- ರಾಘವೇಂದ್ರ ಅಡಿಗ ಎಚ್ಚೆನ್

ಕನ್ನಡ ಚಿತ್ರರಂಗದಲ್ಲಿ ಇಲ್ಲಿಯವರೆಗೆ ಗ್ಲಾಮರಸ್ ಮತ್ತು ಟ್ರೆಡೀಷನಲ್ ಪಾತ್ರಗಳಲ್ಲಿ ಹೆಚ್ಚಾಗಿ ಮಿಂಚಿದ್ದ ನಟಿ ಪಾವನಾ ಗೌಡ, ಇದೀಗ ರಗಡ್ ಪಾತ್ರದ ಮೂಲಕ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದ್ದಾರೆ. ಹೌದು, ಆರಂಭದಿಂದ ಇಲ್ಲಿಯವರೆಗೂ ಹೆಚ್ಚಾಗಿ ಸೌಂದರ್ಯ ಮತ್ತು ಸೌಮ್ಯ ಸ್ವಭಾವದ ಹುಡುಗಿಯ ಪಾತ್ರಗಳಲ್ಲೇ ಹೆಚ್ಚಾಗಿ ಕಾಣಿಸಿಕೊಂಡು ಗಮನ ಸೆಳೆದಿದ್ದ ಪಾವನಾ ಗೌಡ, ಈಗ ಉತ್ತರ ಕರ್ನಾಟಕದ ಖಡಕ್ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅಂದಹಾಗೆ, ನಟಿ ಪಾವನಾ ಗೌಡ ಇದೇ ಮೊದಲ ಬಾರಿಗೆ ಇಂಥದ್ದೊಂದು ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ‘ಡಿಯರ್ ಹಸ್ಬೆಂಡ್’ ಚಿತ್ರದಲ್ಲಿ.

pavana

‘ಜಿ9 ಕಮ್ಯುನಿಕೇಶನ್ ಅ್ಯಂಡ್ ಮೀಡಿಯಾ’ ಸಂಸ್ಥೆಯ ಅಡಿಯಲ್ಲಿ ನಿರ್ಮಾಣವಾಗುತ್ತಿರುವ, ಗುರುರಾಜ ಕುಲಕರ್ಣಿ (ನಾಡಗೌಡ) ನಿರ್ದೇಶನದ ‘ಡಿಯರ್ ಹಸ್ಬೆಂಡ್’ ಚಿತ್ರದ ತೆರೆ ಹಿಂದಿನ ಕೆಲಸಗಳು ಭರದಿಂದ ನಡೆಯುತ್ತಿದೆ. ಈಗಾಗಲೇ ಸದ್ದಿಲ್ಲದೆ, ‘ಡಿಯರ್ ಹಸ್ಬೆಂಡ್’ ಚಿತ್ರದ ಎರಡು ಹಂತದ ಚಿತ್ರೀಕರಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವ ಚಿತ್ರತಂಡ, ಇದೀಗ ಚಿತ್ರದ ಮೂರನೇ ಹಂತದ ಚಿತ್ರೀಕರಣಕ್ಕೆ ತಯಾರಿ ಮಾಡಿಕೊಳ್ಳುತ್ತಿದೆ. ಇದರ ನಡುವೆಯೇ ಚಿತ್ರತಂಡದಿಂದ ಹೊಸ ಸುದ್ದಿಯೊಂದು ಹೊರಬಂದಿದ್ದು, ನಟಿ ಪಾವನಾ ಗೌಡ ಅಧಿಕೃತವಾಗಿ ‘ಡಿಯರ್ ಹಸ್ಬೆಂಡ್’ ಚಿತ್ರಕ್ಕೆ ಸೇರ್ಪಡೆಯಾಗಿದ್ದಾರೆ.

pavana1

ಇನ್ನು ಚಿತ್ರತಂಡ ಮತ್ತು ನಟಿ ಪಾವನಾ ಗೌಡ ಎರಡೂ ಕಡೆಯಿಂದ ಖಚಿತಪಡಿಸಿರುವ ಮಾಹಿತಿಯಂತೆ, ‘ಡಿಯರ್ ಹಸ್ಬೆಂಡ್’ ಚಿತ್ರದಲ್ಲಿ ನಟಿ ಪಾವನಾ ಗೌಡ ಅವರದ್ದು ಪೊಲೀಸ್ ಅಧಿಕಾರಿಯ ಪಾತ್ರ. ತಮ್ಮ ಪಾತ್ರದ ಬಗ್ಗೆ ಮಾತನಾಡಿರುವ ಪಾವನಾ ಗೌಡ, ‘ನಾನು ಇಲ್ಲಿಯವರೆಗೆ ಮಾಡಿರುವ ಪಾತ್ರಗಳಿಗಿಂತ ಸಂಪೂರ್ಣ ವಿಭಿನ್ನವಾಗಿರುವಂತ ಪಾತ್ರ ಇದಾಗಿದೆ. ಒಬ್ಬ ಜವಾಬ್ದಾರಿಯುತ ಮಹಿಳಾ ಪೊಲೀಸ್ ಅಧಿಕಾರಿ ಹೇಗಿರುತ್ತಾಳೆ? ಅವಳಿಗೆ ಏನೇನು ಸವಾಲುಗಳಿರುತ್ತವೆ? ತನ್ನ ಕೆಲಸವನ್ನು ಹೇಗೆ ನಿಭಾಯಿಸುತ್ತಾಳೆ? ಎಂಬುದನ್ನು ನನ್ನ ಪಾತ್ರ ತೋರಿಸುತ್ತದೆ. ಇದು ನನಗಂತೂ ಇದೊಂದು ಚಾಲೆಂಜಿಂಗ್ ಆಗಿರುವಂಥ ಪಾತ್ರ. ಖಡಕ್ ಡೈಲಾಗ್ಸ್ ಜೊತೆಗೆ ಆ್ಯಕ್ಷನ್ಸ್ ಕೂಡ ಈ ಪಾತ್ರದಲ್ಲಿ ನನಗಿದೆ’ ಎಂದು ಪಾತ್ರ ಪರಿಚಯ ಮಾಡಿಕೊಟ್ಟಿದ್ದಾರೆ.

pavana2

‘ಡಿಯರ್ ಹಸ್ಬೆಂಡ್’ ಚಿತ್ರದಲ್ಲಿ ಪಾವನಾ ಅವರ ಪಾತ್ರದ ಬಗ್ಗೆ ಮಾತನಾಡಿರುವ ಚಿತ್ರದ ನಿರ್ದೇಶಕ ಗುರುರಾಜ ಕುಲಕರ್ಣಿ (ನಾಡಗೌಡ), ‘ಇದೊಂದು ತುಂಬ ಪ್ರಮುಖವಾದ ಪಾತ್ರ ಸಾಕಷ್ಟು ಹುಡುಕಾಟದ ನಂತರ ಈ ಪಾತ್ರಕ್ಕೆ ಅಂತಿಮವಾಗಿ ಪಾವನಾ ಅವರನ್ನು ಆಯ್ಕೆ ಮಾಡಿಕೊಂಡಿದ್ದೇವೆ. ಅವರು ಕೂಡ ಖುಷಿಯಿಂದ ಈ ಪಾತ್ರ ಮಾಡಲು ಎಪ್ಪಿಕೊಂಡಿದ್ದಾರೆ. ಈಗಾಗಲೇ ‘ಡಿಯರ್ ಹಲ್ಬೆಂಡ್’ ಚಿತ್ರದ ಒಂದಷ್ಟು ಭಾಗದ ಚಿತ್ರೀಕರಣ ಮಾಡಿ ಮುಗಿಸಿದ್ದೇವೆ. ಮುಂದಿನ ಹಂತದ ಚಿತ್ರೀಕರಣದಲ್ಲಿ ಪಾವನಾ ಗೌಡ ಭಾಗಿಯಾಗಲಿದ್ದಾರೆ. ಈ ಸಿನಿಮಾದ ಮೂಲಕ ಅವರಿಗೆ ಮತ್ತೊಂದು ಇಮೇಜ್ ಬರಬಹುದು. ಅಷ್ಟರ ಮಟ್ಟಿಗೆ ಮಹಿಳಾ ಪ್ರಧಾನ ಪಾತ್ರ ಇದಾಗಿದೆ’ ಎಂದು ವಿವರಣೆ ನೀಡಿದ್ದಾರೆ.

pavana3

ಇನ್ನು ಸಸ್ಪೆನ್ಸ್ ಕಂ ಕ್ರೈಂ-ಥ್ರಿಲ್ಲರ್ ಶೈಲಿಯಲ್ಲಿ ಮೂಡಿಬರುತ್ತಿರುವ ‘ಡಿಯರ್ ಹಸ್ಬೆಂಡ್’ ಚಿತ್ರದಲ್ಲಿ ನಟರಾದ ಸೂರಜ್ ಗೌಡ, ಪ್ರವೀಣ್, ಕುಮಾರ ಬಂಗಾರಪ್ಪ ಮೊದಲಾದ ಕಲಾವಿದರು ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿದ್ದಾರೆ. ಚಿತ್ರದ ಹಾಡುಗಳಿಗೆ ವೀರ್ ಸಮರ್ಥ್ ಸಂಗೀತ ಸಂಯೋಜಿಸುತ್ತಿದ್ದಾರೆ. ಪ್ರಮೋದ ಮರವಂತೆ ಸಾಹಿತ್ಯ, ರಘು ನಿಡುವಳ್ಳಿ ಸಂಭಾಷಣೆ ಚಿತ್ರಕ್ಕಿದೆ. ಪಿಕೆಹೆಚ್ ದಾಸ್ ಛಾಯಾಗ್ರಹಣ, ಬಿ. ಎಸ್. ಕೆಂಪರಾಜ್ ಚಿತ್ರಕ್ಕೆ ಸಂಕಲನ ಕಾರ್ಯ ನಿರ್ವಹಿಸುತ್ತಿದ್ದಾರೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ