್ಞರ ಸಹಕಾರ. ಅದರಲ್ಲೂ ಛಾಯಾಗ್ರಾಹಕ ಪಿ.ಜಿ ಅವರು ಮುಖ್ಯ ಕಾರಣ. ನಿರ್ಮಾಪಕ ಅಜನೀಶ್ ಅವರಂತೂ ಯಾವುದೇ ಕೊರತೆ ಬಾರದ ಹಾಗೆ ಚಿತ್ರ ನಿರ್ಮಾಣ ಮಾಡಿದ್ದಾರೆ. ಇಂದು ಟ್ರೇಲರ್ ಬಿಡುಗಡೆಯಾಗಿದೆ. ಆಗಸ್ಟ್ 22 ರಂದು ಚಿತ್ರ ತೆರೆಗೆ ಬರಲಿದೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು.

married 3

ಕಳೆದ ಒಂದು ವರ್ಷದಿಂದ ನನ್ನ ಹತ್ತಿರ ಯಶಸ್ವಿ ಚಿತ್ರಗಳಾದ "ಕಾಟೇರ", "ಕೃಷ್ಣಂ ಪ್ರಣಯ ಸಖಿ", "ಮಾದೇವ" ಚಿತ್ರಗಳ ಫಲಕಗಳಿದೆ. "ಎಕ್ಕಾ" ಚಿತ್ರ ಕೂಡ ಯಶಸ್ಸಿನ ಹಾದಿಯಲ್ಲಿ ಸಾಗುತ್ತಿದೆ. ಈಗ ಆ ಸಾಲಿಗೆ ಸೇರುವ ಮತ್ತೊಂದು ಚಿತ್ರ "ಜಸ್ಟ್ ಮ್ಯಾರೀಡ್" ಆಗಲಿದೆ ಎಂದು ಮಾತನಾಡಿದ ನಟಿ ಶೃತಿ ನಿರ್ದೇಶಕಿ ಸಿ.ಆರ್ ಬಾಬಿ ಅವರ ಕಾರ್ಯ ವೈಖರಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದರು ಹಾಗೂ ಚಿತ್ರೀಕರಣದ ಅನುಭವವನ್ನು ಹಂಚಿಕೊಂಡರು.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ