ಜಾಗೀರ್ದಾರ್*

*ಹಿರಿಯ ನಿರ್ದೇಶಕ ಎಸ್ ವಿ ರಾಜೇಂದ್ರಸಿಂಗ್ ಬಾಬು ನಿರ್ದೇಶಕರಾಗಿ 50 ವರ್ಷಗಳು ಪೂರೈಸಿರುವ ಹಿನ್ನೆಲೆಯಲ್ಲಿ ಕನ್ನಡ ಚಿತ್ರರಂಗದಿಂದ ಅದ್ದೂರಿ ಸಮಾರಂಭ* .

ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕ  ಎಸ್ ವಿ ರಾಜೇಂದ್ರಸಿಂಗ್ ಬಾಬು ನಿರ್ದೇಶಕರಾಗಿ ಇದೇ ಅಕ್ಟೋಬರ್ ತಿಂಗಳಿಗೆ 50 ವರ್ಷಗಳಾಗಿದೆ. ಈ ಸಂಭ್ರಮವನ್ನು ಸಂಭಮಿಸಲು ಕನ್ನಡ ಚಿತ್ರರಂಗದಿಂದ "ಎಸ್ ವಿ ಆರ್ 50" ಎಂಬ ಅದ್ದೂರಿ ಸಮಾರಂಭ ಆಯೋಜಿಸಿ ರಾಜೇಂದ್ರಸಿಂಗ್ ಬಾಬು ಅವರನ್ನು ಆತ್ಮೀಯವಾಗಿ ಸನ್ಮಾನಿಸಲಿದೆ. ಐದು ದಿನಗಳ ಕಾಲ ಅದ್ದೂರಿಯಾಗಿ ಈ ಸಮಾರಂಭ ನಡೆಯಲಿದೆ. ಸಮಾರಂಭದ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕರಾದ ಗಿರೀಶ್ ಕಾಸರವಳ್ಳಿ, ನಾಗತಿಹಳ್ಳಿ ಚಂದ್ರಶೇಖರ್, ಪಿ.ಶೇಷಾದ್ರಿ, ನಂಜುಂಡೇಗೌಡ, ವಿಜಯಲಕ್ಷ್ಮಿ ಸಿಂಗ್, ಸಂಗೀತ ನಿರ್ದೇಶಕ ಹಂಸಲೇಖ, ನಿರ್ಮಾಪಕ ರಾಕ್ಲೈನ್ ವೆಂಕಟೇಶ್, ಪತ್ರಕರ್ತ ಗಂಗಾಧರ್  ಮೊದಲಿಯರ್, ಲಿಂಗದೇವರು, ಕನ್ನಡ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷ ಎನ್ನಾರ್ ಕೆ ವಿಶ್ವನಾಥ್, ಸಂಕಲನಕಾರ ಕೆಂಪರಾಜ್ ಹಾಗೂ ಸಮಾರಂಭದ ಆಯೋಜಕರಾದ ಕೃಷ್ಣೇಗೌಡ(ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ) ಉಪಸ್ಥಿತರಿದ್ದರು.

October

ಕರ್ನಾಟಕ ಮಾತ್ರವಲ್ಲ, ಇಡೀ ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಈವರೆಗೂ 50 ವರ್ಷಗಳ ಸಕ್ರಿಯವಾಗಿ ನಿರ್ದೇಶಕರಾಗಿರುವವರು ಯಾರು ಇಲ್ಲ. ಅದು ರಾಜೇಂದ್ರಸಿಂಗ್ ಬಾಬು ಅವರು ಒಬ್ಬರೆ. ಈಗಲೂ ಅವರ ನಿರ್ದೇಶನದ ಎರಡು ಚಿತ್ರಗಳು ತೆರೆಗೆ ಬರಲು ಸಿದ್ದಾವಾಗಿದೆ. ಈ ಸುವರ್ಣ ಸಂಭ್ರಮವನ್ನು ಸಂಭ್ರಮಿಸಲು ಅಕ್ಟೋಬರ್ 23 ರಿಂದ 5 ದಿನಗಳ ಕಾಲ "ಎಸ್ ವಿ ಆರ್ 50" ಎಂಬ ಅದ್ದೂರಿ ಸಮಾರಂಭ ನಡೆಸಲಾಗುತ್ತಿದೆ. 23 ರಂದು ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಅಲ್ಲಿಂದ ನಾಲ್ಕು ದಿನಗಳ ಕಾಲ ಕಲಾವಿದರ ಸಂಘದಲ್ಲಿ ರಾಜೇಂದ್ರಸಿಂಗ್ ಬಾಬು ಅವರ ನಿರ್ದೇಶನದ ರಾಷ್ಟ್ರ ಹಾಗೂ ರಾಜ್ಯ ಪ್ರಶಸ್ತಿ ಚಿತ್ರಗಳ ಚಿತ್ರೋತ್ಸವ ನಡೆಯಲಿದೆ. ದಿನಕ್ಕೆ ಎರಡು ಚಿತ್ರಗಳ ಪ್ರದರ್ಶನವಿರುತ್ತದೆ. ಈ ಸಂದರ್ಭದಲ್ಲಿ ಕನ್ನಡ ಹಾಗೂ ಇತರ ಭಾಷೆಗಳ ಗಣ್ಯರು ಪಾಲ್ಗೊಳ್ಳಲಿದ್ದಾರೆ. 27 ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು, ಅಂದು ರಾಜೇಂದ್ರಸಿಂಗ್ ಬಾಬು ಅವರಿಗೆ ಚಿತ್ರರಂಗದ ಪರವಾಗಿ ಆತ್ಮೀಯವಾಗಿ ಸನ್ಮಾನ‌ ಸಮಾರಂಭ ನಡೆಯಲಿದೆ. ಅದಕ್ಕೂ ಮುನ್ನ ಬೆ.11ರಿಂದ ಮಧ್ಯಾಹ್ನ 3 ಗಂಟೆವರಗೂ ರಾಜೇಂದ್ರಸಿಂಗ್ ಬಾಬು ಅವರ ಜನಪ್ರಿಯ ಹಾಡುಗಳ ಥೀಮ್ ಮ್ಯೂಸಿಕ್ ಬಳಸಿಕೊಂಡು ನುರಿತ ಮಾಡಲ್ ಗಳು ಫ್ಯಾಷನ್ ಶೋ ಸಹ ನಡೆಸಲಿದ್ದಾರೆ ಇದೇ ಸಂದರ್ಭದಲ್ಲಿ ಗಂಗಾಧರ್ ಮೊದಲಿಯರ್ ಅವರು ಬರೆದಿರುವ ಪುಸ್ತಕ ಸೇರಿದಂತೆ ಎರಡು ಪುಸ್ತಕಗಳ ಬಿಡುಗಡೆ ಹಾಗೂ ಲಿಂಗದೇವರು ಅವರು ನಿರ್ದೇಶಿಸಿರುವ ಸಾಕ್ಷ್ಯಚಿತ್ರದ ಪ್ರದರ್ಶನವಿರುತ್ತದೆ. ಹಂಸಲೇಖ ಅವರ ನೇತೃತ್ವದಲ್ಲಿ ರಾಜೇಂದ್ರಸಿಂಗ್ ಬಾಬು ಅವರ ನಿರ್ದೇಶನದ ಚಿತ್ರಗಳ ಜನಪ್ರಿಯ ಹಾಡುಗಳನ್ನು ಹಂಸಲೇಖ ಅವರ ತಂಡದವರು ಹಾಡಲಿದ್ದಾರೆ. ಸನ್ಮಾನ್ಯ ಮುಖ್ಯಮಂತ್ರಿಗಳು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಸಮಾರಂಭದ ಆಯೋಜಕ ಕೃಷ್ಣೇಗೌಡ ತಿಳಿಸಿದರು.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ