ಸರಸ್ವತಿ*
ಹೆಸರಾಂತ ನಿರ್ದೇಶಕ ಡಾ||ಎಸ್ ನಾರಾಯಣ್ ನಿರ್ದೇಶನದ, ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖ ಪಾತ್ರದಲ್ಲಿ ನಟಿಸಿರುವ ಮತ್ತು ಕೆ.ಮಂಜು – ರಮೇಶ್ ಯಾದವ್ ಈಶಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸಿರುವ ಬಹು ನಿರೀಕ್ಷಿತ ಚಿತ್ರ “ಮಾರುತ” ಚಿತ್ರವನ್ನು ಇತ್ತೀಚೆಗೆ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ||ನಾಗಲಕ್ಷ್ಮೀ ಚೌಧರಿ ಅವರು ಹಾಗೂ ಮಹಿಳಾ ಆಯೋಗದ ಅನೇಕ ಸದಸ್ಯರು ವೀಕ್ಷಿಸಿದರು.

“ಮಾರುತ” ಚಿತ್ರವನ್ನು ಪ್ರತಿಯೊಬ್ಬರು ನೋಡಲೇಬೇಕು. ಅದರಲ್ಲೂ ಮಹಿಳೆಯರಂತೂ ತಪ್ಪದೇ ನೋಡಬೇಕು. ಅಂತಹುದೊಂದು ಉತ್ತಮ ಸಂದೇಶವಿರುವ ಚಿತ್ರವನ್ನು ನಿರ್ದೇಶಕರು ಸಮಾಜಕ್ಕೆ ನೀಡಿದ್ದಾರೆ. ಚಿತ್ರದಲ್ಲಿ ಬರೀ ಸಮಸ್ಯೆ ಮಾತ್ರ ತೋರಿಸದೆ, ಅದಕ್ಕೆ ಪರಿಹಾರವನ್ನು ಹೇಳಿದ್ದಾರೆ. ಅದು ಬಹಳ ಖುಷಿಯಾಗಿದೆ.
ಸಮಾಜಕ್ಕೆ ಒಂದೊಳ್ಳೆ ಚಿತ್ರ ನೀಡಿರುವ ನಿರ್ಮಾಪಕರಿಗೆ ವಿಶೇಷ ಅಭಿನಂದನೆ. ಚಿತ್ರದಲ್ಲಿ ಎಲ್ಲರೂ ಚೆನ್ನಾಗಿ ನಟಿಸಿದ್ದಾರೆ. ಅದರಲ್ಲೂ ದುನಿಯಾ ವಿಜಯ್ ಅವರ ನಟನೆ ತುಂಬಾ ಚೆನ್ನಾಗಿದೆ. ಎಲ್ಲರೂ ಕುಟುಂಬ ಸಮೇತ ಈ ಚಿತ್ರವನ್ನು ಚಿತ್ರಮಂದಿರದಲ್ಲೇ ನೋಡುವ ಮೂಲಕ ಸದಭಿರುಚಿ ಚಿತ್ರಕ್ಕೆ ಪ್ರೋತ್ಸಾಹ ನೀಡಿ ಎಂದು ಮಹಿಳಾ ಆಯೋಗದ ಅಧ್ಯಕ್ಷರಾದ ಡಾ||ನಾಗಲಕ್ಷ್ಮೀ ಚೌಧರಿ ತಿಳಿಸಿದರು.
ಬಹು ನಿರೀಕ್ಷಿತ ಈ ಚಿತ್ರ ನವೆಂಬರ್ 21 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. .





