ಸರಸ್ವತಿ *

ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಎಂ. ರಮೇಶ್ ರೆಡ್ಡಿ ಅವರು ತಮ್ಮ ಸೂರಜ್ ಪ್ರೊಡಕ್ಷನ್ ಬ್ಯಾನರ್ ನಲ್ಲಿ ನಿರ್ಮಿಸಿರುವ ಕನ್ನಡದ ಬಹುನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಡಿಸೆಂಬರ್ 25 ರಂದು ತೆರೆಗೆ ಬರುತ್ತಿದೆ. ಅದಕ್ಕೂ ಮುನ್ನ "45" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.‌ ಬೆಂಗಳೂರಿನ ವಿದ್ಯಾಪೀಠದ ಬಳಿಯಿರುವ ಡೊಂಕಣ ಮೈದಾನದಲ್ಲಿ ಆಯೋಜಿಸಲಾಗಿದ್ದ ಅದ್ದೂರಿ ಸಮಾರಂಭದಲ್ಲಿ ಬೆಂಗಳೂರು ನಗರದ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಬೆಂಗಳೂರು ಸೇರಿದಂತೆ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಕಕಾಲಕ್ಕೆ ಈ ಚಿತ್ರದ ಟ್ರೇಲರ್ ಅನಾವರಣವಾಗಿದ್ದು ವಿಶೇಷ.

ಶಿವರಾಜಕುಮಾರ್, ಉಪೇಂದ್ರ, ರಾಜ್ ಬಿ ಶೆಟ್ಟಿ, ಸುಧಾರಾಣಿ, ಪ್ರಮೋದ್ ಶೆಟ್ಟಿ, ನಿರ್ದೇಶಕ ಅರ್ಜುನ್ ಜನ್ಯ ಹಾಗೂ ನಿರ್ಮಾಪಕ ರಮೇಶ್ ರೆಡ್ಡಿ ಅವರು ಸಮಾರಂಭದ ಉಪಸ್ಥಿತರಿದ್ದರು. ಟ್ರೇಲರ್ ಬಿಡುಗಡೆ ನಂತರ ಚಿತ್ರದ ಕುರಿತು ಮಾತನಾಡಿದರು.

multistar

ನಾನು ಮೂರು ಜನ ನಾಯಕರ ಅಭಿಮಾನಿಯಾಗಿ ಈ ಸಿನಿಮಾ ನಿರ್ದೇಶನ ಮಾಡಿದ್ದೇನೆ. ಹಾಗಾಗಿ ನನಗೆ ಈ ಸಿನಿಮಾ ನಿರ್ದೇಶಿಸುವುದು ಅಷ್ಟು ಕಷ್ಟ ಆಗಲಿಲ್ಲ. ನಾನು ಸಿನಿಮಾ ನಿರ್ದೇಶಕನಾಗಲು ಶಿವರಾಜಕುಮಾರ್ ಅವರೆ ಕಾರಣ. ಇನ್ನೂ, ಈ ಚಿತ್ರದ ನಾಲ್ಕನೇ ಹೀರೋ ನಿರ್ಮಾಪಕ ರಮೇಶ್ ರೆಡ್ಡಿ. ಅವರು ಯಾವುದೇ ಕೊರತೆ ಬಾರದ ಹಾಗೆ ಈ ಸಿನಿಮಾ ಮಾಡಿದ್ದಾರೆ. ನಾನು ಚಿತ್ರ ನಿರ್ದೇಶನಕ್ಕೂ ಮುನ್ನ ಅನಿಮೇಶನ್ ನಲ್ಲಿ ಈ ಸಿನಿಮಾ ಕಥೆ ಮಾಡಿ ಶಿವಣ್ಣ ಹಾಗೂ ರಮೇಶ್ ರೆಡ್ಡಿ ಅವರಿಗೆ ತೋರಿಸಿದ್ದೆ. ಅವರು ಅದನ್ನು ನೋಡಿ ಮೆಚ್ಚಿಕೊಂಡಿದ್ದರು. ನಮ್ಮ ಹಿರಿಯರು ನಮಗೆ ತಿಳಿಸಿಕೊಟ್ಟಿರುವ ಅನೇಕ ಸಂಸ್ಕೃತಿಯನ್ನು ನಾವು ಮರೆತಿದ್ದೇವೆ. ಆ ವಿಷಯದ ಒಂದೆಳ್ಳೆ ಇಟ್ಟುಕೊಂಡು ಈ ಸಿನಿಮಾ ಕಥೆ ಮಾಡಿದ್ದೇನೆ.‌ ಎಲ್ಲಾ ತಂತ್ರಜ್ಞರ ಹಾಗೂ ಕಲಾವಿದರ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ. ಡಿಸೆಂಬರ್ 25ರಂದು ಬಿಡುಗಡೆಯಾಗುತ್ತಿದೆ ಎಲ್ಲರೂ ನೋಡಿ ಪ್ರೋತ್ಸಾಹಿಸಿ ಎಂದರು.

multistar2

ಟ್ರೇಲರ್ ಚೆನ್ನಾಗಿ ಮೂಡಿಬಂದಿದೆ ಎಂದು ಮಾತನಾಡಿದ ನಟ ಶಿವರಾಜಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅವರ ಜೊತೆಗೆ ಕೆಲಸ ಮಾಡಿದ್ದು ಬಹಳ ಖುಷಿಯಾಗಿದೆ. ಸುಧಾರಾಣಿ ಅವರು ಅತಿಥಿ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಪ್ರಮೋದ್ ಶೆಟ್ಟಿ ಕೂಡ ನಟಿಸಿದ್ದಾರೆ. ರಮೇಶ್ ರೆಡ್ಡಿ ಅವರ ನಿರ್ಮಾಣದ ಬಗ್ಗೆ ಎಷ್ಟು ಹೇಳಿದರು ಕಡಿಮೆ. ಅಷ್ಟು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ. ನಾನು ಮೊದಲು ಹೇಳಿದ್ದೆ. ಈಗಲೂ ಹೇಳುತ್ತಿದ್ದೇನೆ. ಈ ಚಿತ್ರ ಬಿಡುಗಡೆ ಆದ ಮೇಲೆ ಅರ್ಜುನ್ ಜನ್ಯ ಎಲ್ಲಿಗೊ ಹೋಗುತ್ತಾರೆ‌ ಎಂದರು.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ