- ರಾಘವೇಂದ್ರ ಅಡಿಗ ಎಚ್ಚೆನ್.  

ಸಾಮಾಜಿಕ ಜಾಲತಾಣಗಳಲ್ಲಿ ಕಳೆದ ಕೆಲವು ದಿನಗಳಿಂದ ನಟಿ ಸಾಯಿ ಪಲ್ಲವಿ  ಅವರ ಮದುವೆ ಕುರಿತು ವಿವಿಧ ಊಹಾಪೋಹಗಳು ಹರಿದಾಡುತ್ತಿದ್ದವು. ರಹಸ್ಯವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಹಾಗೂ ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎಂಬ ಸುದ್ದಿಗಳು ವೈರಲ್ ಆಗಿದ್ದವು.

ಆದರೆ ಇತ್ತೀಚೆಗೆ ಸಿನಿಮಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಾಯಿ ಪಲ್ಲವಿ ಈ ವದಂತಿಗಳಿಗೆ ಸ್ಪಷ್ಟನೆ ನೀಡಿದರು. ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ತಾವು ಪ್ರಸ್ತುತ ಸಿನಿಮಾಗಳ ಮೇಲೆ ಮಾತ್ರ ಗಮನಹರಿಸಿದ್ದೇನೆ ಮತ್ತು ಮದುವೆಯ ಬಗ್ಗೆ ಯೋಚಿಸಲು ಸಮಯವಿಲ್ಲ ಎಂದು ಹೇಳಿದರು. ತಾವು ಇನ್ನೂ ಸಿಂಗಲ್ ಆಗಿರುವುದಾಗಿ ಸ್ಪಷ್ಟಪಡಿಸಿ, ಮದುವೆ ಸುದ್ದಿಯಲ್ಲಿ ಯಾವುದೇ ಸತ್ಯವಿಲ್ಲ ಎಂದು ತಿಳಿಸಿದರು.

ದಕ್ಷಿಣ ಭಾರತದ ಖ್ಯಾತ ನಟಿಯಾಗಿರುವ ಸಾಯಿ ಪಲ್ಲವಿ  ಇದೀಗ ಬಾಲಿವುಡ್ ಪ್ರವೇಶಕ್ಕೆ ಸಜ್ಜಾಗಿದ್ದಾರೆ. ಅವರು ಜುನೈದ್ ಖಾನ್ ಜೊತೆ ‘ಏಕ್ ದಿನ್’ ಚಿತ್ರದ ಮೂಲಕ ಹಿಂದಿ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಈ ಚಿತ್ರದ ಚಿತ್ರೀಕರಣ ಜಪಾನ್‌ನಲ್ಲಿ ಪೂರ್ಣಗೊಂಡಿದೆ.

‘ರಾಮಾಯಣ’ ಚಿತ್ರದಲ್ಲಿ ಸೀತೆಯಾಗಿ ಇದರ ಜೊತೆಗೆ, ನಿತೀಶ್ ತಿವಾರಿ ನಿರ್ದೇಶನದ ‘ರಾಮಾಯಣ’ ಚಿತ್ರದಲ್ಲಿಸಾಯಿ ಪಲ್ಲವಿ  ಸೀತೆಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ರಣಬೀರ್ ಕಪೂರ್ ರಾಮನಾಗಿ ಕಾಣಿಸಿಕೊಳ್ಳಲಿದ್ದು, ಪ್ರೇಕ್ಷಕರಲ್ಲಿ ಭಾರೀ ನಿರೀಕ್ಷೆ ಮೂಡಿಸಿದೆ.

ಖ್ಯಾತ ನಿರ್ದೇಶಕ ಮಣಿರತ್ನಂ ಅವರ ಮುಂದಿನ ಚಿತ್ರದಲ್ಲಿಯೂ ಸಾಯಿ ಪಲ್ಲವಿ  ನಾಯಕಿಯಾಗಿ ನಟಿಸಲಿದ್ದಾರೆ ಎಂಬ ಮಾಹಿತಿ ಇದೆ. ಈ ಪ್ರಾಜೆಕ್ಟ್‌ಗಳೊಂದಿಗೆ ಮುಂದಿನ ಕೆಲವು ವರ್ಷಗಳ ಕಾಲ ಅವರು ಬ್ಯುಸಿಯಾಗಿರಲಿದ್ದಾರೆ

 

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ