ಬಾಲಿವುಡ್ ಬೆಡಗಿ ಮೃಣಾಲ್ ಠಾಕೂರ್ ಹೊಸ ಸಿನಿಮಾಗಳ ಅಪ್‌ಡೇಟ್‌ಗಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ಗುಡ್‌ನ್ಯೂಸ್ ನೀಡಿದ್ದಾರೆ. ‘ಸೀತಾ ರಾಮಂ’ ನಟಿಯ ಹೊಸ ಸಿನಿಮಾದ ರಿಲೀಸ್ ಡೇಟ್ ಇದೀಗ ಅನೌನ್ಸ್ ಆಗಿದೆ.‌ಫ್ಯಾಮಿಲಿ ಸ್ಟಾರ್’ ಸಿನಿಮಾ ಬಳಿಕ ಯಾವೆಲ್ಲಾ ಚಿತ್ರದಲ್ಲಿ ನಟಿಸುತ್ತಿದ್ದಾರೆ ಎಂಬುದರ ಬಗ್ಗೆ ನಟಿ ಕಡೆಯಿಂದ ಅಪ್‌ಡೇಟ್ ಸಿಕ್ಕಿರಲಿಲ್ಲ. ಇದೀಗ ಹೊಸ ಸಿನಿಮಾದ ರಿಲೀಸ್ ಡೇಟ್ ಸಮೇತ ಸಿಹಿಸುದ್ದಿ ಸಿಕ್ಕಿದೆ. ವರುಣ್ ಧವನ್, ಪೂಜಾ ಹೆಗ್ಡೆ ಜೊತೆ ನಟಿಸಿರುವ ‘ಹೈ ಜವಾನಿ ತೋ ಇಷ್ಕ್ ಹೋನಾ ಹೈ’ ಚಿತ್ರವು ಮುಂದಿನ ವರ್ಷ ಏ.10ರಂದು ರಿಲೀಸ್ ಮಾಡೋದಾಗಿ ಚಿತ್ರತಂಡ ತಿಳಿಸಿದೆ.ಡಬಲ್ ಧಮಾಕ ಎಂಬಂತೆ, ಅಡವಿ ಶೇಷ್ ಜೊತೆ ಮೃಣಾಲ್ ನಟಿಸಿರುವ ‘ಡಕಾಯಿಟ್’ ಗ್ಲಿಂಪ್ಲ್ ಅನ್ನು ಮೇ 26ರಂದು ರಿಲೀಸ್ ಮಾಡುವುದಾಗಿ ಚಿತ್ರತಂಡ ಅನೌನ್ಸ್ ಮಾಡಿದೆ. ಈ ವರ್ಷದ ಅಂತ್ಯದಲ್ಲಿ ಚಿತ್ರ ರಿಲೀಸ್ ಮಾಡುವ ಯೋಜನೆ ಚಿತ್ರತಂಡಕ್ಕಿದೆ. ಸದ್ಯದಲ್ಲೇ ಈ ಬಗ್ಗೆ ಹೆಚ್ಚಿನ ಮಾಹಿತಿ ದೊರೆಯಲಿದೆ.ಸನ್ ಆಫ್ ಸರ್ದಾರ್ 2, ತೂಮ್ ಹೋ ತೋ, ಪೂಜಾ ಮೇರಿ ಜಾನ್ ಸಿನಿಮಾಗಳು ಮೃಣಾಲ್ ಕೈಯಲ್ಲಿವೆ. ಒಟ್ಟು 5 ಸಿನಿಮಾಗಳಲ್ಲಿ ನಟಿ ತೊಡಗಿಸಿಕೊಂಡಿದ್ದಾರೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ