- ರಾಘವೇಂದ್ರ ಅಡಿಗ ಎಚ್ಚೆನ್.

ರಿಷಭ್ ಶೆಟ್ಟಿ ನಟಿಸಿ ನಿರ್ದೇಶಿಸುತ್ತಿರುವ ಕಾಂತಾರ ಸಿನಿಮಾ ಎಲ್ಲೆಡೆ ಜನಮೆಚ್ಚುಗೆ ಪಡೆದಿದ್ದಾರೆ. ರಿಷಭ್ ನಟನೆಗೆ ಪ್ರೇಕ್ಷಕರು ಫುಲ್ ಮಾರ್ಕ್ಸ್ ಕೊಟ್ಟಿದ್ದಾರೆ.
ಇದೀಗ ಸಿನಿಮಾ ನೋಡಿದ ಬಳಿಕ ಕರವೇ ನಾರಾಯಣಗೌಡ ಮೆಚ್ಚುಗೆ ಮಾತನಾಡಿಗಳನ್ನಾಡಿದ್ದಾರೆ. ನಿನ್ನೆ ನನ್ನ ಕುಟುಂಬದವರು, ಕರವೇ ಮುಖಂಡರೊಂದಿಗೆ ಕಾಂತಾರ ಚಾಪ್ಟರ್-1 ಸಿನಿಮಾ ನೋಡಿದೆ. ಸಿನಿಮಾ ನೋಡಿದೆ ಅನ್ನುವುದಕ್ಕಿಂತ ಅನುಭವಿಸಿದೆ ಎಂದು ಹೇಳಿದರೆ ಸರಿಯಾಗುತ್ತದೆ. ಕಾಂತಾರ ಒಂದು ಅನುಭವ, ಸಿನಿಮಾವನ್ನು ಮೀರಿದ ಅದ್ಭುತ ಕಾಣ್ಕೆ. ಇದನ್ನು ಪದಗಳಲ್ಲಿ ವಿವರಿಸಿ ಹೇಳಲಾಗದು. ಕಾಂತಾರ ನಮ್ಮ ಎಣಿಕೆಯನ್ನು, ಗ್ರಹಿಕೆಯನ್ನು ಮೀರಿದ್ದು. ಒಂದು ಸಿನಿಮಾ ನೋಡುಗರಲ್ಲಿ ಇಷ್ಟು ಭಾವತೀವ್ರತೆಯನ್ನು ಉಂಟುಮಾಡಬಹುದು ಎಂಬುದೇ ವಿಸ್ಮಯ ಎಂದು ಹಾಡಿ ಹೊಗಳಿದ್ದಾರೆ.
ರಿಷಬ್ ಶೆಟ್ಟಿ ತಮ್ಮ ನಿರ್ದೇಶನ, ನಟನೆಯಲ್ಲಿ ಭಾರತ ಚಿತ್ರರಂಗದಲ್ಲಿ ಒಂದು ಹೊಸ ಮಾರ್ಗವನ್ನೇ ಸೃಷ್ಟಿಸಿದ್ದಾರೆ. ಕಣ್ಣು, ಕಿವಿ ಮಾತ್ರವಲ್ಲ, ನಮ್ಮ ಇಡೀ ಅಂತರಾತ್ಮವೇ ಸಿನಿಮಾವನ್ನು ಅನುಭವಿಸುತ್ತ, ಒಂದು ಅಲೌಕಿಕ, ಮಾಂತ್ರಿಕ ಜಗತ್ತಿಗೆ ಕೊಂಡೊಯ್ಯುವಂಥ ಮಾಯಾಜಾಲವನ್ನು ಸೃಷ್ಟಿಸಿದ್ದಾರೆ. ಒಂದು ಸಿನಿಮಾವನ್ನು ಹೀಗೂ ಮಾಡಬಹುದಾ ಎಂಬ ಬೆರಗನ್ನು ಮೂಡಿಸುತ್ತಲೇ ಸಿನಿಮಾ ನಿರ್ದೇಶಕರಿಗೆ ಒಂದು ಹೊಸ ದಾರಿಯನ್ನು ತೋರಿದ್ದಾರೆ. ಇಂಥ ಪವಾಡಗಳು ಪದೇಪದೇ ನಡೆಯುವುದಿಲ್ಲ. ಇದಕ್ಕಾಗಿ ರಿಷಬ್ ಶೆಟ್ಟಿ ಅವರನ್ನು ಎಷ್ಟು ಅಭಿನಂದಿಸಿದರೂ ಕಡಿಮೆಯೇ. ಇಂಥ ಅನುಭವವನ್ನು ಕೊಟ್ಟಿದ್ದಕ್ಕಾಗಿ ಅವರಿಗೆ ಕನ್ನಡ ಜನತೆಯ ಪರವಾಗಿ ಪ್ರೀತಿಯ ಹಾರೈಕೆಗಳು ಎಂದು ಸಾಮಾಜಿಕ ಜಾಲತಾಣದಲ್ಲಿ ಅಭಿನಂದಿಸಿದ್ದಾರೆ.

 

 

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ