Sj*

ಸದಭಿರುಚಿಯ ಚಿತ್ರಗಳ ನಿರ್ದೇಶಕ ಆರ್. ಚಂದ್ರು ಅವರು ‘ಕಬ್ಜ’ ಚಿತ್ರದ ನಂತರ ನಿರ್ದೇಶಿಸುತ್ತಿರುವ ಬಹುನಿರೀಕ್ಷಿತ ಚಿತ್ರ ‘ಒರಿಜಿನಲ್ ಮಾನ್‌ಸ್ಟರ್ (OM)’ ದಿನದಿಂದ ದಿನಕ್ಕೆ ಕುತೂಹಲ ಹೆಚ್ಚಿಸುತ್ತಿದೆ. ಆನಂದ್ ಪಂಡಿತ್ ಅರ್ಪಿಸುವ, ಆರ್.ಸಿ. ಸ್ಟುಡಿಯೋಸ್ ಲಾಂಛನದಲ್ಲಿ ಯಮುನಾ ಚಂದ್ರು ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸುತ್ತಿದ್ದಾರೆ. ಕನ್ನಡ ಹಾಗೂ ಹಿಂದಿ ಭಾಷೆಗಳಲ್ಲಿ ಏಕಕಾಲಕ್ಕೆ ನಿರ್ಮಾಣವಾಗುತ್ತಿರುವ ಈ ಚಿತ್ರದಲ್ಲಿ ವಿವಿಧ ಭಾಷೆಗಳ ಜನಪ್ರಿಯ ಕಲಾವಿದರು ಅಭಿನಯಿಸುತ್ತಿದ್ದಾರೆ.

ಈಗಾಗಲೇ ಚಿತ್ರದಲ್ಲಿ ಹೆಸರಾಂತ ನಟ ವಸಿಷ್ಠ ಸಿಂಹ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ವಿಷಯ ಬಹಿರಂಗವಾಗಿದೆ. ಇದೀಗ ಮತ್ತೊಂದು ವಿಶೇಷ ಸುದ್ದಿ ಹೊರಬಿದ್ದಿದೆ. ರಾಜೇಶ್ ಅವರು ಕೂಡ ‘ಒರಿಜಿನಲ್ ಮಾನ್‌ಸ್ಟರ್ (OM)’ ಚಿತ್ರದಲ್ಲಿ ಅತ್ಯಂತ ಕುತೂಹಲಕಾರಿ ಹಾಗೂ ಪ್ರಮುಖ ಪಾತ್ರವೊಂದರಲ್ಲಿ ಅಭಿನಯಿಸುತ್ತಿದ್ದಾರೆ. ಚಿತ್ರದಲ್ಲಿ ಅವರ ಪಾತ್ರದ ಹೆಸರು ‘ನರಸಿಂಹ’.

‘ನರಸಿಂಹ’ ಎಂಬ ವಿಭಿನ್ನ ಹೆಸರಿನ ಈ ಪಾತ್ರದಲ್ಲಿ ರಾಜೇಶ್ ಅವರು ಕಾಣಿಸಿಕೊಳ್ಳುತ್ತಿರುವುದು ವಿಶೇಷ. ಚಿತ್ರದ ಕಥೆಯಲ್ಲಿ ಅವರ ಪಾತ್ರವೂ ಮಹತ್ವ ಪಡೆದುಕೊಂಡಿದ್ದು, ಈ ಪಾತ್ರದ ಮೂಲಕ ರಾಜೇಶ್ ಅವರು ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದ್ದಾರೆ.

ಚಿತ್ರದ ಮೊದಲ ಹಂತದ ಚಿತ್ರೀಕರಣ ಈಗಾಗಲೇ ಪೂರ್ಣಗೊಂಡಿದ್ದು, ಎರಡನೇ ಹಂತದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಶಿವರಾಜಕುಮಾರ್, ತೆಲುಗು ನಟ ಸುನೀಲ್, ವಸಿಷ್ಠ ಸಿಂಹ ಸೇರಿದಂತೆ ಪ್ರಮುಖ ಕಲಾವಿದರು ಚಿತ್ರೀಕರಣದಲ್ಲಿ ಭಾಗವಹಿಸುತ್ತಿದ್ದಾರೆ.

ಆರ್. ಚಂದ್ರು ಅವರ ನಿರ್ದೇಶನ, ಶಿವರಾಜಕುಮಾರ್ ಅವರ ಅಭಿನಯ, ಬಹುಭಾಷಾ ಕಲಾವಿದರ ಸಮಾಗಮ ಹಾಗೂ ವಿಭಿನ್ನ ಪಾತ್ರಗಳ ಮೂಲಕ ‘ಒರಿಜಿನಲ್ ಮಾನ್‌ಸ್ಟರ್ (OM)’ ಈಗಾಗಲೇ ಚಿತ್ರರಂಗದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ.

ಅಜನೀಶ್ ಲೋಕನಾಥ್ ಅವರ ಸಂಗೀತ ನಿರ್ದೇಶನ ಹಾಗೂ ಎ.ಜೆ. ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ