- ರಾಘವೇಂದ್ರ ಅಡಿಗ ಎಚ್ಚೆನ್.

ʻಕಾಮಿಡಿ ಕಿಲಾಡಿʼ ಸೀಸನ್‌ 3 ವಿನ್ನರ್‌, ಕನ್ನಡದ ಕಿರುತೆರೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಜನಪ್ರಿಯ ಹಾಸ್ಯ ಕಲಾವಿದ ರಾಕೇಶ್ ಪೂಜಾರಿ ನಿಧನರಾಗಿದ್ದಾರೆ. ನಿನ್ನೆ ಸ್ನೇಹಿತನ ಮೆಹಂದಿ ಕಾರ್ಯಕ್ರಮದಲ್ಲಿ ನಟ ರಾಕೇಶ್​ಗೆ ದಿಢೀರ್ ಬಿಪಿ ಲೋ ಆಗಿ ಕುಸಿದು ಬಿದ್ದಿದ್ದಾರೆ. ಆ ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ ರಾಕೇಶ್ ಚಿಕಿತ್ಸೆಗೆ ಸ್ಪಂದಿಸದೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ನಟ ರಾಕೇಶ್ ಪೂಜಾರಿ ಸಾವಿಗೆ ನಟಿ ರಕ್ಷಿತಾ, ಶಿವರಾಜ್ ಕೆ ಆರ್ ಪೇಟೆ ಸೇರಿದಂತೆ ಸಾಕಷ್ಟು ನಟ ನಟಿಯರು ಸಂತಾಪ ಸೂಚಿಸಿದ್ದಾರೆ. ರಾಕೇಶ್ ಅನಿರೀಕ್ಷಿತ ಸಾವಿನಿಂದ ಕಿರುತೆರೆ ಇಂಡಸ್ಟ್ರಿ ಸದ್ಯ ಆಘಾತಕ್ಕೆ ಒಳಗಾಗಿದೆ. ಇನ್ನೂ, ಸ್ಯಾಂಡಲ್​ವುಡ್ ಸ್ಟಾರ್​ ನಟಿ ರಕ್ಷಿತಾ ಪ್ರೇಮ್​ ಅವರು ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಭಾವುಕ ನುಡಿಗಳನ್ನು ಬರೆದು ರಾಕೇಶ್​ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Rakesh-Poojary4-768x432

ನಟಿ ರಕ್ಷಿತಾ ಪ್ರೇಮ್​ ಹೇಳಿದ್ದೇನು? ರಾಕೇಶ ಜೊತೆ ಇನ್ನು ಮುಂದೆ ಮಾತನಾಡಲು ಸಾಧ್ಯವಿಲ್ಲ ಎಂಬುದನ್ನು ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹಾಸ್ಯ ಕಿಲಾಡಿಗಳು ಕಾರ್ಯಕ್ರಮದಲ್ಲಿ ನನ್ನ ಹೃದಯಕ್ಕೆ ತುಂಬಾ ಹತ್ತಿರವಾಗಿದ್ದು ರಾಕೇಶ. ಅತ್ಯಂತ ಸುಂದರವಾದ ವ್ಯಕ್ತಿ. ಕ್ಯಾಮೆರಾದ ಹೊರತಾಗಿಯೋ ಅದ್ಭುತ ಪ್ರತಿಭೆ. ನನಗೆ ತಿಳಿದಿರುವ ಅತ್ಯಂತ ಪರಿಪೂರ್ಣ ವ್ಯಕ್ತಿ. ರಾಕೇಶ ನೀವು ಯಾವಾಗಲೂ ನಮ್ಮ ಹೃದಯದಲ್ಲಿ ಇರುತ್ತೀರಿ. ನಿನ್ನನ್ನು ಮಿಸ್ ಮಾಡಿಕೊಳ್ಳುತ್ತೀರಿ.. ನಿಮ್ಮ ನಗು, ಕಿಡಿಗೇಡಿತನ ಮತ್ತು ಮುಖ್ಯವಾಗಿ ನಮ್ಮೆಲ್ಲರ ಜೀವನದಲ್ಲಿ ನೀವು ತಂದ ಸಂತೋಷ ಅಂತ ಭಾವುಕರಾಗಿ ಬರೆದುಕೊಂಡಿದ್ದಾರೆ.

 

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ