ಕನ್ನಡ ಚಿತ್ರರಂಗದ ಧ್ರುವತಾರೆ, ಕರ್ನಾಟಕ ರತ್ನ ಡಾ. ರಾಜ್‌ಕುಮಾರ್‌ ಅವರ ಜನ್ಮದಿನದ ಸಂಭ್ರಮದಲ್ಲಿ ಮಾಲಿವುಡ್‌ ಸೂಪರ್‌ ಸ್ಟಾರ್‌ ಮೋಹನ್‌ ಲಾಲ್‌ ಅವರು ಅಣ್ಣಾವ್ರ ಜನಪ್ರಿಯ ಗೀತೆಯೊಂದನ್ನು ಹಾಡಿರುವ ವಿಡಿಯೋ ಸಖತ್‌ ವೈರಲ್‌ ಆಗಿದೆ.

ಇತ್ತೀಚೆಗೆ ಅಮೆರಿಕಾದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮವೊಂದರಲ್ಲಿ ಮೋಹನ್‌ ಲಾಲ್‌ ಅವರು ಕನ್ನಡದ ವರನಟ ಡಾ. ರಾಜ್‌ಕುಮಾರ್‌ ಅವರ ಸಾರ್ವಕಾಲಿಕ ಸೂಪರ್‌ ಹಿಟ್‌ ಗೀತೆಯನ್ನು ಹಾಡುವ ಮೂಲಕ ಅನಿವಾಸಿ ಕನ್ನಡಿಗರು ಹಾಗೂ ಸಿನಿರಸಿಕರ ಮನಗೆದ್ದಿದ್ದಾರೆ. ಈ ವಿಡಿಯೋ ಇದೀಗ ಸೋಶಿಯಲ್‌ ಮೀಡಿಯಾಗಳಲ್ಲಿ ಭಾರೀ ವೈರಲ್‌ ಆಗುತ್ತಿದ್ದು, ಕನ್ನಡಿಗರು ಮೋಹನ್‌ ಲಾಲ್‌ ಅವರ ಈ ಪ್ರೇಮಕ್ಕೆ ಫಿದಾ ಆಗಿದ್ದಾರೆ.

ಇತ್ತೀಚೆಗೆ ಸೋಶಿಯಲ್‌ ಮೀಡಿಯಾದಲ್ಲಿ ಮೋಹನ್‌ ಲಾಲ್‌ ಅವರು ಡಾ. ರಾಜ್‌ಕುಮಾರ್‌ ನಟನೆಯ ʻಎರಡು ಕನಸುʼ ಸಿನಿಮಾದ ಅತ್ಯಂತ ಜನಪ್ರಿಯ ಗೀತೆʼ ʻಎಂದೆಂದೂ ನಿನ್ನನು ಮರೆತು ಬದುಕಿರಲಾರೆʼ ಹಾಡನ್ನ ಹಾಡುತ್ತಿರುವ ವಿಡಿಯೋವೊಂದು ಭಾರೀ ಸದ್ದು ಮಾಡುತ್ತಿದೆ. ಈ ವಿಡಿಯೋದಲ್ಲಿ, ಮೋಹನ್‌ ಲಾಲ್‌ ಅವರು ಅತ್ಯಂತ ಸ್ಪಷ್ಟವಾಗಿ ಮತ್ತು ಭಾವಪೂರ್ಣವಾಗಿ ಹಾಡಿರುವುದು ಎಲ್ಲರ ಗಮನ ಸೆಳೆದಿದೆ.

ಮೋಹನ್‌ ಲಾಲ್‌ ಅವರಿಗೆ ಕರ್ನಾಟಕ ಹಾಗೂ ಕನ್ನಡ ಭಾಷೆಯ ಮೇಲೆ ವಿಶೇಷ ಗೌರವ. ಈ ಹಿಂದೆಯೂ ಅವರು ಕೆಲವು ಸಂದರ್ಭಗಳಲ್ಲಿ ಕನ್ನಡದ ಹಾಡುಗಳನ್ನು ಹಾಡಿ ಸುದ್ದಿಯಾಗಿದ್ದರು. ಇದೀಗ ಈ ವಿಡಿಯೋ ವೈರಲ್‌ ಆಗಿರುವುದು ರಾಜ್‌ ಅಭಿಮಾನಿಗಳಿಗೆ ಸಖತ್​ ಖುಷಿ ನೀಡಿದೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ