Sj*

ವಿಶೇಷ ಪೋಸ್ಟರ್ ಬಿಡುಗಡೆ ಮಾಡಿ ವಸಿಷ್ಠ ಸಿಂಹ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ ಆರ್ ಸಿ ಸ್ಟುಡಿಯೋಸ್* .

ಸದಭಿರುಚಿಯ ಚಿತ್ರಗಳ ನಿರ್ದೇಶಕ ಆರ್ ಚಂದ್ರು, "ಕಬ್ಜ" ಚಿತ್ರದ ನಂತರ "ಒರಿಜಿನಲ್ ಮಾನ್ ಸ್ಟರ್"(OM) ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಆನಂದ್ ಪಂಡಿತ್ ಅರ್ಪಿಸುವ, ಆರ್ ಸಿ ಸ್ಟುಡಿಯೋಸ್ ಲಾಂಛನದಲ್ಲಿ ಯಮುನ ಚಂದ್ರು ಅವರು ನಿರ್ಮಿಸುತ್ತಿರುವ ಹಿಂದಿ ಹಾಗೂ ಕನ್ನಡ ಎರಡು ಭಾಷೆಗಳಲ್ಲಿ ಏಕಕಾಲಕ್ಕೆ ನಿರ್ಮಾಣವಾಗುತ್ತಿರುವ ಹಾಗೂ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸುತ್ತಿರುವ ಚಿತ್ರ ಆರಂಭದಿಂದಲೂ ಕುತೂಹಲ ಮೂಡಿಸಿದೆ. ಈ ಚಿತ್ರದಲ್ಲಿ ತಮ್ಮ ಅಮೋಘ ಅಭಿನಯ ಹಾಗೂ ಕಂಚಿನ ಕಂಠದಿಂದ ಜನಪ್ರಿಯರಾಗಿರುವ ಹೆಸರಾಂತ ನಟ ವಸಿಷ್ಠ ಸಿಂಹ ಅಭಿನಯಿಸುತ್ತಿದ್ದಾರೆ. ವಸಿಷ್ಠ ಸಿಂಹ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಈ ವಿಷಯವನ್ನು ತಿಳಿಸಿರುವ ಆರ್ ಸಿ ಸ್ಟುಡಿಯೋಸ್ ಸಂಸ್ಥೆ ವಿಶೇಷ ಪೋಸ್ಟರ್ ಬಿಡಿಗಡೆ ಮಾಡಿ ವಸಿಷ್ಠ ಸಿಂಹ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.

ಬಹು ನಿರೀಕ್ಷಿತ ಈ ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಪೂರ್ಣವಾಗಿದ್ದು, ಇದೇ ತಿಂಗಳ 25 ರಿಂದ ಎರಡನೇ ಹಂತದ ಚಿತ್ರೀಕರಣ ಆರಂಭವಾಗಲಿದೆ. ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ತೆಲುಗು ನಟ ಸುನೀಲ್ ಹಾಗೂ ವಸಿಷ್ಠ ಸಿಂಹ ಎರಡನೇ ಹಂತದ ಚಿತ್ರೀಕರಣದಲ್ಲಿ ಭಾಗವಹಿಸುತ್ತಿದ್ದಾರೆ. ಈಗಾಗಲೇ ಶಿವಣ್ಣ ಹಾಗೂ ವಸಿಷ್ಠ ಸಿಂಹ ಕಾಂಬಿನೇಶನ್ ನಲ್ಲಿ ಮೂಡಿಬಂದಿರುವ "ಮಫ್ತಿ", "ಟಗರು" ಹಾಗೂ "ಕವಚ" ಚಿತ್ರಗಳು ಎಲ್ಲರ ಮನ ಗೆದ್ದಿದ್ದು, ಈಗ "OM" ಚಿತ್ರದಲ್ಲಿ ಶಿವರಾಜಕುಮಾರ್ ಅವರ ಜೊತೆಗೆ ವಸಿಷ್ಠ ಸಿಂಹ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ವಸಿಷ್ಠ ಸಿಂಹ ಅವರ ಪಾತ್ರ ಏನಿರಬಹುದು? ಎಂಬ ಕುತೂಹಲ ಅಭಿಮಾನಿಗಳಲ್ಲಿ ಮನೆ ಮಾಡಿದೆ. ಶಿವರಾಜಕುಮಾರ್, ವಸಿಷ್ಠ ಸಿಂಹ ಹಾಗೂ ಆರ್ ಚಂದ್ರು ಅವರ ಕಾಂಬಿನೇಶನ್ ನಲ್ಲಿ ಬರುತ್ತಿರುವ ಈ ಚಿತ್ರದ ಬಗ್ಗೆ ಹೆಚ್ಚಿನ ನಿರೀಕ್ಷೆ ಇದೆ. ಹಲವು ವಿಶೇಷಗಳಿಗೆ ಸಾಕ್ಷಿಯಾಗಿರುವ ಹಾಗೂ "ಒರಿಜಿನಲ್ ಮಾನ್ ಸ್ಟರ್(OM) ಶೀರ್ಷಿಕೆಯಿಂದಲೇ ಕುತೂಹಲ ಮೂಡಿಸಿರುವ ಈ ಚಿತ್ರ ಚಿತ್ರೀಕರಣ ಸಮಯದಲ್ಲೇ ಎಲ್ಲರ ಗಮನ ಸೆಳೆಯುತ್ತಿದೆ.

original

ಆರ್ ಚಂದ್ರು ಅವರ ನಿರ್ದೇಶನದಲ್ಲಿ ಅಭಿನಯಿಸಬೇಕೆಂದು ಬಹಳ ದಿನಗಳಿಂದ ಕಾಯುತ್ತಿದ್ದೆ. ಈಗ ಅವಕಾಶ ಸಿಕ್ಕಿದೆ. ಆರ್ ಚಂದ್ರು ಅವರ ಜೊತೆಗೆ ಕೆಲಸ ಮಾಡುತ್ತಿರುವುದು ಹಾಗೂ ಶಿವಣ್ಣ ಅವರ ಜೊತೆಗೆ ನಟಿಸುತ್ತಿರುವುದು ಬಹಳ ಖುಷಿಯಾಗಿದೆ ಎಂದು ವಸಿಷ್ಠ ಸಿಂಹ ತಿಳಿಸಿದ್ದಾರೆ.

ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ ಹಾಗೂ ಎ ಜೆ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಶಿವರಾಜಕುಮಾರ್ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ಪ್ರಮುಖಪಾತ್ರಗಳಲ್ಲಿ ತೆಲುಗು ನಟ ಸುನೀಲ್ ಹಾಗೂ ವಸಿಷ್ಠ ಸಿಂಹ ಅವರು ಅಭಿನಯಿಸುತ್ತಿದ್ದಾರೆ. ಇಷ್ಟೇ ಅಲ್ಲದೆ ಎಲ್ಲಾ ಭಾಷೆಗಳ ಜನಪ್ರಿಯ ಕಲಾವಿದರು "OM" ಚಿತ್ರದಲ್ಲಿ ಅಭಿನಯಿಸಿಲಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿಯನ್ನು ಮುಂದಿನ ದಿನಗಳಲ್ಲಿ ನೀಡುವುದಾಗಿ ನಿರ್ದೇಶಕ ಆರ್ ಚಂದ್ರು ತಿಳಿಸಿದ್ದಾರೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ