ಸರಸ್ವತಿ *

L A ಪ್ರೊಡಕ್ಷನ್ಸ್ ಲಾಂಛನದಲ್ಲಿ ಆನಂದಕುಮಾರ್ ಅವರು ನಿರ್ಮಾಣ ಮಾಡಿರುವ, ವಿಜಯ್ ನಿರ್ದೇಶನದ ಹಾಗೂ ಯುವಪ್ರತಿಭೆ ಹೇಮಂತ್ ಕುಮಾರ್ ನಾಯಕನಾಗಿ ನಟಿಸಿರುವ “ಆಲ್ಫಾ #men love vengeance” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಇತ್ತೀಚೆಗೆ ಈ ಚಿತ್ರದ ಮೊದಲ ಹಾಡು ಜ್ಞಾನಪೀಠ ಪ್ರಶಸ್ತಿ ವಿಜೇತ ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರ ಊರು ಮಾಸ್ತಿಯಲ್ಲಿ ಬಿಡುಗಡೆಯಾಗಿದೆ. ಈ ಚಿತ್ರಕ್ಕಾಗಿ ನಾಗಾರ್ಜುನ ಶರ್ಮ ಅವರು ಬರೆದಿರುವ, ಅನೂಪ್ ಸೀಳಿನ್ ಸಂಗೀತ ಸಂಯೋಜಿಸಿರುವ ಹಾಗೂ ಅನರಾಗ್ ಕುಲಕರ್ಣಿ ಅವರು ಹಾಡಿರುವ “ರಾವಾ ರಾವಾ” ಎಂಬ ಹಾಡು ಮಾಸ್ತಿಯಲ್ಲಿ ನಡೆದ 70 ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಬಿಡುಗಡೆಯಾಗಿದ್ದು, ಶಾಸಕರಾದ ನಂಜೇಗೌಡ ಅವರು ಈ ಹಾಡನ್ನು ಅನಾವರಣ ಮಾಡಿದ್ದಾರೆ. ಈ ಅದ್ದೂರಿ ಸಮಾರಂಭದಲ್ಲಿ ನಿರ್ದೇಶಕ ವಿಜಯ್, ನಾಯಕ ಹೇಮಂತ್ ಕುಮಾರ್, ಸಂಭಾಷಣೆಕಾರ ಮಾಸ್ತಿ ಹಾಗೂ ನಾಯಕಿಯರಾದ ಗೋಪಿಕ ಸುರೇಶ್, ಆಯನಾ ಉಪಸ್ಥಿತರಿದ್ದರು. ಲಹರಿ ಮ್ಯೂಸಿಕ್ ಚಾನಲ್ ನಲ್ಲಿ ಬಿಡುಗಡೆಯಾಗಿರುವ ಈ ಹಾಡಿಗೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಟೀಸರ್ ಹಾಗೂ ಹಾಡಿನ ಮೂಲಕ ಜನರ ಮನ ತಲುಪಿರುವ ಈ ಚಿತ್ರ ಫೆಬ್ರವರಿ 20 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ.

menlove

ಹೇಮಂತ್ ಕುಮಾರ್ ಎಂಬ ನೂತನ ಪ್ರತಿಭೆ ಈ ಚಿತ್ರದ ನಾಯಕನಾಗಿ ಅಭಿನಯಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ನೂತನ ನಾಯಕನಟನಾಗಿ ಪದಾರ್ಪಣೆ ಮಾಡುತ್ತಿದ್ದಾರೆ. ನಾಯಕಿಯಾಗಿ ಗೋಪಿಕಾ ಸುರೇಶ್ ಹಾಗೂ ಅಯನಾ ನಟಿಸಿದ್ದಾರೆ. “ಬಿಗ್ ಬಾಸ್” ಖ್ಯಾತಿಯ ಕಾರ್ತಿಕ್ ಮಹೇಶ್ ವಿಶೇಷಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವಿನಾಶ್, ಅಚ್ಯುತ್ ಕುಮಾರ್, ರಮೇಶ್ ಇಂದಿರಾ, ಬಾಲು ನಾಗೇಂದ್ರ, ಮಾನಸಿ ಸುಧೀರ್, ಗಿರಿರಾಜ್, ರಾಘು ಶಿವಮೊಗ್ಗ ಮುಂತಾದವರ ತಾರಾಬಳಗ ಈ ಚಿತ್ರದಲ್ಲಿದೆ.

ನಾಗಾರ್ಜುನ ಶರ್ಮ ಅವರು ಬರೆದಿರುವ ನಾಲ್ಕು ಹಾಡುಗಳು ಚಿತ್ರದಲ್ಲಿದ್ದು, ಹೆಸರಾಂತ ಸಂಗೀತ ನಿರ್ದೇಶಕ ಜೆ.ಅನೂಪ್ ಸೀಳಿನ್ ಸಂಗೀತ ಸಂಯೋಜಿಸಿದ್ದಾರೆ. ಕಾರ್ತಿಕ್ ಎಸ್ ಛಾಯಾಗ್ರಹಣ, ದೀಪು ಎಸ್ ಕುಮಾರ್ ಸಂಕಲನ, ಚಂಪಕಧಾಮ ಬಾಬು ನಿರ್ಮಾಣ ನಿರ್ವಹಣೆ, ಅಮರ್ ಕಲಾ ನಿರ್ದೆಶನ ಹಾಗೂ ಭೂಷಣ್ ನೃತ್ಯ ನಿರ್ದೇಶನವಿರುವ “ಆಲ್ಫಾ #men love vengeance”ಚಿತ್ರಕ್ಕೆ ಜನಪ್ರಿಯ ಸಂಭಾಷಣೆಕಾರ ಮಾಸ್ತಿ ಸಂಭಾಷಣೆ ಬರೆದಿದ್ದಾರೆ.ವಿಜಯ್, ವಿನೊದ್, ಅರ್ಜುನ್ ರಾಜ್ ಹಾಗೂ ಯೋಗಾನಂದ ಸಾಹಸ ನಿರ್ದೇಶನ ಮಾಡಿದ್ದಾರೆ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ