- ರಾಘವೇಂದ್ರ ಅಡಿಗಎಚ್ಚೆನ್.

ಮೈಸೂರಿನಲ್ಲಿ 2017ರಲ್ಲಿ ದಾಖಲಾಗಿದ್ದ ಮಸಾಜ್ ಪಾರ್ಲರ್ (ಸ್ಪಾ) ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ, ಕನ್ನಡ ಚಲನಚಿತ್ರ ನಟರಾದ ಸಾಧು ಕೋಕಿಲ ಮತ್ತು ಮಂಡ್ಯ ರಮೇಶ್ ಅವರಿಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಅವರ ವಿರುದ್ಧ ದಾಖಲಾಗಿದ್ದ ಆರೋಪಪಟ್ಟಿಯನ್ನು ಹೈಕೋರ್ಟ್ ರದ್ದುಗೊಳಿಸಿದೆ.
2017ರಲ್ಲಿ ಯುವತಿಯರಿಬ್ಬರು, ನಟರಾದ ಸಾಧು ಕೋಕಿಲ ಮತ್ತು ಮಂಡ್ಯ ರಮೇಶ್ ಅವರು ಸ್ಪಾಗೆ ಬಂದು ಲೈಂಗಿಕ ದೌರ್ಜನ್ಯ ನೀಡಿದ್ದರು ಎಂದು ಮೈಸೂರಿನ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಸ್ಥಳೀಯ ನ್ಯಾಯಾಲಯವು ಇಬ್ಬರು ನಟರಿಗೆ ಸಮನ್ಸ್ ಜಾರಿ ಮಾಡಿತ್ತು.
ತಮಗೆ ನೀಡಲಾಗಿರುವ ಸಮನ್ಸ್ ಅನ್ನು ರದ್ದುಪಡಿಸುವಂತೆ ಕೋರಿ ನಟ ಸಾಧು ಕೋಕಿಲ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳ ಏಕಸದಸ್ಯ ನ್ಯಾಯಪೀಠವು, ಆರೋಪಿತರ ವಿರುದ್ಧ ಸಾಕ್ಷ್ಯಾಧಾರಗಳು ಇಲ್ಲದ ಕಾರಣವನ್ನು ಉಲ್ಲೇಖಿಸಿ ಆರೋಪಪಟ್ಟಿಯನ್ನು ರದ್ದುಗೊಳಿಸಿದೆ.
ಘಟನೆ ಬೆಳಕಿಗೆ ಬಂದ ದಿನದಿಂದಲೂ, ಸಾಧು ಕೋಕಿಲ ಮತ್ತು ಮಂಡ್ಯ ರಮೇಶ್ ಅವರು ಈ ಆರೋಪವನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದರು. “ಇದೊಂದು ಸುಳ್ಳು ಆರೋಪ, ನಾವು ಅಂಥ ಸ್ಥಳಗಳಿಗೆ ಭೇಟಿ ನೀಡುವ ಪ್ರಶ್ನೆಯೇ ಇಲ್ಲ. ನಮ್ಮನ್ನು ತೇಜೋವಧೆ ಮಾಡಲು ಹೀಗೆ ಮಾಡಲಾಗಿದೆ” ಎಂದು ಹೇಳಿದ್ದರು.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ