ಜಾಗೀರ್ದಾರ್*

ಹೆಸರಾಂತ ನಿರ್ದೇಶಕ ಡಾ||ಎಸ್ ನಾರಾಯಣ್ ನಿರ್ದೇಶನದ, ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖಪಾತ್ರದಲ್ಲಿ ನಟಿಸಿರುವ ಮತ್ತು ಕೆ.ಮಂಜು - ರಮೇಶ್ ಯಾದವ್ ಈಶಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸುತ್ತಿರುವ ಬಹು ನಿರೀಕ್ಷಿತ ಚಿತ್ರ "ಮಾರುತ".

ಕನ್ನಡದಲ್ಲಿ ಸೂಪರ್ ಹಿಟ್ ಚಿತ್ರಗಳನ್ನು ನಿರ್ದೇಶಿಸಿರುವ ಎಸ್ ನಾರಾಯಣ್‌ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಜನಪ್ರಿಯರಾಗಿರುವ ದುನಿಯಾ ವಿಜಯ್ ಮತ್ತು ಉತ್ಸಾಹಿ ಯುವ ನಟ ಶ್ರೇಯಸ್ ಮಂಜು ಅವರ ಕಾಂಬಿನೇಶನ್ ನಲ್ಲಿ ಮೂಡಿಬರುತ್ತಿರುವ ಈ ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಈಗ ಮತ್ತೊಂದು ಸಂತಸದ ವಿಷಯ ಚಿತ್ರತಂಡ ಹಂಚಿಕೊಂಡಿದೆ. ಖ್ಯಾತ ಸಂಗೀತ ನಿರ್ದೇಶಕ ಜೆಸ್ಸಿ ಗಿಫ್ಟ್ ಅವರು ಸಂಗೀತ ನೀಡಿರುವ ಹಾಗೂ ಜನಪ್ರಿಯ ಗಾಯಕರು ಹಾಡಿರುವ "ಮಾರುತ" ಚಿತ್ರದ ಆಡಿಯೋ ರೈಟ್ಸ್ ಭಾರಿ ಮೊತ್ತಕ್ಕೆ ಮಾರಾಟವಾಗಿದೆ. ಹೆಸರಾಂತ ಜಂಕಾರ್ ಮ್ಯಾಸಿಕ್ ಸಂಸ್ಥೆ ಈ ಚಿತ್ರದ ಆಡಿಯೋ ಹಕ್ಕನ್ನು ಪಡೆದುಕೊಂಡಿದೆ.

ಎಸ್ ನಾರಾಯಣ್ ಅವರ ನಿರ್ದೇಶನದ "ಸೂರ್ಯವಂಶ", "ಜಮೀನ್ಧಾರು", " ಸಿಂಹಾದ್ರಿಯ ಸಿಂಹ", "ನನ್ನವಳು ನನ್ನವಳು", " ಅಂಜಲಿ ಗೀತಾಂಜಲಿ ", "ತವರಿನ ತೊಟ್ಟಿಲು" ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳ ಆಡಿಯೋ ಹಕ್ಕನ್ನು ಸಹ ಜಂಕಾರ್ ಮ್ಯೂಸಿಕ್ ಸಂಸ್ಥೆ ಪಡೆದುಕೊಂಡಿತ್ತು. ಆ ಚಿತ್ರದ ಹಾಡುಗಳು ಇಂದಿಗೂ ಜನಪ್ರಿಯ. ಪ್ರಸ್ತುತ ಎಸ್ ನಾರಾಯಣ್ ಅವರ ನಿರ್ದೇಶನದ "ಮಾರುತ" ಚಿತ್ರದ ಆಡಿಯೋ ಹಕ್ಕನ್ನು ಸಹ ಜಂಕಾರ್ ಸಂಸ್ಥೆ ಪಡೆದುಕೊಂಡಿದೆ. ಈ ಯಶಸ್ವಿ ಕಾಂಬಿನೇಶನ್ ನಲ್ಲಿ ಬರುತ್ತಿರುವ ಈ ಚಿತ್ರದ ಹಾಡುಗಳು ಸಹ ಕನ್ನಡಿಗರ ಮನ ಗೆಲ್ಲುವುದರಲ್ಲಿ ಯಾವುದೇ ಸಂಶಯವಿಲ್ಲ‌..

"ಮಾರುತ" ಚಿತ್ರದ ಐದು ಹಾಡುಗಳು ಬಹಳ ಚೆನ್ನಾಗಿದೆ. ಎಲ್ಲರ ಪ್ರಶಂಸೆಗೂ ಪಾತ್ರವಾಗಲಿದೆ. ಸದ್ಯದಲ್ಲೇ ಹಾಡುಗಳು ಬಿಡುಗಡೆಯಾಗಲಿದೆ ಎಂದು ಜಂಕಾರ್ ಮ್ಯೂಸಿಕ್ ನ ಭರತ್ ಜೈನ್ ತಿಳಿಸಿದ್ದಾರೆ.

ಅಪಾರ ವೆಚ್ಚದಲ್ಲಿ ಅದ್ದೂರಿಯಾಗಿ ಮೂಡಿ ಬರುತ್ತಿರುವ "ಮಾರುತ" ಚಿತ್ರಕ್ಕೆ ಎಸ್ ನಾರಾಯಣ್ ಅವರ ರಚನೆ ಹಾಗೂ ನಿರ್ದೇಶನವಿದ್ದು, ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ, ಶಿವಪ್ರಸಾದ್ ಯಾದವ್ ಸಂಕಲನ, ವಿನೋದ್ ಹಾಗೂ ಅರ್ಜುನ್ ಸಾಹಸ ನಿರ್ದೇಶನ ಮತ್ತು ಮೋಹನ್ ಕುಮಾರ್, ಸಂತು ಅವರ ನೃತ್ಯ ನಿರ್ದೇಶನವಿದೆ.

ದುನಿಯಾ ವಿಜಯ್, ಶ್ರೇಯಸ್ ಮಂಜು‌, ಬೃಂದಾ(ನಾಯಕಿ), ಸಾಧುಕೋಕಿಲ, ನಿಶ್ವಿಕಾ ನಾಯ್ಡು, ರಂಗಾಯಣ ರಘು, ತಾರಾ ಅನುರಾಧ, ಶರತ್ ಲೋಹಿತಾಶ್ವ, ಪ್ರಮೋದ್ ಶೆಟ್ಟಿ, ಮಂಜು ಪಾವಗಡ , ಚಿತ್ರಾ ಶೆಣೈ, ಸುಜಯ್ ಶಾಸ್ತ್ರಿ ಮುಂತಾದವರ ತಾರಾಬಳಗವಿರುವ ಈ ಚಿತ್ರದ ವಿಶೇಷಪಾತ್ರದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ಅವರು ನಟಿಸಿದ್ದಾರೆ..

 

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ