- ರಾಘವೇಂದ್ರ ಅಡಿಗ ಎಚ್ಚೆನ್.
2025ನೇ ಸಾಲಿನ ‘ಪ್ರದ್ಮ ಪ್ರಶಸ್ತಿ’  ಪ್ರದಾನ ಸಮಾರಂಭ ಇಂದು (ಏಪ್ರಿಲ್ 28) ನಡೆದಿದೆ. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ರಾಷ್ಟ್ರಪತಿ ಭವನದಲ್ಲಿ ದ್ರೌಪದಿ ಮುರ್ಮು ಅವರು, ಸುಜುಕಿ ಮೋಟಾರ್‌ನ ಮಾಜಿ ಮುಖ್ಯಸ್ಥ ದಿವಂಗತ ಒಸಾಮು ಸುಜುಕಿ, ಖ್ಯಾತ ಗಾಯಕ ದಿವಂಗತ ಪಂಕಜ್ ಉದಾಸ್ ಮತ್ತು ಬಿಹಾರದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಸುಶೀಲ್ ಕುಮಾರ್ ಮೋದಿ ಸೇರಿದಂತೆ 71 ಪ್ರಮುಖ ವ್ಯಕ್ತಿಗಳಿಗೆ 2025 ನೇ ಸಾಲಿನ ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.

GpoF5SmXsAAsK6C
ಇದೇ ಸಮಯದಲ್ಲಿ  ನಟ ಅಜಿತ್ ಕುಮಾರ್, ಬಾಲಯ್ಯ, ಸಿಂಗರ್ ಅರಿಜಿತ್ ಸಿಂಗ್, ಶೇಖರ್ ಕಪೂರ್ ಸೇರಿದಂತೆ ಹಲವು ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ನಂದಮೂರಿ ಬಾಲಕೃಷ್ಣ ಅವರು ತೆಲುಗು ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಸಕ್ರಿಯರಾಗಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ರಾಜಕೀಯ ಕ್ಷೇತ್ರದಲ್ಲೂ ಅವರು ತೊಡಗಿಕೊಂಡಿದ್ದಾರೆ. ಇನ್ನು, ಅಜಿತ್ ಕುಮಾರ್ ಅವರು ತಮಿಳು ಚಿತ್ರರಂಗದಲ್ಲಿ ಸಾಧನೆ ಮಾಡಿದ್ದಾರೆ. ಹಲವು ಸೂಪರ್ ಹಿಟ್ ಸಿನಿಮಾಗಳ ಮೂಲಕ ಜನರಿಗೆ ಮನರಂಜನೆ ನೀಡಿದ್ದಾರೆ. ಬಾಲಿವುಡ್ನಲ್ಲಿ ವಿಭಿನ್ನವಾದ ಸಿನಿಮಾಗಳ ಮೂಲಕ ನಿರ್ದೇಶಕ ಶೇಖರ್ ಕಪೂರ್ ಅವರು ಜನಮನ ಗೆದ್ದಿದ್ದಾರೆ.

GpoF-M4aMAA5FwoGpoIt_WbgAE99nW
ಈ ವರ್ಷ ಜನವರಿಯಲ್ಲಿ ಒಟ್ಟು 139 ಜನರಿಗೆ ಪದ್ಮ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿತ್ತು. ಈ ಪೈಕಿ 71 ಮಂದಿಗೆ ಇಂದು (ಏ.28) ಪ್ರಶಸ್ತಿ ನೀಡಲಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಮುಂತಾದವರು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ