ಸರಸ್ವತಿ *

ಸಾರಥಿ ಫಿಲಂಸ್ ಲಾಂಛನದಲ್ಲಿ ಕೆ.ವಿ. ಸತ್ಯಪ್ರಕಾಶ್ - ಹೇಮಂತ್ ಗೌಡ ಕೆ.ಎಸ್ ನಿರ್ಮಿಸಿರುವ, ಜಡೇಶ್ ಕೆ.ಹಂಪಿ ನಿರ್ದೇಶನದ ಹಾಗೂ ದುನಿಯಾ ವಿಜಯ್, ರಚಿತರಾಮ್ ಅಭಿನಯದ 'ಲ್ಯಾಂಡ್ ಲಾರ್ಡ್' ಚಿತ್ರಕ್ಕಾಗಿ ಯೋಗರಾಜ್ ಭಟ್ ಅವರು ಬರೆದಿರುವ, ಅಜನೀಶ್ ಲೋಕನಾಥ್ ಸಂಗೀತ ನೀಡಿರುವ "ನಿಂಗವ್ವ ನಿಂಗವ್ವ" ಹಾಡು ಬಿಡುಗಡೆಯಾಗಿದೆ. ವಿಜಯ್ ಪ್ರಕಾಶ್ - ಅನನ್ಯ ಭಟ್ ಕಂಠಸಿರಿಯಲ್ಲಿ ಮೂಡಿಬಂದಿರುವ ಈ ಹಾಡಿಗೆ ಭೂಷಣ್ ನೃತ್ಯ ಸಂಯೋಜನೆ ಮಾಡಿದ್ದಾರೆ‌. ದುನಿಯಾ ವಿಜಯ್ - ರಚಿತರಾಮ್ ಅಭಿನಯಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿರುವ ಈ ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ.

ಸ್ಯಾಂಡಲ್ ವುಡ್ ನ ತಾರಾ ದಂಪತಿಗಳಾದ "ನೆನಪಿರಲಿ" ಪ್ರೇಮ್ - ಜ್ಯೋತಿ, ಡಾರ್ಲಿಂಗ್ ಕೃಷ್ಣ - ಮಿಲನ ನಾಗರಾಜ್ ಹಾಗೂ ತರುಣ್ ಸುಧೀರ್ - ಸೋನಾಲ್ ಅವರಿಂದ "ನಿಂಗವ್ವ ನಿಂಗವ್ವ" ಹಾಡು ಬಿಡುಗಡೆಯಾಯಿತು. ಹಾಡು ಬಿಡುಗಡೆ ಮಾಡಿ ಮಾತನಾಡಿದ ದಂಪತಿಗಳು ಯೋಗರಾಜ್ ಭಟ್ ಅವರ ಸಾಹಿತ್ಯ, ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ, ವಿಜಯ್ ಪ್ರಕಾಶ್ ಗಾಯ‌ನ ಹಾಗೂ ವಿಶೇಷವಾಗಿ ದುನಿಯಾ ವಿಜಯ್, ರಚಿತರಾಮ್ ಅವರ ಅಭಿನಯದ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಸ್ವಾಮಿ ಅವರ ಛಾಯಾಗ್ರಹಣ ಪೈಟಿಂಗ್ ಇದ್ದ ಹಾಗೆ ಇದೆ ಎಂದು ಬಣ್ಣಿಸಿದರು. ನಿರ್ದೇಶಕರ ಕಾರ್ಯವೈಖರಿ ಚೆನ್ನಾಗಿದೆ ಎಂದು ತಿಳಿಸಿ, ನಿರ್ಮಾಪಕರಿಗೆ ಶುಭವನ್ನು ಕೋರಿದರು. ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು. ಆನಂತರ ದಂಪತಿಗಳಿಗೆ ದುನಿಯಾ ವಿಜಯ್ ಹಾಗೂ ರಚಿತರಾಮ್ ಬಾಗಿನ ನೀಡಿ ಸನ್ಮಾನಿಸಿದರು. ನೀನಾಸಂ ಸತೀಶ್ ಹಾಗೂ ಗುರು ದೇಶಪಾಂಡೆ ಅತಿಥಿಗಳಾಗಿ ಆಗಮಿಸಿದ್ದರು.

ningavva

ಈ ಸಂದರ್ಭದ ಸಂತೋಷವನ್ನು ನೋಡಿ ಮಾತುಗಳೆ ಹೊರಡುತ್ತಿಲ್ಲ. ಮೊದಲಿಗೆ ಹಾಡು ಬಿಡುಗಡೆ ಮಾಡಿ ಕೊಟ್ಟ ದಂಪತಿಗಳಿಗೆ ಧನ್ಯವಾದ. ನನ್ನ ಹಿಟ್ ಸಾಂಗ್ ಗಳ ಲಿಸ್ಟ್ ನಲ್ಲಿ ಅಧಿಕ ಹಾಡುಗಳನ್ನು ಬರೆದಿರುವುದು ಯೋಗರಾಜ್ ಭಟ್ ಅವರು. ಈ ಹಾಡನ್ನು ಅದ್ಭುತವಾಗಿ ಬರೆದಿದ್ದಾರೆ. ಅಷ್ಟೇ ಚೆನ್ನಾಗಿ ವಿಜಯ್ ಪ್ರಕಾಶ್ ಹಾಡಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದಾರೆ. ಭೂಷಣ್ ಅವರ ನೃತ್ಯ ನಿರ್ದೇಶನ ಕೂಡ ಉತ್ತಮವಾಗಿದೆ. ಸಾಮಾನ್ಯವಾಗಿ ನಾಯಕಿಯರು ಈ ವಯಸ್ಸಿನ ಪಾತ್ರ ಒಪ್ಪಿಕೊಳ್ಳುವುದು ಕಡಿಮೆ. ರಚಿತರಾಮ್ ಅವರು ಒಪ್ಪಿಕೊಂಡು ಈ ಪಾತ್ರ ಮಾಡಿದ್ದಾರೆ. ನನಗೂ ಕೂಡ ಈ ಹಾಡು‌ ಬಿಡುಗಡೆ ಆಗುವವರೆಗೂ ನನ್ನ ಪಾತ್ರದ ಬಗ್ಗೆ ಎಲ್ಲರೂ ಏನು ಹೇಳಬಹುದು ಎಂಬ ಕುತೂಹಲವಿತ್ತು. ಈಗ ಎಲ್ಲರೂ ಪ್ರಶಂಸೆ ನೀಡುತ್ತಿದ್ದಾರೆ. ಒಳ್ಳೆಯ ಕಥೆ ಮಾಡಿಕೊಂಡಿರುವ ನಿರ್ದೇಶಕ ಜಡೇಶ್ ಕೆ ಹಂಪಿ ಅವರಿಗೆ ಹಾಗೂ ಯಾವುದೇ ಕೊರತೆ ಬಾರದ ಹಾಗೆ ನಿರ್ಮಾಣ ಮಾಡಿರುವ ನಿರ್ಮಾಪಕರಿಗೆ ಅಭಿನಂದನೆಗಳನ್ನು ತಿಳಿಸಿದ ನಾಯಕ ವಿಜಯ್ ಕುಮಾರ್ ಜನವರಿ 23 ರಂದು ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ ನೋಡಿ ಪ್ರೋತ್ಸಾಹ ನೀಡಿ ಎಂದರು.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ