ಸರಸ್ವತಿ ಜಾಗೀರ್ದಾರ್*

ಖ್ಯಾತ ನಿರ್ದೇಶಕ ಡಾ||ಎಸ್ ನಾರಾಯಣ್ ನಿರ್ದೇಶನದ, ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖಪಾತ್ರದಲ್ಲಿ ನಟಿಸಿರುವ ಮತ್ತು ಕೆ.ಮಂಜು - ರಮೇಶ್ ಯಾದವ್ ಈಶಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸಿರುವ "ಮಾರುತ" ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಬಹು ನಿರೀಕ್ಷಿತ ಈ ಚಿತ್ರ ಅಕ್ಟೋಬರ್ 31ರಂದು ಬಿಡುಗಡೆಯಾಗಲಿದೆ‌‌.

maruthi

ಹೆಸರಾಂತ ನಿರ್ಮಾಪಕರಾದ ಕೆ.ಮಂಜು ಹಾಗೂ ರಮೇಶ್ ಯಾದವ್ ನಿರ್ಮಾಣದಲ್ಲಿ, ಸದಭಿರುಚಿ ಚಿತ್ರಗಳ ನಿರ್ದೇಶಕ ಎಸ್ ನಾರಾಯಣ್ ಅವರ ನಿರ್ದೇಶನದಲ್ಲಿ, ತಮ್ಮ ಅಮೋಘ ನಟನೆಯ ಮೂಲಕ ಜನಮನಸೂರೆಗೊಂಡಿರುವ ದುನಿಯಾ ವಿಜಯ್ ಹಾಗೂ ಉತ್ಸಾಹಿ ಯುವನಟ ಶ್ರೇಯಸ್ ಮಂಜು ಅವರ ಸಮಾಗಮದಲ್ಲಿ ಅದ್ದೂರಿಯಾಗಿ ಮೂಡಿಬಂದಿರುವ "ಮಾರುತ" ಚಿತ್ರದ ಬಿಡುಗಡೆಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

maruthi 2

ಹಾಡುಗಳು ಹಾಗೂ ಟೀಸರ್ ಮೂಲಕ ಈಗಾಗಲೇ ಎಲ್ಲರ ಗಮನ ಸೆಳೆದಿರುವ "ಮಾರುತ" ಚಿತ್ರಕ್ಕೆ ಎಸ್ ನಾರಾಯಣ್ ಅವರ ರಚನೆ ಹಾಗೂ ನಿರ್ದೇಶನವಿದೆ. ಸಂಗೀತ ಸಂಯೋಜನೆಯನ್ನು ಎಸ್ ನಾರಾಯಣ್ ಅವರೆ ಮಾಡಿದ್ದಾರೆ. ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ, ಶಿವಪ್ರಸಾದ್ ಯಾದವ್ ಸಂಕಲನ, ವಿನೋದ್ ಹಾಗೂ ಅರ್ಜುನ್ ಸಾಹಸ ನಿರ್ದೇಶನ ಮತ್ತು ಮೋಹನ್ ಕುಮಾರ್, ಸಂತು ಅವರ ನೃತ್ಯ ನಿರ್ದೇಶನವಿದೆ.

ದುನಿಯಾ ವಿಜಯ್, ಶ್ರೇಯಸ್ ಕೆ ಮಂಜು‌, ಬೃಂದಾ(ನಾಯಕಿ), ಸಾಧುಕೋಕಿಲ, ನಿಶ್ವಿಕಾ ನಾಯ್ಡು, ರಂಗಾಯಣ ರಘು, ತಾರಾ ಅನುರಾಧ, ಶರತ್ ಲೋಹಿತಾಶ್ವ, ಪ್ರಮೋದ್ ಶೆಟ್ಟಿ, ಮಂಜು ಪಾವಗಡ , ಚಿತ್ರಾ ಶೆಣೈ, ಸುಜಯ್ ಶಾಸ್ತ್ರಿ ಮುಂತಾದವರ ತಾರಾಬಳಗವಿರುವ ಈ ಚಿತ್ರದ ವಿಶೇಷಪಾತ್ರದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ಅವರು ನಟಿಸಿದ್ದಾರೆ..

 

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ